9.8 C
Munich
Friday, March 24, 2023

Delhi Police s at Rahul Gandhi’s doorstep over remarks on physically assaulted Women | ಲೈಂಗಿಕ ದೌರ್ಜನ್ಯ ಸಂತ್ರಸ್ತರ ಕುರಿತ ಹೇಳಿಕೆ: ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ ದೆಹಲಿ ಪೊಲೀಸರು

ಓದಲೇಬೇಕು

ಲೈಂಗಿಕ ದೌರ್ಜನ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿವಾಸಕ್ಕೆ ದೆಹಲಿ ಪೊಲೀಸರು ಆಗಮಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೋಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ರಾಹುಲ್ ಗಾಂಧಿ

Image Credit source: NDTV

ಲೈಂಗಿಕ ದೌರ್ಜನ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿವಾಸಕ್ಕೆ ದೆಹಲಿ ಪೊಲೀಸರು ಆಗಮಿಸಿದ್ದಾರೆ. ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೋಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಭಾರತ್ ಜೋಡೋ ಯಾತ್ರೆ ವೇಳೆ ‘ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ನೋಟಿಸ್ ಜಾರಿಗಾಗಿ ರಾಹುಲ್ ಗಾಂಧಿ ಅವರ ದೆಹಲಿ ನಿವಾಸಕ್ಕೆ ತೆರಳಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಸುಮಾರು 3 ಗಂಟೆ ಕಾದಿದ್ದಾರೆ ಎನ್ನಲಾಗಿದೆ. ಮೂರು ಗಂಟೆ ಕಾದರೂ ಪೊಲೀಸ್ ತಂಡವನ್ನು ರಾಹುಲ್ ಗಾಂಧಿ ಭೇಟಿ ಮಾಡಲಿಲ್ಲ.

ಮತ್ತಷ್ಟು ಓದಿ: Rahul Gandhi: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ, ರಾಹುಲ್ ಗಾಂಧಿಗೆ ನೋಟಿಸ್

ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದಾರೆ.ಬಳಿಕ ಒಂದೂವರೆ ಗಂಟೆಗಳ ನಂತರ ವೈಯಕ್ತಿಕವಾಗಿ ರಾಹುಲ್ ಗಾಂಧಿ ನೋಟಿಸ್ ಸ್ವೀಕರಿಸಿದರು ಎನ್ನಲಾಗಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಪೊಲೀಸರಿಗೆ ಕರೆ ಮಾಡಬೇಡಿ. ಅದರಿಂದ ನನಗೆ ಅವಮಾನವಾಗುತ್ತದೆ ಎಂದು ಆಕೆ ಹೇಳಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದರು.

ಸ್ವಯಂ ಪ್ರೇರಿತವಾಗಿ ಅಥವಾ ದೂರಿನ ಆಧಾರದ ಮೇಲೆ ರಾಹುಲ್ ಗಾಂಧಿ ವಿರುದ್ಧ ನೋಟಿಸ್ ನೀಡುವುದಕ್ಕೆ ಯಾವುದೇ ಕಾನೂನು ಪೂರ್ವನಿದರ್ಶನವಿಲ್ಲ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ.

ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಅವರನ್ನು ಸಂಪರ್ಕಿಸಿರುವ ಮಹಿಳೆಯರ ವಿವರಗಳನ್ನು ಕೇಳಿ ಪೊಲೀಸರು ಮಾರ್ಚ್ 16 ರಂದು ಕಾಂಗ್ರೆಸ್ ರಾಹುಲ್ ಗಾಂಧಿಗೆ ನೋಟಿಸ್ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!