8.4 C
Munich
Thursday, March 23, 2023

Basavaraj Bommai And Team Tension After Congress High command Green Signal To Vinay Kulkarni to Contest From Shiggaon | ವಿನಯ್ ಕುಲಕರ್ಣಿ ಹೆಸರು ಕೇಳಿಬರುತ್ತಿದ್ದಂತೆಯೇ ಬದಲಾದ ಶಿಗ್ಗಾಂವಿ ರಾಜಕೀಯ ಚಿತ್ರಣ, ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಸಿಎಂ ಆಪ್ತರು

ಓದಲೇಬೇಕು

2A ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಂಚಮಸಾಲಿ ಸಮುದಾಯದ.ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದರ ಬೆನ್ನಲ್ಲೇ ಶಿಗ್ಗಾಂವಿಯಲ್ಲಿ ವಿನಯ್ ಕುಲಕರ್ಣಿ ಅಖಾಡಕ್ಕಿಳಿಯುತ್ತಾರೆ ಎನ್ನುವ ಸುದ್ದಿ ಕೇಳಿಬಂದಿದ್ದು, ಕ್ಷೇತ್ರದಲ್ಲಿ ಲೆಕ್ಕಾಚಾರಗಳು ಶುರುವಾಗಿವೆ.

ವಿನಯ್ ಕುಲಕರ್ಣಿ, ಬಸವರಾಜ ಬೊಮ್ಮಾಯಿ

ಬೆಂಗಳೂರು/ಹಾವೇರಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಹಲವು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಬಿಜೆಪಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ಭಾರೀ ತಂತ್ರಕ್ಕೆ ರೂಪಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai )ವಿರುದ್ಧ ವಿನಯ್‌ ಕುಲಕರ್ಣಿಯನ್ನು( Vinay Kulkarni) ಕಣಕ್ಕಿಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ತಿಳಿದುಬಂದಿದೆ. ಶಿಗ್ಗಾಂವಿ(Shiggaon) ಕ್ಷೇತ್ರದಲ್ಲಿ ಪಂಚಮಸಾಲಿ ಮತಗಳು ಹೆಚ್ಚಿವೆ. ಹೀಗಾಗಿ ಕಾಂಗ್ರೆಸ್​ ಪಂಚಮಸಾಲಿ ಸಮುದಾಯದ ನಾಯಕ ವಿನಯ್ ಕುಲಕರ್ಣಿ ಅವರನ್ನು ಕಣಕ್ಕಿಳಿಸುವ ಪ್ಲಾನ್​ ಮಾಡಿದೆ. ವಿನಯರ್ ಕುಲಕರ್ಣಿ ಹೆಸರು ಹೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿಯಲ್ಲಿ ರಾಜಕೀಯ ಚಿತ್ರಣ ಬದಲಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರಗಳು ನಡೆದಿವೆ. ಅದರಲ್ಲು ಸಿಎಂ ಆಪ್ತರು ಶಿಗ್ಗಾಂವಿ ಕ್ಷೇತ್ರದಲ್ಲಿ ಲಾಭ-ನಷ್ಟದ ಬಗ್ಗೆ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್

ಹೌದು..ಕ್ಷೇತ್ರದಲ್ಲಿ ಪಂಚಮಸಾಲಿ ಹಾಗೂ ಮುಸ್ಲಿಂ ಮತಗಳು ನಿರ್ಣಾಯಕವಾಗಿವೆ. ಪಂಚಮಸಾಲಿ ಸಮಾಜದ 65 ಸಾವಿರ ಮತಗಳಿದ್ದರೆ, 50 ಸಾವಿರ ಮುಸ್ಲಿಂ ಮತಗಳಿವೆ. ಎಸ್ಸಿ 20 ಸಾವಿರ, ಎಸ್ಟಿ17 ಸಾವಿರ, ಕುರುಬ 20 ಸಾವಿರ ಮತಗಳಿವೆ. 2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ಈ ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕದಲ್ಲಿ ಬಿಜೆಪಿ ನಾಯಕರು ಇದ್ದಾರೆ. ಇನ್ನು ವಿನಯ್ ಕುಲಕರ್ಣಿ ಶಿಗ್ಗಾಂವಿಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಕೇಳುತ್ತಿದ್ದಂತೆಯೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪ್ತರು ಲಾಭ-ನಷ್ಟದ ಲೆಕ್ಕಚಾರಗಳನ್ನು ಹಾಕುತ್ತಿದ್ದಾರೆ. ವಿನಯ್ ಕುಲಕರ್ಣಿ ಕಾಂಗ್ರೆಸ್ ಅಭ್ಯರ್ಥಿಯಾದರೆ ಪಂಚಮಸಾಲಿ ಮತಗಳು ಕಾಂಗ್ರೆಸ್​ ಪಾಲಾಗುವ ವಾಲುವ ಭಯ ಶುರುವಾಗಿದೆ. ಇನ್ನು ಅಜ್ಜಂಪೀರ್ ಖಾದ್ರಿ ಅಭ್ಯರ್ಥಿಯಾದರೆ ಕ್ಷೇತ್ರದ ಮುಸ್ಲಿಂ ಮತಗಳು ಸಂಪೂರ್ಣ ಖಾದ್ರಿ ಪಾಲಾಗಲಿವೆ.

ಖಾದ್ರಿಗೆ ಬಿಟ್ಟು ವಿನಯ್​ ಕುಲಕರ್ಣಿ ಅವರಿಗೆ ಕೈ ಟಿಕೆಟ್‌ ನೀಡಿದರೆ ಮುಸ್ಲಿಂ ಮತಗಳು ಕೈತಪ್ಪುವ ಆತಂಕ ಕೂಡ ಕಾಂಗ್ರೆಸ್​ ನಾಯಕರಲ್ಲಿದೆ. ಕೈ ಟಿಕೆಟ್‌ ಸಿಗದಿದ್ದರೆ ಜೆಡಿಎಸ್‌ ಅಥವಾ ಪಕ್ಷೇತರರಾಗಿ ಸ್ಪರ್ಧಿಸುವ ಇರಾದೆಯೂ ಅವರಿಗಿದ್ದು, ಇದು ಕಾಂಗ್ರೆಸ್ಸಿಗೇ ಹೊಡೆತ. ಕಾಂಗ್ರೆಸ್‌ನ ಒಳಜಗಳ ಬೊಮ್ಮಾಯಿಗೆ ವರವಾಗಿ ಪರಿಣಮಿಸಲಿದೆ. ಒಂದು ವೇಳೆ ಕುಲಕರ್ಣಿ ಅಭ್ಯರ್ಥಿಯಾದರೆ ಮುಸ್ಲಿಂ ಮತಗಳು ಬೊಮ್ಮಾಯಿ‌ ಪರ ಬೀಳುವ ವಿಶ್ವಾಸ ಹೊಂದಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರ ಪ್ರತಿಕೂಲವಾಗುವ ಆತಂಕವನ್ನೂ ಸಿಎಂ ಬಸವರಾಜ ಬೊಮ್ಮಾಯಿಗೆ ಇದೆ. ಈ ಹಿನ್ನೆಲೆಯಲ್ಲಿಯೇ ನಾಟಕ ಆಯೋಜನೆಗೆ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ವೀರ ರಾಣಿ ಕಿತ್ತೂರು ಚೆನ್ಮಮ್ಮ ನಾಟಕ ಆಯೋಜನೆ ಮಾಡಲಾಗಿದೆ.

ರಾಜ್ಯಕ್ಕೆ ಇಬ್ಬರು ಸಿಎಂಗಳನ್ನು ನೀಡಿದ ಹೆಗ್ಗಳಿಕೆ ಶಿಗ್ಗಾಂವಿ-ಸವಣೂರು ಕ್ಷೇತ್ರಕ್ಕಿದೆ. ಎಸ್‌.ನಿಜಲಿಂಗಪ್ಪನವರು ಅವಿರೋಧವಾಗಿ ಆಯ್ಕೆಯಾಗಿದ್ದರೆ, ಬೊಮ್ಮಾಯಿ ಮೂರು ಬಾರಿ ಇದೇ ಕ್ಷೇತ್ರದಿಂದ ಆಯ್ಕೆಯಾಗಿ ಈಗ ಸಿಎಂ ಆಗಿದ್ದಾರೆ. 2008ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಶಿಗ್ಗಾಂವಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಬೊಮ್ಮಾಯಿಗೆ ಕಾಂಗ್ರೆಸ್‌ನ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ಪೈಪೋಟಿ ನೀಡಿದ್ದರು. ಬೊಮ್ಮಾಯಿ ಅನಾಯಾಸವಾಗಿ ಗೆಲುವು ಸಾಧಿಸಿ, ಯಡಿಯೂರಪ್ಪ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾದರು. 2013ರಲ್ಲಿ ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಬಿಜೆಪಿಯಲ್ಲೇ ಉಳಿದ ಬೊಮ್ಮಾಯಿ, ಕಾಂಗ್ರೆಸ್‌ನ ಖಾದ್ರಿ ಎದುರು ಗೆದ್ದರು. 2018ರಲ್ಲಿ ಮತ್ತೆ ಬಿಜೆಪಿಯಿಂದ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಖಾದ್ರಿ ಕಣಕ್ಕಿಳಿದಿದ್ದರು. ನೇರ ಪೈಪೋಟಿ ಇತ್ತಾದರೂ ಬೊಮ್ಮಾಯಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು. ಆದ್ರೆ, ಈ ಬಾರಿ ಚುನಾವಣೆಯಲ್ಲಿ ವಿನಯ್​ ಕುಲಕರ್ಣಿ ಹೆಸರು ಕೇಳಿಬಂದಿದ್ದರಿಂದ ಪಂಚಮಸಾಲಿ ಮತಗಳು ಕೈಕೊಡುವ ಆತಂಕದಲ್ಲಿ ಸಿಎಂ ಇದ್ದಾರೆ.

ಒಟ್ಟಿನಲ್ಲಿ ವಿನಯ್​ ಕುಲಕರ್ಣಿ ಹೆಸರು ಕೇಳಿಬರುತ್ತಿದ್ದಂತೆಯೇ ಶಿಗ್ಗಾಂವಿ ಕ್ಷೇತ್ರದಲ್ಲಿ ಲಾಭ-ನಷ್ಟದ ಲೆಕ್ಕಾಚಾರಗಳು ಶುರುವಾಗಿವೆ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!