Manipur: ಹಿಂಸಾಚಾರ ಪೀಡಿತ ಮಣಿಪುರ ಸಹಜ ಸ್ಥಿತಿಗೆ; ಕರ್ಫ್ಯೂ ಸಡಿಲಿಕೆ | Curfew relaxed situation across violence hit Manipur is improving

Manipur: ಹಿಂಸಾಚಾರ ಪೀಡಿತ ಮಣಿಪುರ ಸಹಜ ಸ್ಥಿತಿಗೆ; ಕರ್ಫ್ಯೂ ಸಡಿಲಿಕೆ

ಜ್ಯದಾದ್ಯಂತ ಪರಿಸ್ಥಿತಿ ಸುಧಾರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಹಿಂಸಾಚಾರದ ಬಗ್ಗೆ ವರದಿ ಆಗಿಲ್ಲ. ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವದಲ್ಲಿ ಇಂದು ಮುಂಜಾನೆ 5 ಗಂಟೆಯಿಂದ ನಾಲ್ಕು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿದೆ

ಹಿಂಸಾಚಾರ ಪೀಡಿತ ಮಣಿಪುರದಾದ್ಯಂತ (Manipur) ಪರಿಸ್ಥಿತಿ ಸುಧಾರಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆದಿರುವುದಾಗಿ ವರದಿ ಆಗಿಲ್ಲ. ಎಲ್ಲಾ 11 ಜಿಲ್ಲೆಗಳಲ್ಲಿ ಕರ್ಫ್ಯೂ (Curfew) ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈಶಾನ್ಯ ರಾಜ್ಯವನ್ನು ಬೆಚ್ಚಿಬೀಳಿಸಿದ ಹಿಂಸಾಚಾರದಲ್ಲಿ 60 ಜನರು ಸಾವನ್ನಪ್ಪಿದ್ದಾರೆ. 231 ಮಂದಿ ಗಾಯಗೊಂಡಿದ್ದಾರೆ. ಧಾರ್ಮಿಕ ಸ್ಥಳಗಳು ಸೇರಿದಂತೆ 1,700 ಮನೆಗಳನ್ನು ಸುಟ್ಟುಹಾಕಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ (N. Biren Singh) ಮೇ 8 ರಂದು ಹೇಳಿದ್ದಾರೆ. ರಾಜ್ಯದಾದ್ಯಂತ ಪರಿಸ್ಥಿತಿ ಸುಧಾರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಹಿಂಸಾಚಾರದ ಬಗ್ಗೆ ವರದಿ ಆಗಿಲ್ಲ. ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವದಲ್ಲಿ ಇಂದು ಮುಂಜಾನೆ 5 ಗಂಟೆಯಿಂದ ನಾಲ್ಕು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿದೆ. ಇತರ ಒಂಬತ್ತು ಪೀಡಿತ ಜಿಲ್ಲೆಗಳಲ್ಲಿ ಇದೇ ರೀತಿಯ ಸಡಿಲಿಕೆಯನ್ನು ನೀಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 3 ರಂದು 10 ಗುಡ್ಡಗಾಡು ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಈಶಾನ್ಯ ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದಿತ್ತು. ಮೀಸಲು ಅರಣ್ಯ ಭೂಮಿಯಿಂದ ಕುಕಿ ಗ್ರಾಮಸ್ಥರನ್ನು ಹೊರಹಾಕುವ ಬಗ್ಗೆ ಉದ್ವಿಗ್ನತೆಯಿಂದ ಮೆರವಣಿಗೆ ಹಿಂಸಾತ್ಮಕ ರೀತಿಗೆ ತಿರುಗಿತ್ತು. ಮಣಿಪುರದ ಜನಸಂಖ್ಯೆಯ ಸುಮಾರು ಶೇ53 ರಷ್ಟಿರುವ ಮೈತಿಗಳ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರಾದ ಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇ 40ರಷ್ಟಿದ್ದಾರೆ. ಇವರು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಕುಟುಂಬಗಳಿಗೆ ಪರಿಹಾರ

ಮೇ 8 ರಂದು ಸಂಜೆ ಇಂಫಾಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ, ಗಂಭೀರ ಗಾಯಗೊಂಡವರಿಗೆ ₹ 2 ಲಕ್ಷ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 25,000 ರೂ.ಪರಿಹಾರ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಹೇಳಿದರು.

ಇವು ಬಹಳ ದುರದೃಷ್ಟಕರ ಘಟನೆಗಳು. ಆದಷ್ಟು ಬೇಗ ಶಾಂತಿಯನ್ನು ಕಾಪಾಡಲು ನಾನು ಜನರಿಗೆ ಮನವಿ ಮಾಡುತ್ತೇನೆ. ಹಿಂಸಾಚಾರದಲ್ಲಿ ದೇವಾಲಯಗಳು, ಚರ್ಚ್‌ಗಳು ಸೇರಿದಂತೆ 1,700 ಮನೆಗಳು ಸುಟ್ಟು ಭಸ್ಮವಾಗಿವೆ.ಧ್ವಂಸಗೊಂಡ ಮನೆಗಳಿಗೆ ₹ 2 ಲಕ್ಷ ನೀಡಲಾಗುವುದು ಮತ್ತು ರಾಜ್ಯ ಸರ್ಕಾರ ಅವುಗಳನ್ನು ಮರುನಿರ್ಮಾಣ ಮಾಡಲಿದೆ ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ: The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

ಮಣಿಪುರದಲ್ಲಿ ಸಂಭವಿಸಿದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ, ಪರಿಹಾರ ಶಿಬಿರಗಳಲ್ಲಿ ಸಿಲುಕಿರುವ 20,000 ಕ್ಕೂ ಹೆಚ್ಚು ಜನರನ್ನು ಇಂದಿನವರೆಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸಿಕ್ಕಿಬಿದ್ದಿರುವ ಇನ್ನೂ 10,000 ಜನರನ್ನು ಆದಷ್ಟು ಬೇಗ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗುವುದು.ಮಾನವ ಜೀವಗಳು ಅಮೂಲ್ಯ .ಮನೆಗಳು ಮತ್ತು ಆಸ್ತಿಗಳನ್ನು ನಾಶಪಡಿಸುವುದು ಸರಿಯಲ್ಲ ಎಂದು ಸಿಂಗ್ ಹೇಳಿದರು.
ಮಣಿಪುರ ಸರ್ಕಾರವು ರಾಜ್ಯದ ವಿವಿಧ ಭಾಗಗಳಾದ ಚುರಾಚಂದ್‌ಪುರ, ಉಖ್ರುಲ್, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳಿಂದ ಸಿಕ್ಕಿಬಿದ್ದ ಜನರನ್ನು ಮರಳಿ ಕರೆತರಲು ಹಲವು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

LEAVE A REPLY

Please enter your comment!
Please enter your name here