ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬವನ್ನು ದೆಹಲಿಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರ ಗಣ್ಯರು ಭಾಗಿಯಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (ಎಡಚಿತ್ರ) ಕನ್ನಡ ಬಾವುಟದ ಸಾಂದರ್ಭಿಕ ಚಿತ್ರ (ಬಲ ಚಿತ್ರ)
LIVE NEWS & UPDATES
-
25 Feb 2023 04:49 PM (IST)
Baarisu Kannada Dim Dimava Live: ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭ ಸಿಎಂ ಬೊಮ್ಮಾಯಿ ಆಗಮನ
ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯಲಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಇಂಧನ ಸಚಿವ ಸುನೀಲ್ ಕುಮಾರ್ ಆಗಮಿಸಿದ್ದಾರೆ.
-
25 Feb 2023 04:27 PM (IST)
Baarisu Kannada Dim Dimava Live: ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಕರ್ನಾಟಕದ ಅದ್ಭುತ ಸಂಸ್ಕೃತಿಯ ಆಚರಣೆ ಎಂದ ನರೇಂದ್ರ ಮೋದಿ
ದೆಹಲಿಯಲ್ಲಿ ನಡೆಯಲಿರುವ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವದ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ಅಮೃತ ಮಹೋತ್ಸವದ ಅಂಗವಾಗಿ ದೆಹಲಿ ಕರ್ನಾಟಕ ಸಂಘ ದೆಹಲಿಯಲ್ಲಿ ಆಯೋಜಿಸಿರುವ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವದಲ್ಲಿ ಇಂದು ಸಂಜೆ 5 ಗಂಟೆಗೆ ಪಾಲ್ಗೊಳ್ಳಲಿದ್ದೇನೆ. ಈ ಕಾರ್ಯಕ್ರಮವು ಕರ್ನಾಟಕದ ಅದ್ಭುತ ಸಂಸ್ಕೃತಿಯ ಆಚರಣೆಯಾಗಿದೆ ಮತ್ತು ರಾಜ್ಯದ ನೃತ್ಯ, ಸಂಗೀತ ಮತ್ತು ನಾಟಕದಂತಹ ಪ್ರಾಕಾರಗಳನ್ನು ಪ್ರದರ್ಶಿಸುತ್ತದೆ” ಎಂದರು.
ಅಮೃತ ಮಹೋತ್ಸವದ ಅಂಗವಾಗಿ ದೆಹಲಿ ಕರ್ನಾಟಕ ಸಂಘ ದೆಹಲಿಯಲ್ಲಿ ಆಯೋಜಿಸಿರುವ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವದಲ್ಲಿ ಇಂದು ಸಂಜೆ 5 ಗಂಟೆಗೆ ಪಾಲ್ಗೊಳ್ಳಲಿದ್ದೇನೆ. ಈ ಕಾರ್ಯಕ್ರಮವು ಕರ್ನಾಟಕದ ಅದ್ಭುತ ಸಂಸ್ಕೃತಿಯ ಆಚರಣೆಯಾಗಿದೆ ಮತ್ತು ರಾಜ್ಯದ ನೃತ್ಯ, ಸಂಗೀತ ಮತ್ತು ನಾಟಕದಂತಹ ಪ್ರಾಕಾರಗಳನ್ನು ಪ್ರದರ್ಶಿಸುತ್ತದೆ.
— Narendra Modi (@narendramodi) February 25, 2023
-
25 Feb 2023 04:21 PM (IST)
Baarisu Kannada Dim Dimava Live: ಕೆಲವೇ ಕ್ಷಣದಲ್ಲಿ ಬಾರಿಸು ಕನ್ನಡ ಡಿಂಡಿಮವಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯಿಂದ ಚಾಲನೆ
ಪ್ರಧಾನಿ ನರೇಂದ್ರ ಮೋದಿ (Narendra Modi)ಯವರ ‘ಏಕ ಭಾರತ ಶ್ರೇಷ್ಠ ಭಾರತ’ದ ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬ (Baarisu Kannada Dim Dimava Cultural Festival)ವನ್ನು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi)ಯವರ ‘ಏಕ ಭಾರತ ಶ್ರೇಷ್ಠ ಭಾರತ’ದ (Ek Bharat Shret Bharat) ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬ (Baarisu Kannada Dim Dimava Cultural Festival)ವನ್ನು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುವೀರ್ ಒಡೆಯರ್ ಭಾಗವಹಿಸಲಿದ್ದಾರೆ. ಈ ಉತ್ಸವದ ಎರಡು ದಿನಗಳ ಆಚರಣೆಯಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶನವಾಗುತ್ತದೆ.
Published On – Feb 25,2023 4:16 PM