8.4 C
Munich
Thursday, March 2, 2023

All Purple Cup Winner In IPL from 2008 to 2022 Here is the full list in Kannada | IPL: ಐಪಿಎಲ್ ಇತಿಹಾಸದಲ್ಲಿ ಯಾವ ತಂಡದ ಬೌಲರ್ ಹೆಚ್ಚು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ ಗೊತ್ತಾ?

ಓದಲೇಬೇಕು

pruthvi Shankar |

Updated on: Mar 02, 2023 | 5:14 PM

IPL: ಐಪಿಎಲ್ ಆರಂಭವಾದಾಗಿನಿಂದಲೂ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಹಾಗೂ ಅತಿ ಹೆಚ್ಚು ರನ್ ಬಾರಿಸಿದ ಆಟಗಾರನಿಗೆ ಪರ್ಪಲ್ ಕ್ಯಾಪ್ ಹಾಗೂ ಆರೆಂಜ್ ಕ್ಯಾಪ್ ನೀಡಲಾಗುತ್ತದೆ.

Mar 02, 2023 | 5:14 PM

ಐಪಿಎಲ್ ಆರಂಭವಾದಾಗಿನಿಂದಲೂ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಹಾಗೂ ಅತಿ ಹೆಚ್ಚು ರನ್ ಬಾರಿಸಿದ ಆಟಗಾರನಿಗೆ ಪರ್ಪಲ್ ಕ್ಯಾಪ್ ಹಾಗೂ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಇದರಡಿಯಲ್ಲಿ ಪ್ರತಿ ಸೀಸನ್​ನಲ್ಲೂ ಒಬ್ಬೊಬ್ಬ ಆಟಗಾರ ಈ ಪ್ರಶಸ್ತಿ ಪಡೆದುಕೊಂಡಿದ್ದಾನೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಐಪಿಎಲ್​ನ ಚೊಚ್ಚಲ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡದ ಬೌಲರ್ ಸೊಹೈಲ್ ತನ್ವೀರ್ ಅತಿ ಹೆಚ್ಚು ಅಂದರೆ 22 ವಿಕೆಟ್‌ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ಗೆದ್ದಿದ್ದರು.

ಐಪಿಎಲ್‌ನ ಎರಡನೇ ಆವೃತ್ತಿಯಲ್ಲಿ ಅಂದರೆ 2009ರಲ್ಲಿ, ಡೆಕ್ಕನ್ ಚಾರ್ಜರ್ಸ್‌ ಪರ ಆಡಿದ್ದ ಎಡಗೈ ವೇಗಿ ಆರ್‌ಪಿ ಸಿಂಗ್ ಅತಿ ಹೆಚ್ಚು 23 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಗೆದ್ದಿದ್ದರು.

ಆ ಬಳಿಕ ಡೆಕ್ಕನ್ ಚಾರ್ಜರ್ಸ್ ತಂಡ ಸತತ ಎರಡನೇ ಬಾರಿಗೆ ಪರ್ಪಲ್ ಕ್ಯಾಪ್ ಗೆದ್ದುಕೊಂಡಿತು. ಇದರಡಿಯಲ್ಲಿ ಎಡಗೈ ಸ್ಪಿನ್ನರ್ ಪ್ರಗ್ಯಾನ್ ಓಜಾ 2010 ರ ಐಪಿಎಲ್‌ನಲ್ಲಿ 21 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಗೆದ್ದಿದ್ದರು.

2011 ರಲ್ಲಿ ಲಸಿತ್ ಮಾಲಿಂಗ 28 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ಗೆದ್ದರು.

2012ರ ಐಪಿಎಲ್‌ನಲ್ಲಿ ಡೆಲ್ಲಿ ಪರ ಕಣಕ್ಕಿಳಿದಿದ್ದ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಮೋರ್ನೆ ಮೊರ್ಕೆಲ್ 25 ವಿಕೆಟ್ ಕಬಳಿಸಿ ಪರ್ಪಲ್ ಕಪ್ ಗೆದ್ದಿದ್ದರು.

ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ಐಪಿಎಲ್​ನಲ್ಲಿ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ.  2013 ಮತ್ತು 2015 ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ಡಿಜೆ ಬ್ರಾವೋ ಕ್ರಮವಾಗಿ 26 ಹಾಗೂ 32 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಗೆದ್ದರು.

ಚೆನ್ನೈ ಸೂಪರ್ ಕಿಂಗ್ಸ್ ಮಧ್ಯಮ ವೇಗಿ ಮೋಹಿತ್ ಶರ್ಮಾ 2014 ರ ಐಪಿಎಲ್‌ನಲ್ಲಿ 23 ವಿಕೆಟ್‌ಗಳೊಂದಿಗೆ ಪರ್ಪಲ್ ಕಪ್ ಗೆದ್ದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದ ಎರಡನೇ ಬೌಲರ್ ಎನಿಸಿಕೊಂಡಿರುವ ಭುವನೇಶ್ವರ್ ಕುಮಾರ್ 2016 ಮತ್ತು 2017ರಲ್ಲಿ ಕ್ರಮವಾಗಿ 23 ಮತ್ತು 26 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಗೆದ್ದಿದ್ದರು.

2018 ರ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಆಂಡ್ರ್ಯೂ ಟೈ 24 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದಿದ್ದರು.

2019 ರ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ ಇಮ್ರಾನ್ ತಾಹಿರ್ 26 ವಿಕೆಟ್‌ಗಳೊಂದಿಗೆ ಪರ್ಪಲ್ ಕಪ್ ಗೆದ್ದಿದ್ದರು.

2020 ರ ಐಪಿಎಲ್​ನಲ್ಲಿ ದೆಹಲಿ ಕ್ಯಾಪಿಟಲ್ಸ್ ಪರ ಆಡಿದ್ದ ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ  30 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯಮ ವೇಗಿ ಹರ್ಷಲ್ ಪಟೇಲ್ 32 ವಿಕೆಟ್ ಪಡೆದು 2021 ರ ಐಪಿಎಲ್‌ನಲ್ಲಿ ಪರ್ಪಲ್ ಕ್ಯಾಪ್ ಗೆದ್ದರು.

ಐಪಿಎಲ್‌ನ ಕೊನೆಯ ಆವೃತ್ತಿಯಲ್ಲಿ ಅಂದರೆ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ 27 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದಿದ್ದರು

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!