2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ.
Image Credit source: vijaykarnataka.com
ಬೆಂಗಳೂರು: 2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ (Board exams) ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ನಿಂದ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮಾ. 27 ರಿಂದ ಏ. 1ರವರೆಗೆ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇನ್ನು 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ತೀರ್ಪು ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದಿರುವ ಹೈಕೋರ್ಟ್ ವಿಭಾಗೀಯ ಪೀಠ, ಈ ಹಿಂದೆ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ. ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿತ್ತು.
ಪಠ್ಯಕ್ರಮದಲ್ಲಿ ಉಲ್ಲೇಖಿಸಿರುವುದನ್ನು ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಪೀಠ ನಿರ್ದೇಶನ ನೀಡಿದೆ. ಜತೆಗೆ, ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನು ಶಾಲೆಗೆ ಮಾತ್ರವೇ ತಲುಪಿಸಬೇಕು ಎಂದೂ ಸೂಚಿಸಿದೆ.
ಇದನ್ನೂ ಓದಿ: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ಮಾರ್ಚ್ 14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
5ನೇ ತರಗತಿ ವೇಳಾಪಟ್ಟಿ
- ಮಾರ್ಚ್ 27 ಸೋಮವಾರ- ಪ್ರಥಮ ಭಾಷೆ, ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ,
ತೆಲಗು, ತಮಿಳು. - ಮಾರ್ಚ್ 28 ಮಂಗಳವಾರ- ದ್ವಿತೀಯ ಭಾಷೆ, ಇಂಗ್ಲಿಷ್, ಕನ್ನಡ.
- ಮಾರ್ಚ್ 29 ಬುಧವಾರ- ಕೋರ್ ವಿಷಯ, ಪರಿಸರ ಅಧ್ಯಯನ.
- ಮಾರ್ಚ್ 30 ಗುರುವಾರ- ಕೋರ್ ವಿಷಯ, ಗಣಿತ.
8ನೇ ತರಗತಿ ವೇಳಾಪಟ್ಟಿ
- ಮಾರ್ಚ್ 27 ಸೋಮವಾರ- ಕನ್ನಡ, ಇಂಗ್ಲಿಷ್, ಇಂಗ್ಲಿಷ್ (NCERT), ಹಿಂದಿ, ಉರ್ದು, ಮರಾಠಿ,
ತೆಲಗು, ತಮಿಳು, ಸಂಸ್ಕೃತ. - ಮಾರ್ಚ್ 28 ಮಂಗಳವಾರ- ದ್ವಿತೀಯ ಭಾಷೆ, ಇಂಗ್ಲಿಷ್, ಕನ್ನಡ.
- ಮಾರ್ಚ್ 29 ಬುಧವಾರ- ಹಿಂದಿ, ಹಿಂದಿ (NCERT), ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಪಿಯನ್
ಉರ್ದು, ಸಂಸ್ಕೃತ, ಕೊಂಕಣಿ, ತುಳು. - ಮಾರ್ಚ್ 30 ಗುರುವಾರ- ಕೋರ್ ವಿಷಯ, ಗಣಿತ.
- ಮಾರ್ಚ್ 31 ಶುಕ್ರವಾರ- ಕೋರ್ ವಿಷಯ, ವಿಜ್ಞಾನ.
- ಏಪ್ರಿಲ್ 01 ಶನಿವಾರ- ಕೋರ್ ವಿಷಯ, ಸಮಾಜ ವಿಜ್ಞಾನ.
ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.
ಇದನ್ನೂ ಓದಿ: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ
ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ. ಈ ಹಿನ್ನೆಲೆ ಏಕಸದಸ್ಯ ಪೀಠ ಮಾ. 10 ರಂದು ತೀರ್ಪು ನೀಡಿತ್ತು.
ಏನಿದು ಪ್ರಕರಣ?
ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿದ್ದ ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವಂತೆ ಕೋರಿತ್ತು. ವಿಚಾರಣೆಯನ್ನು ಪೀಠವು ಮಾರ್ಚ್ 14ಕ್ಕೆ ಮುಂದೂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.