4.3 C
Munich
Tuesday, March 7, 2023

Actress Ragini Dwivedi photos from Bingo Kannada movie | Ragini Dwivedi: ಗನ್​ ಹಿಡಿದು ನಿಂತ ರಾಗಿಣಿ ದ್ವಿವೇದಿ; ‘ಬಿಂಗೊ’ ಚಿತ್ರದಲ್ಲಿ ತುಪ್ಪದ ಬೆಡಗಿಗೆ ಖಡಕ್​ ಲುಕ್​

ಓದಲೇಬೇಕು

Madan Kumar |

Updated on: Mar 07, 2023 | 2:50 PM

Bingo Movie | Sandalwood News: ‘ಬಿಂಗೊ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಅವರ ಪಾತ್ರ ವಿಶೇಷವಾಗಿರಲಿದೆ. ಎರಡು ಶೇಡ್​ಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

Mar 07, 2023 | 2:50 PM

ವಿಭಿನ್ನ ಕಥಾಹಂದರ ಹೊಂದಿರುವ ‘ಬಿಂಗೊ’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್.ಕೆ. ಚಂದನ್ ನಟಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ 2 ಹಂತಗಳ ಚಿತ್ರೀಕರಣ ಮುಗಿದಿದೆ. ಸಿನಿಮಾದ ಕೆಲವು ಫೋಟೋಗಳು ಲಭ್ಯವಾಗಿದೆ.

‘ಬಿಂಗೊ’ ಸಿನಿಮಾಗೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿ ಇರುವ ದೇವರಾಜ್ ಎಸ್ಟೇಟ್​ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್.ಕೆ. ಚಂದನ್ ಜೊತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ.

ರಾಗಿಣಿ ದ್ವಿವೇದಿ ಅವರು ಗನ್​ ಹಿಡಿದು ನಿಂತಿದ್ದಾರೆ. ಅವರ ಪಾತ್ರದ ಲುಕ್​ ರಗಡ್​ ಆಗಿದೆ. ಆ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿದೆ. ರಾಗಿಣಿ ದ್ವಿವೇದಿ ಜೊತೆ ರಕ್ಷಾ ನಿಂಬರ್ಗಿ, ರಾಜೇಶ್ ನಟರಂಗ, ಮಜಾ ಟಾಕೀಸ್ ಪವನ್, ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ನಟಿಸುತ್ತಿದ್ದಾರೆ.

ಈ ಹಿಂದೆ ‘ಶಂಭೋ ಶಿವ ಶಂಕರ’ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ಅವರೀಗ ‘ಬಿಂಗೊ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆರ್.ಕೆ. ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಹಾಗೂ ಆರ್. ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರ ಪಾತ್ರ ವಿಶೇಷವಾಗಿರಲಿದೆ. ಎರಡು ಶೇಡ್​ಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ನಟರಾಜ್ ಮುದ್ದಾಲ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!