4.6 C
Munich
Tuesday, March 7, 2023

Bengaluru Traffic Police Drink and Drive awareness campaign traffic fine rebate collection details in Kannada | Bengaluru Traffic Police: ಡ್ರಿಂಕ್ ಆ್ಯಂಡ್ ಡ್ರೈವ್ ತಪ್ಪಿಸಲು ಸಂಚಾರಿ ಪೊಲೀಸರು ಏನು ಮಾಡುತ್ತಿದ್ದಾರೆ ನೋಡಿ

ಓದಲೇಬೇಕು

ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ತಪ್ಪಿಸುವುದಕ್ಕಾಗಿ ಜಾಗೃತಿ ಮೂಡಿಸಲು ಬೆಂಗಳೂರು ಸಂಚಾರ ಪೊಲೀಸರು ವಿನೂತನ ಅಭಿಯಾನವೊಂದನ್ನು ಹಮ್ಮಿಕೊಂಡಿದ್ದಾರೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಈ ವಿಶೇಷ ಅಭಿಯಾನ ನಡೆಸುತ್ತಿದ್ದು, ಮೆಜೆಸ್ಟಿಕ್ ಬಳಿ ವಾಹನ ಸವಾರರಿಂದ ಸಹಿ ಪಡೆಯುತ್ತಿದ್ದಾರೆ.

ಬೆಂಗಳೂರು: ಡ್ರಿಂಕ್ ಆ್ಯಂಡ್ ಡ್ರೈವ್ (Drink and Drive) ಪ್ರಕರಣಗಳನ್ನು ತಪ್ಪಿಸುವುದಕ್ಕಾಗಿ ಜಾಗೃತಿ ಮೂಡಿಸಲು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ವಿನೂತನ ಅಭಿಯಾನವೊಂದನ್ನು ಹಮ್ಮಿಕೊಂಡಿದ್ದಾರೆ. ದಂಡ ವಿಧಿಸುವುದಕ್ಕೂ ಮೊದಲು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದನ್ನು ತಪ್ಪಿಸಲು ಸಂಚಾರಿ ಪೊಲೀಸರು ವಾಹನ ಸವಾರರಿಂದ ಸಹಿ ಪಡೆಯುವ ಮೂಲಕ ಅಭಿಯಾನ ಆರಂಭಿಸಿದ್ದಾರೆ. ಇದರಂತೆ ಸವಾರರು, ‘ಇನ್ನು ಮದ್ಯಪಾನ ಮಾಡಿ ವಾಹನ‌ಚಾಲನೆ ಮಾಡುವುದಿಲ್ಲ’ ಎಂದು‌ ಸಹಿ ಹಾಕಿ ಸಂಚಾರಿ ಪೊಲೀಸರಿಗೆ ನೀಡಬೇಕಾಗುತ್ತದೆ. ಈ ಸಹಿ ಪಡೆಯುವ ವೇಳೆ, ಕುಡಿದು ವಾಹನ ಚಲಾಯಿಸುವುದರಿಂದ ಆಗುವ ಅವಘಡಗಳ ಬಗ್ಗೆ ಪೊಲೀಸರು ಸವಾರರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಈ ವಿಶೇಷ ಅಭಿಯಾನ ನಡೆಸುತ್ತಿದ್ದು, ಮೆಜೆಸ್ಟಿಕ್ ಬಳಿ ವಾಹನ ಸವಾರರಿಂದ ಸಹಿ ಪಡೆಯುತ್ತಿದ್ದಾರೆ.

ಮೂರು ದಿನಗಳಲ್ಲಿ 2.68 ಕೋಟಿ ರೂಪಾಯಿಗೂ ಹೆಚ್ಚು ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಶೇ 50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಮೊದಲ 4 ದಿನಗಳಲ್ಲಿ 2,68,16,500 ರೂ. ದಂಡ ಸಂಗ್ರಹವಾಗಿದೆ. ಕಳೆದ 4 ದಿನಗಳಲ್ಲಿ 93,532 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Traffic: ಟ್ರಾಫಿಕ್​ನಲ್ಲೇ ಅತಿಹೆಚ್ಚು ಸಮಯ; ನಿಧಾನಗತಿ ನಗರಗಳ ಸಾಲಿನಲ್ಲಿ ಬೆಂಗಳೂರು

11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಸರ್ಕಾರವು ಆದೇಶದಲ್ಲಿ ತಿಳಿಸಿತ್ತು. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿತ್ತು.

ನಾಲ್ಕು ಸಂಚಾರಿ ಪೊಲೀಸ್ ಠಾಣೆಗಳ ಉದ್ಘಾಟನೆ

ಬೆಂಗಳೂರಿನ ತಲಘಟ್ಟಪುರ, ಬೆಳ್ಳಂದೂರು, ಮಹದೇವಪುರ ಹಾಗೂ ಹೆಣ್ಣೂರುಗಳಲ್ಲಿ ನಾಲ್ಕು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಗಳವಾರ ಉದ್ಘಾಟಿಸಲಾಯಿತು. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗೃಹ ಇಲಾಖೆಯ ಸಚಿವ ಆರಗ ಜ್ಞಾನೇಂದ್ರ, ಮಹದೇವಪುರ ಶಾಸಕ ಲಿಂಬಾವಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ; ಆರಗ ಜ್ಞಾನೇಂದ್ರ

ಬೆಂಗಳೂರು ಮಹಾನಗರ ವೇಗವಾಗಿ ಬೆಳೆಯುತ್ತಿದೆ. ಅನ್ಯ ರಾಜ್ಯ, ವಿದೇಶದಿಂದ ಬಂದು ನೆಲೆಸುವವರು ಹೆಚ್ಚಿದ್ದಾರೆ. ಪ್ರತಿ ದಿನ 2-3 ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಬೇಕಿದೆ. ಸಾರ್ವಜನಿಕರು ಕೂಡ ಪೊಲೀಸರಿಗೆ ಸಹಕರಿಸಬೇಕಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. ಜನರಿಗೆ ಒಳ್ಳೆಯ ಸೌಲಭ್ಯ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. 200 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. 8 ವಿಧಿವಿಜ್ಞಾನ ಪ್ರಯೋಗಾಲಯಗಳ ನಿರ್ಮಾಣ ಹಾಗೂ ಸುಮಾರು 415 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ ಮಾಡಲಾಗುತ್ತಿದೆ. ವಿದೇಶಿ ಅಗ್ನಿಶಾಮಕ ವಾಹನಗಳನ್ನು ಖರೀದಿಸಿ ನೀಡಲಾಗಿದೆ. ಇದರಿಂದ ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ನಂದಿಸಲು ಅನುಕೂಲವಾಗಲಿದೆ. ಬೆಂಗಳೂರಿ‌ನಲ್ಲಿ 7 ಸಾವಿರ ಸಿಸಿಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!