ಚಿತ್ರದುರ್ಗದಲ್ಲಿ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಪ್ರವೇಶ ನಿರ್ಬಂಧಿಸಿ ಡಿಸಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.
ಸಿಎಂ ಕಾರ್ಯಕ್ರಮಕ್ಕೆ ಸಿದ್ಧವಾಗುತ್ತಿರುವ ವೇದಿಕೆ
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಇಂದು ಚಿತ್ರದುರ್ಗ ನಗರದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಪ್ರವೇಶ ನಿರ್ಬಂಧಿಸಿ ಡಿಸಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ. ಸರ್ಕಾರಿ, ಖಾಸಗಿ ಬಸ್, ಭಾರಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ್ದು ವಾಹನ ಸಂಚಾರ ಮಾರ್ಗ ಬದಲಾಯಿಸಿ ಚಿತ್ರದುರ್ಗ ನಗರದ ಬೈಪಾಸ್ ರಸ್ತೆ ಮೂಲಕ ಸಂಚರಿಸಲು ಸೂಚನೆ ನೀಡಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ