ರೋಹಿಣಿ ಸಿಂಧೂರಿ ವಿರುದ್ಧದ ಮಾನಹಾನಿಕರ ಹೇಳಿಕೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದರಿಂದ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ.

ರೋಹಿಣಿ ಸಿಂಧೂರಿ , ಡಿ. ರೂಪಾ ಮೌದ್ಗಿಲ್
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri) ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ TV9 ಹೊರತುಪಡಿಸಿ ಐಪಿಎಸ್ ಅಧಿಕಾರಿ ಡಿ.ರೂಪಾ (D Roopa Moudgil) ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಇಂದು(ಫೆಬ್ರುವರಿ 23) ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ಆದಶ ಹೊರಡಿಸಿದೆ. Caveat ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಿವಿ9 ಹೊರತುಪಡಿಸಿ ರೂಪಾ ಸೇರಿ ಇನ್ನುಳಿದಂತೆ ಎಲ್ಲಾ ಪ್ರತಿವಾದಿಗಳಿಗೆ ರೋಹಿಣಿ ವಿರುದ್ಧ ಮಾನಹಾನಿಕರ, ಆಧಾರರಹಿತ ಹೇಳಿಕೆ ನೀಡದಂತೆ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದರಿಂದ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ.