3.1 C
Munich
Monday, March 27, 2023

Amruta Fadnavis: Devendra Fadnavis’s wife Amruta files FIR against designer over threat, conspiracy and bribe bid | Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಓದಲೇಬೇಕು

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ಅವರ ದೂರಿನ ಮೇರೆಗೆ ಮುಂಬೈ ಪೊಲೀಸರು ಡಿಸೈನರ್ ಅನಿಷ್ಕಾ ಮತ್ತು ಅವರ ತಂದೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಮೃತ ಫಡ್ನವಿಸ್

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ಅವರ ದೂರಿನ ಮೇರೆಗೆ ಮುಂಬೈ ಪೊಲೀಸರು ಡಿಸೈನರ್ ಅನಿಷ್ಕಾ ಮತ್ತು ಅವರ ತಂದೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಮೃತಾ ಫಡ್ನವಿಸ್ ತನ್ನ ಹೇಳಿಕೆಯಲ್ಲಿ ಅನಿಷ್ಕಾ ಎಂಬ ಡಿಸೈನರ್ ತನಗೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಪಿತೂರಿ ನಡೆಸುತ್ತಿದ್ದಾರೆ ಮತ್ತು ತನಗೆ ಒಂದು ಕೋಟಿ ರೂಪಾಯಿ ಲಂಚ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮೃತಾ ಅವರ ದೂರಿನ ಮೇರೆಗೆ ಮಲಬಾರ್ ಹಿಲ್ ಪೊಲೀಸರು ಐಪಿಸಿ ಸೆಕ್ಷನ್ 120 (ಬಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 8 ಮತ್ತು 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಿಳೆ ಕಳೆದ 16 ತಿಂಗಳಿಂದ ತನ್ನೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣವೊಂದರಲ್ಲಿ ಸಹಾಯ ಮಾಡುವ ಬಗ್ಗೆ ಪದೇ ಪದೇ ಕರೆ ಮಾಡುತ್ತಿದ್ದಳು.

ಫೆಬ್ರವರಿ 18-19 ರಂದು ಅಮೃತಾ ಫಡ್ನವೀಸ್ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ವೀಡಿಯೊ ಕ್ಲಿಪ್‌ಗಳು, ಧ್ವನಿ ಟಿಪ್ಪಣಿಗಳು ಮತ್ತು ಅನೇಕ ಸಂದೇಶಗಳು ಬರಲಾರಂಭಿಸಿದವು, ನಂತರ ಅಮೃತಾ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಅಮೃತಾ ಫಡ್ನವಿಸ್ ಪೊಲೀಸರಿಗೆ ತಿಳಿಸಿದ್ದಾರೆ. ಇದರೊಂದಿಗೆ ಚಾಟ್‌ಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮುಂಬೈ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಬಟ್ಟೆ, ಆಭರಣ, ಚಪ್ಪಲಿ ವಿನ್ಯಾಸ ಮಾಡುವ ಆರೋಪಿ ಮಹಿಳೆಯ ಹೆಸರು ಅನಿಷ್ಕಾ ಎಂದು ಹೇಳಲಾಗುತ್ತಿದೆ.

ಸದ್ಯ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಪೊಲೀಸರು ಡಿಸೈನರ್​ ಅನ್ನು ವಿಚಾರಣೆಗೆ ಕರೆಯಬಹುದು ಎಂದು ಹೇಳಲಾಗುತ್ತಿದೆ.

ಆದರೆ, ಇದುವರೆಗೂ ಈ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ, ದೂರಿನ ಆಧಾರದ ಮೇಲೆ ಹೆಚ್ಚಿನ ತನಿಖೆಯ ನಂತರವೇ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!