3.9 C
Munich
Wednesday, March 29, 2023

Chhattisgarh Accident : Truck collided with pickup, 11 people died in a horrific accident, more than 10 injured | Chhattisgarh Road Accident: ಛತ್ತೀಸ್​ಗಢದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಮಕ್ಕಳು ಸೇರಿ 11 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ಓದಲೇಬೇಕು

ಛತ್ತೀಸ್​ಗಢದಲ್ಲಿ ಪಿಕಪ್​ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಛತ್ತೀಸ್​ಗಢದಲ್ಲಿ ಪಿಕಪ್​ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಭಟಪರದ ಎಸ್‌ಡಿಒಪಿ ಸಿದ್ಧಾರ್ಥ್ ಬಾಘೇಲ್ ಈ ಮಾಹಿತಿ ನೀಡಿದ್ದಾರೆ. ಬಲೋದಬಜಾರ್-ಭಟಪರಾ ರಸ್ತೆಯ ಭಟಪರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಮಾರಿಯಾ ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಹನ್ನೆರಡು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದ ನಿವಾಸಿಗಳಾದ ಸಂತ್ರಸ್ತರು ಅರ್ಜುನಿ ಪ್ರದೇಶದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ:ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮೃತರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಬಲೋಡಾಬಜಾರ್‌ನ ಅರ್ಜುನಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ವೇಗವಾಗಿ ಬಂದ ಟ್ರಕ್ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ನೋವಿನ ಅಪಘಾತ ಸಂಭವಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ 11 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!