9.1 C
Munich
Thursday, March 9, 2023

Election commission delegation to visit Karnataka from Today March 9 to review preparations for Assembly elections 2023 | ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ, ಇಂದು ಬೆಂಗಳೂರಿಗೆ ಕೇಂದ್ರ ಚುನಾವಣಾ ಆಯೋಗ ತಂಡ ಭೇಟಿ

ಓದಲೇಬೇಕು

15ನೇ ವಿಧಾನಸಭೆಯ ಅವಧಿ ಮೇ ತಿಂಗಳಿಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಯ ಪೂರ್ವಭಾವಿ ತಯಾರಿ ಪರಿವೀಕ್ಷಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ತಂಡ ಬೆಂಗಳೂರಿಗೆ ಭೇಟಿ ನೀಡಲಿದೆ. ಈ ಮೂರು ದಿನಗಳ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆಗೆ (Karnataka Assembly Elections 2023) ದಿನ ಹತ್ತಿರವಾಗುತ್ತಿದ್ದಂತೆಯೇ ಕ್ಷೇತ್ರಗಳಲ್ಲಿ ಮತಪ್ರಚಾರ ಭರ್ಜರಿಯಾಗಿ ನಡೆದಿದೆ. ಹೇಳಿ ಕೇಳಿ ಬೇಸಿಗೆ ಸಮಯದಲ್ಲೇ ಚುನಾವಣೆ ಎದುರಾಗಿದ್ದರಿಂದ ರಣಬಿಸಿಲಲ್ಲಿ ರಣರಂಗ ಮತ್ತಷ್ಟು ಬಿಸಿಯಾಗುತ್ತಿದೆ. ಮತ್ತೊಂದೆಡೆ ಮೂರು ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಕಸರತ್ತು ತೆರೆಮರೆಯಲ್ಲಿ ತಾರಕಕ್ಕೇರಿದೆ. ಇದರ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕಗಳ ಘೋಷಣೆಗೆ ಪೂರ್ವಭಾವಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ನಿಯೋಗ (Election Commission Delegation)ಇಂದಿನಿಂದ (ಮಾರ್ಚ್ 9) ಮೂರು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ರಾಜೀವ್‌ ಕುಮಾರ್ ಅವರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರೊಂದಿಗೆ ಬರಲಿದ್ದು, ವಿವಿಧ ಪಕ್ಷಗಳ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಮೊದಲ ದಿನ(ಮಾ.09): ನಿಯೋಗದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಇಂದು ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದೆ. ಮೊದಲ ದಿನ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಲಿದೆ. ತದನಂತರ ಮುಂಬರುವ ಚುನಾವಣೆ ಕುರಿತು ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಲಿದ್ದು ಮುಖ್ಯವಾಗಿ ಅವರ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಿದೆ.

ಅಂದು ಸಂಜೆ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿ ಹಮ್ಮಿಕೊಳ್ಳಲಾಗಿರುವ “ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ” ವಿಷಯದ ಕುರಿತ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಪ್ರಜಾಪ್ರಭುತ್ವ ದೇಶಗಳ ಚುನಾವಣಾ ಆಯುಕ್ತರುಗಳು ಇದರಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದು ಕೆಲವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ.

2ನೇ ದಿನ (ಮಾ.10): ಎರಡನೆಯ ದಿನ ರಾಜ್ಯದ 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ಅಂದು ಸಂಜೆ ನಗರದ ಐಐಎಸ್‍ಸಿ ಆವರದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ, ಹ್ಯಾಕಥಾನ್ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ತದನಂತರ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂವಾದದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ದಿವ್ಯಾಂಗರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಮೂರನೇ ದಿನ (ಮಾ.11): ಮೂರನೇ ದಿನ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಪರಾಹ್ನದ ನಂತರ ಮೂರು ದಿನಗಳ ತಮ್ಮ ಭೇಟಿಯ ಕುರಿತು ಪತ್ರಿಕಾಗೋಷ್ಠಿ ನಡೆಸಿಕೊಡಲಿದ್ದಾರೆ. ಅಂದು ಸಂಜೆ ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!