ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸುವ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟಿಸಿದೆ.
ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority)ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test ) ದಿನಾಂಕ ಪ್ರಕಟವಾಗಿದೆ. ಇದೇ ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯು ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2022-2023ನೇ ಸಾಲಿನ ವೇಳಾಪಟ್ಟಿ ಪ್ರಕಟ
ಇದೇ ಮಾರ್ಚ್ 9 ರಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (Second PUC Exam) ನಡೆಯಲಿವೆ. ಇದಾದ ಬಳಿಕ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆ ಇರಲಿದೆ.
ಪಿಯುಸಿ ತೇರ್ಗಡೆಯ ನಂತರ ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕು. ಈ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ಕೋರ್ಸ್‌ಗಳ ಕಾಲೇಜು ಸೀಟು ಹಂಚಿಕೆಯಾಗಲಿದೆ.
ಇನ್ನಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ