15.6 C
Munich
Wednesday, March 22, 2023

BJP Narional president’s chikkaballapura Kodagu Mangaluru tour canceled JP Nadda to visit Tumakuru Chitradurga on March 17th and 18th details in kannada | ಜೆಪಿ ನಡ್ಡಾ ಚಿಕ್ಕಬಳ್ಳಾಪುರ, ಕೊಡಗು, ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ರದ್ದು; ತುಮಕೂರು, ಚಿತ್ರದುರ್ಗಕ್ಕೆ ಶಿಫ್ಟ್

ಓದಲೇಬೇಕು

ಮಾರ್ಚ್ 17, 18ರಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಗದಿಯಾಗಿದ್ದ ಜೆಪಿ ನಡ್ಡಾ ಪ್ರವಾಸ ರದ್ದುಗೊಂಡಿದ್ದು, ಆ ಎರಡು ದಿನಗಳಲ್ಲಿ ತುಮಕೂರು, ಚಿತ್ರದುರ್ಗ ಪ್ರವಾಸ ಕೈಗೊಳ್ಳಲಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ರಥ ಯಾತ್ರೆ ಆರಂಭಿಸಲಾಗಿದೆ. ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಕೇಂದ್ರ ಹಾಗೂ ರಾಜ್ಯ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಇಡುತ್ತಿದೆ. ದಕ್ಷಿಣ ಭಾರತದಲ್ಲಿ ಏಕೈಕ ರಾಜ್ಯದಲ್ಲಿ ಅರಳಿದ ಕಮಲವನ್ನು ಕಾಪಾಡಲು ಕೇಂದ್ರ ಬಿಜೆಪಿ ನಾಯಕರು ರಾಜ್ಯಕ್ಕೆ ದಂಡೆತ್ತಿ ಬರುತ್ತಿದ್ದು, ಇದರ ಭಾಗವಾಗಿ ಮಾರ್ಚ್ 17, 18ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ (J. P. Nadda) ಭೇಟಿ ನೀಡಲಿದ್ದಾರೆ. ಆದರೆ ಮಾರ್ಚ್ ಅಂತ್ಯದಲ್ಲಿ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕರೆಸಲು ಸಿದ್ಧತೆ ನಡೆಸಲಾಗುತ್ತಿರುವ ಹಿನ್ನಲೆ ನಿಗದಿಯಾಗಿದ್ದ ನಡ್ಡಾ ಅವರ ಚಿಕ್ಕಬಳ್ಳಾಪುರ, ಕೊಡಗು, ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ರದ್ದುಗೊಂಡಿದ್ದು, ಆ ಎರಡು ದಿನಗಳಲ್ಲಿ ತುಮಕೂರು, ಚಿತ್ರದುರ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಹಾಗೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರಿನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಚುನಾವಣೆ ಮುಕ್ತಾಯದವರೆಗೆ ರಾಜ್ಯಕ್ಕೆ ಪ್ರತಿ ತಿಂಗಳು ಮೋದಿಯವರು ಬರುತ್ತಾರೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿದ್ದರು. ಅದರಂತೆ ಪ್ರಧಾನಿ ಮೋದಿ ಕಳೆದ 2-3 ತಿಂಗಳಲ್ಲಿ ಈಗಾಗಲೆ 5ಕ್ಕೂ ಹೆಚ್ಚು ಬಾರಿ ರಾಜ್ಯ ಪ್ರವಾಸ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಬರಲಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಭೇಟಿ ಬಹುತೇಕ ಕನ್ಫರ್ಮ್​​ ಆಗಿದೆ ಎಂದು ಈ ಹಿಂದೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದರು.

ಇದನ್ನೂ ಓದಿ: Narendra Modi: ಮಾರ್ಚ್ 25ರಂದು ಮತ್ತೆ ರಾಜ್ಯಕ್ಕೆ ಮೋದಿ; ದಾವಣಗೆರೆಯಲ್ಲಿ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ

ಒಂದೂವರೆ ಕೋಟಿ ಆಯುಷ್ಮಾನ್ ಕಾರ್ಡ್​​​ ವಿತರಣೆ‌ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಇದೇ ವೇಳೆ 22 ಸಾವಿರ ಉಚಿತ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ಮೆಡಿಕಲ್ ಕಾಲೇಜು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಹೀಗೆ ಒಟ್ಟು ಮೂರು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ಭೇಟಿಯ ದಿನಾಂಕವನ್ನು ಅಧಿಕೃತಗೊಳಿಸಬೇಕಿದೆ ಎಂದಿದ್ದರು.

ಬಿಜೆಪಿ ಚಾಣಕ್ಯ ಎಂದೇ ಖ್ಯಾತಿ ಪಡೆದಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಾರ್ಚ್ 24ರಂದು ರಾಜ್ಯಕ್ಕೆ ಆಗಮಿಸಲಿದ್ದು, ಬೀದರ್​ಗೆ ಭೇಟಿ ಕೊಡಲಿದ್ದಾರೆ. ಮರುದಿನ, ಅಂದರೆ ಮಾರ್ಚ್ 25ರಂದು ದಾವಣಗೆರೆಗೆ ಮೋದಿ ಆಗಮಿಸಲಿದ್ದಾರೆ. ಇಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವಾದ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ಸಮಾರೋಪ ಸಮಾರಂಭ ನಡೆಯಲಿದ್ದು, ಸುಮಾರು 400 ಎಕರೆ ಪ್ರದೇಶದಲ್ಲಿ 10 ಲಕ್ಷ ಜನ ಸೇರಿಸುವ ಗುರಿಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ. ಸದ್ಯ ಸಮಾವೇಶಕ್ಕೆ ಭರ್ಜರಿಯಾಗಿ ಸಿದ್ಧತೆ ನಡೆಯುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!