0.4 C
Munich
Saturday, March 4, 2023

Fire Accident in fuel storage depot Indonesia16 killed dozens injured | Indonesia: ಸರ್ಕಾರಿ ಇಂಧನ ಸಂಗ್ರಹಣಾ ಡಿಪೋದಲ್ಲಿ ಅಗ್ನಿ ಅವಘಡ: 2 ಮಕ್ಕಳು ಸೇರಿ 16 ಜನ ಸಾವು

ಓದಲೇಬೇಕು

ಸರ್ಕಾರಿ ಇಂಧನ ಸಂಗ್ರಹಣಾ ಡಿಪೋದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ರಾಜಧಾನಿ ಉತ್ತರ ಜಕಾರ್ತದಲ್ಲಿ ಸಂಭವಿಸಿದೆ.

ಅಗ್ನಿ ಅವಘಡ

ಜಕಾರ್ತಾ: ಸರ್ಕಾರಿ ಇಂಧನ ಸಂಗ್ರಹಣಾ ಡಿಪೋದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಿನ್ನೆ (ಮಾ.3) ಇಂಡೋನೇಷ್ಯಾದ (Indonesia) ರಾಜಧಾನಿ ಉತ್ತರ ಜಕಾರ್ತದಲ್ಲಿ (North Jakarta) ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವು ಮನೆಗಳು ಸುಟ್ಟು ಭಸ್ಮವಾಗಿದೆ. ಸದ್ಯ ಇಂಧನ ಸಂಗ್ರಹಣಾ ಡಿಪೋ ಸುತ್ತಮುತ್ತ ಇರುವ ನಿವಾಸಿಗಳನ್ನು ಸ್ಥಳಾಂತರಿಸಲಾಗುತ್ತಿದೆ. ಇನ್ನು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಜಕಾರ್ತ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ.

ಸ್ಥಳೀಯ ಕಾಲಮಾನ ರಾತ್ರಿ 8 ಗಂಟೆಯ ನಂತರ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಆಕಸ್ಮಿಕ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮಿಲಿಟರಿ ಮುಖ್ಯಸ್ಥ ಅಬ್ದುರಾಚ್ಮನ್ ತಿಳಿಸಿದ್ದಾರೆ. ಅಗ್ನಿ ಅವಘಡದಿಂದ ಹಲವರಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಜೀನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಇಂಧನ ಇಲಾಖೆ ತಿಳಿಸಿದೆ. ಈ ಬಗ್ಗೆ ತೈಲ ಮತ್ತು ಅನಿಲ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿಕೆ ವಿದ್ಯಾವತಿ ಮಾತನಾಡಿ “ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಮತ್ತೆ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ದೇಶದ ಇಂಧನ ಪೂರೈಕೆಯಲ್ಲಿ ಯಾವುದೆ ಕೊರತೆ ಇಲ್ಲ. ಲಭ್ಯವಿರುವ ಹತ್ತಿರದ ಟರ್ಮಿನಲ್‌ಗಳಿಂದ ಬ್ಯಾಕಪ್​​ಗಳ ಮೂಲಕ ಪೂರೈಸಲಾಗುತ್ತಿದೆ.

2009 ಮತ್ತು 2014 ರಲ್ಲಿ ಇದೇ ರೀತಿ ಅಗ್ನಿ ಅವಘಡ ಸಂಭವಿಸಿತ್ತು. ಆಗ ಡಿಪೋ ಬಳಿಯ 40 ಮನೆಗಳಿಗೆ ಬೆಂಕಿ ತಗುಲಿ ಹಾನಿಯಾಗಿತ್ತು. ಆದರೆ ಎರಡೂ ಪ್ರಕರಣಗಳಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!