10.5 C
Munich
Thursday, March 30, 2023

Gujarat Fire: Massive Fire Breaks Out At Scrap Godown In Gujarat’s Valsad | Gujarat: ಗುಜರಾತ್​ನಲ್ಲಿ ಅಗ್ನಿ ಅವಘಡ: 10ಕ್ಕೂ ಅಧಿಕ ಗುಜರಿ ಗೋದಾಮುಗಳು ಸುಟ್ಟು ಭಸ್ಮ

ಓದಲೇಬೇಕು

ಗುಜರಾತ್​ನ 10ಕ್ಕೂ ಅಧಿಕ ಗುಜರಿ ಗೋದಾಮಿ​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲೇ ಸಂಪೂರ್ಣ ಗೋಡೌನ್ ಹೊತ್ತಿ ಉರಿದಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಗುಜರಾತ್​ನ 10ಕ್ಕೂ ಅಧಿಕ ಗುಜರಿ ಗೋದಾಮಿ​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲೇ ಸಂಪೂರ್ಣ ಗೋಡೌನ್ ಹೊತ್ತಿ ಉರಿದಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಇದಕ್ಕೂ ಮೊದಲು, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ವಾ ಟೌನ್‌ಶಿಪ್ ಬಳಿಯ ಕಟ್ಟಡದ ಮೀಟರ್ ಕೋಣೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 22 ವಿದ್ಯುತ್ ಮೀಟರ್‌ಗಳು ನಾಶವಾಗಿವೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ವಿಟಾವಾದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದ ಮೈದಾನದ ಮೀಟರ್ ಕೊಠಡಿಯಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಖಾಸಗಿ ವಿದ್ಯುತ್ ವಿತರಕರ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಒಂದು ಗಂಟೆಯ ನಂತರ ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಇದಕ್ಕೂ ಮುನ್ನ ಗುಜರಾತ್‌ನ ವಲ್ಸಾದ್‌ನಲ್ಲಿ ಫಾರ್ಮಾಸ್ಯುಟಿಕಲ್ಸ್ ಕಂಪನಿಯಲ್ಲಿ ಹಠಾತ್ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!