ಮಹಾರಾಷ್ಟ್ರದಲ್ಲಿ ಹೆಚ್3ಎನ್2 ವೈರಸ್ಗೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಲ್ಲಿ, ಬಾರತದಲ್ಲಿ ಹೆಚ್3ಎನ್2 ವೈರಸ್ ಪ್ರಕರಣಗಳು ಹೆಚ್ಚುತ್ತಿವೆ.
Image Credit source: The Wire
ಮಹಾರಾಷ್ಟ್ರದಲ್ಲಿ ಹೆಚ್3ಎನ್2 ವೈರಸ್ಗೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಲ್ಲಿ, ಬಾರತದಲ್ಲಿ ಹೆಚ್3ಎನ್2 ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಭಾರತದಲ್ಲಿ ಇದುವರೆಗೆ H3N2 ನಿಂದ ಎರಡು ಸಾವುಗಳು ಸಂಭವಿಸಿವೆ. ಒಂದು ಕರ್ನಾಟಕದಲ್ಲಿ ಮತ್ತು ಇನ್ನೊಂದು ಹರಿಯಾಣದಲ್ಲಿ. ಇದೀಗ ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಮೃತಪಟ್ಟಿದ್ದು, ಇದು ಹೆಚ್3ಎನ್2 ಎನ್ನುವುದಕ್ಕೆ ಸಧ್ಯಕ್ಕೆ ಯಾವುದೇ ಪುರಾವೆಗಳಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಅವರ ರಕ್ತದಲ್ಲಿ H3N2 ವೈರಸ್ ಪತ್ತೆಯಾಗಿದೆ ಎನ್ನಲಾಗಿದೆ.
ಅಹ್ಮದ್‌ನಗರದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ 23ರ ಹರೆಯದ ವಿದ್ಯಾರ್ಥಿ ಕಳೆದ ವಾರ ಸ್ನೇಹಿತರೊಂದಿಗೆ ಕೊಂಕಣದ ಅಲಿಬಾಗ್‌ಗೆ ಪಿಕ್ನಿಕ್‌ಗೆ ತೆರಳಿದ್ದರು. ಅಲ್ಲಿಂದ ಬಂದ ನಂತರ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಪರೀಕ್ಷಿಸಿದಾಗ ಕೋವಿಡ್-19 ಪಾಸಿಟಿವ್ ಎಂದು ತಿಳಿದುಬಂದಿದೆ. ಆ ನಂತರ ಅವರನ್ನು ಅಹಮದ್‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ (ಮಾರ್ಚ್ 13) ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಅವರ ಮರಣೋತ್ತರ ಪರೀಕ್ಷೆಯು ಅವರ ರಕ್ತದಲ್ಲಿ H3N2 ವೈರಸ್ ಕಂಡುಬಂದಿದೆ ಎಂದು ವರದಿಯಾಗಿದೆ, ಆದರೆ ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.
ಮತ್ತೊಂದು ಪ್ರಕರಣದಲ್ಲಿ, ಗುಜರಾತ್‌ನ ವಡೋದರಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 58 ವರ್ಷದ ಮಹಿಳೆ ಜ್ವರ ತರಹದ ರೋಗಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಮಾರ್ಚ್ 14) ತಿಳಿಸಿದ್ದಾರೆ. H3N2 ಇನ್‌ಫ್ಲುಯೆಂಜಾ ವೈರಸ್ ಕಾರಣವೇ ಎಂದು ಕೇಳಿದಾಗ, ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಪರಿಶೀಲನಾ ಸಮಿತಿಯು ಮಹಿಳೆಯ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ