9.4 C
Munich
Monday, March 13, 2023

Bribery case: Lokayukta tries to open the mouth MLA Madal Virupakshappa for third day | ಲಂಚ ಪ್ರಕರಣ: ಮೂರನೇ ದಿನವೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಾಯಿಬಿಡಿಸಲು ಲೋಕಾಯುಕ್ತ ಯತ್ನ

ಓದಲೇಬೇಕು

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ನಗದು ಪತ್ತೆ ಪ್ರಕರಣ ಸಂಬಂಧಿಸಿದಂತೆ ಮೂರನೇ ಬಾರಿ ಲೋಕಾಯುಕ್ತ ಅಧಿಕಾರಿಗಳಿಂದ ಶಾಸಕ ಮಾಡಾಳ್ ವಿಚಾರಣೆ ಅಂತ್ಯವಾಗಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ

Image Credit source: indianexpress.com

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪುತ್ರನ ಮನೆಯಲ್ಲಿ ಕೋಟಿ ಕೋಟಿ ನಗದು ಪತ್ತೆ ಪ್ರಕರಣ ಸಂಬಂಧಿಸಿದಂತೆ ಮೂರನೇ ಬಾರಿ ಲೋಕಾಯುಕ್ತ ಅಧಿಕಾರಿಗಳಿಂದ ಶಾಸಕ ಮಾಡಾಳ್ ವಿಚಾರಣೆ ಅಂತ್ಯವಾಗಿದೆ. ವಿಚಾರಣೆ ಮುಗಿಸಿ ಲೋಕಾಯುಕ್ತ ಕಚೇರಿಯಿಂದ ಮಾಡಾಳ್‌ ವಾಪಸ್​ ಆಗಿದ್ದು, ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ಮಾಡಾಳ್, ಪುತ್ರ​ ಪ್ರಶಾಂತ್‌ನನ್ನು ಇಂದು 4 ಗಂಟೆ 30 ನಿಮಿಷವರೆಗೆ ಕೇಸ್‌ನ ತನಿಖಾಧಿಕಾರಿ, ಡಿವೈಎಸ್‌ಪಿ ಆಂಥೋನಿ ಜಾನ್​ರಿಂದ ವಿಚಾರಣೆ ಮಾಡಲಾಗಿದೆ. ಸದ್ಯ ಮಾಡಾಳ್ ಪುತ್ರ ಪ್ರಶಾಂತ್‌ ಲೋಕಾಯುಕ್ತ ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ಮಾಧ್ಯಮ ಕಣ್ತಪ್ಪಿಸಿ ಹೋಗಲು ಮಾಡಾಳ್ ಫ್ಲಾನ್​ ಮಾಡಿದ್ದು, ಇದಕ್ಕಾಗಿ ಕಾರನ್ನ ಲೋಕಾಯುಕ್ತ ಕಚೇರಿ ಮುಂಭಾಗ ಕರೆಸಿಕೊಂಡಿದ್ದಾರೆ. ಕೂಡಲೇ ಅಲರ್ಟ್ ಆದ ಬಂದೂಬಸ್ತ್ ಪೊಲೀಸರು ಕಾರನ್ನು ಕಚೇರಿ ಆವರಣದಿಂದ ಹೊರ ಕಳಿಸಿದ್ದಾರೆ. ಅನಿರ್ವಾಯವಾಗಿ ಮಾಧ್ಯಮ ಕ್ಯಾಮೆರಾಗಳ ಮುಂದೆ ಮಾಡಾಳ್​ ಕಾರು ಏರಿ ಹೊರಟು ಹೋದರು.

ಇದನ್ನೂ ಓದಿ: Madal Virupakshappa: ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ನೋಟಿಸ್​

ಮಾಡಾಳ್​ ಪ್ರಶಾಂತ್​ ವಿರುದ್ಧ ಪ್ರತ್ಯೇಕ ಮತ್ತೆರಡು ಕೇಸ್ ದಾಖಲು

ಮಾರ್ಚ್ 2ರಂದು ಮಾಡಾಳ್​ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. ಮಾರ್ಚ್​​ 16ರಂದು ಪ್ರಶಾಂತ್ ಸೇರಿ‌ ಐವರನ್ನು ಲೋಕಯುಕ್ತ ವಶಕ್ಕೆ ಪಡೆದುಕೊಂಡಿತ್ತು. ಕ್ರೆಸೆಂಟ್ ರಸ್ತೆಯ ಖಾಸಗಿ ಕಚೇರಿಯಲ್ಲಿ ಮತ್ತೆ 1.60 ಲಕ್ಷ ರೂ. ಪತ್ತೆಯಾಗಿತ್ತು. ಕರ್ನಾಟಕ ಆರೋಮಾಸ್ ಕಂಪೆನಿಯ ಆಲ್ಬರ್ಟ್ ನಿಕೋಲಸ್ ಬಳಿ 45 ಲಕ್ಷ ರೂ. ಮತ್ತು ಗಂಗಾಧರ್ ಬಳಿ 45 ಲಕ್ಷ ರೂ. ಪತ್ತೆಯಾದ ಹಿನ್ನಲೆ ಪ್ರತ್ಯೇಕ ಕೇಸ್ ದಾಖಲಿಸಲಾಗಿದೆ. ಮತ್ತೊಂದೆಡೆ ಪ್ರಶಾಂತ್ ಮಾಡಾಳು ಸಂಬಂಧಿ ಸುರೇಂದ್ರ ಬಳಿ 60 ಲಕ್ಷ ಪತ್ತೆಯಾಗಿತ್ತು. ಹಾಗಾಗಿ ಪ್ರತ್ಯೇಕ ಮತ್ತೆರಡು ಕೇಸ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇನ್ನು ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರು ಮಾ. 09ರ ಸಂಜೆ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಸುದೀರ್ಘ ವಿಚಾರಣೆ ಎದುರಿಸಿದ್ದರು. ವಕೀಲರು, ಪೊಲೀಸರೊಂದಿಗೆ ಕಚೇರಿಗೆ ಹಾಜರಾದ ಮಾಡಾಳ್ ಅವರನ್ನು ಲೋಕಾಯುಕ್ತ ತನಿಖಾಧಿಕಾರಿ ಆಂಥೋನಿ ಜಾನ್​ ಲೋಕಾಯುಕ್ತ ಕಚೇರಿಯ 3ನೇ ಮಹಡಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ರಾತ್ರಿ 9.30ರ ಸುಮಾರಿಗೆ ವಿಚಾರಣೆ ಮುಕ್ತಾಯಗೊಂಡಿದ್ದು, ಲೋಕಾಯುಕ್ತ ಕಚೇರಿಯಿಂದ ಮಾಡಾಳ್ ನಿರ್ಗಮಿಸಿದ್ದರು.

ನನ್ನನ್ನು ಸಿಲುಕಿಸಲಾಗಿದೆ: ಮಾಡಾಳ್

ಭ್ರಷ್ಟಾಚಾರ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದ್ದ ಮಾಡಾಳ್, ಉದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪರಾದರ್ಶಕವಾಗಿದೆ ನಡೆದಿದೆ. ಯಾವ ಸಿಬ್ಬಂದಿಗೂ ಹಣಕ್ಕೆ ಬೇಡಿಕೆ ಇಟ್ಟಿಲ್ಲ. ಲೋಕಾಯುಕ್ತ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ತನಿಖಾ ಹಂತದಲ್ಲಿ ಯಾವುದನ್ನು ಪ್ರಸ್ತಾಪಿಸಲ್ಲ. ಸದ್ಯ ಲೋಕಾಯುಕ್ತ ಪೊಲೀಸರು ಮತ್ತೆ ಬರಲು ಹೇಳಿಲ್ಲ. ಮತ್ತೆ ಕರೆದಾಗ ವಿಚಾರಣೆ ಹಾಜರಾಗುತ್ತೇನೆ. ಮಾಧ್ಯಮಗಳು ಪ್ರಶ್ನಿಸಿದ್ದರಿಂದ ಒತ್ತಡದಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಾರೋ ಬಂದು ಮಗನ ಕೈಯಲ್ಲಿ ಹಣ ಇಟ್ಟು ಹೋದರು; ಮಾಡಾಳ್ ವಿರೂಪಾಕ್ಷಪ್ಪ

ಭಾರೀ ಅವ್ಯವಹಾರ

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿದ್ದು, ಕಳೆದ ವಾರ ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿದ್ದು, ಕೋಟ್ಯಂತರ ರೂ. ನಗದು, ಚಿನ್ನಾಭರಣ ದೊರೆತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!