ಇಂದು ಮತ್ತು ನಾಳೆ (ಮಾರ್ಚ್ 3, 4) ಕೇಂದ್ರ ಗೃಹ ಸಚಿವ ಅಮಿತ್ ಶಾ ಬೀದರ್, ಬೆಂಗಳೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬಸವಕಲ್ಯಾಣದಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಬೀದರ್: ರಾಜ್ಯದ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ತಾರಕಕ್ಕೇರಿದೆ. ಭಾರತೀಯ ಜನತಾ ಪಾರ್ಟಿ (BJP) ಕೇಂದ್ರ ಮತ್ತು ರಾಜ್ಯ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುತ್ತಾ ಮತಗಳ ಕ್ರೋಢೀಕರಣ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದು, ಇಂದು ಮತ್ತು ನಾಳೆ (ಮಾರ್ಚ್ 3, 4) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬೀದರ್ (Bidar), ಬೆಂಗಳೂರು (Bengaluru) ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬಸವಕಲ್ಯಾಣದಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ ನೀಡಲಿದ್ದಾರೆ.
ಅಮಿತ್ ಶಾ ಬೀದರ್ ಪ್ರವಾಸ ವೇಳಾಪಟ್ಟಿ
ವಿಶೇಷ ವಿಮಾನದ ಮೂಲಕ ತಡರಾತ್ರಿ 2:30 ಕ್ಕೆ ಬೀದರ್ಗೆ ಬಂದಿರುವ ಅಮಿತ್ ಶಾ, 11:30 ಕ್ಕೆ ಗುರುನಾನಕ್ ಝೀರಾಕ್ಕೆ ಭೇಟಿ ಕೊಡುತ್ತಾರೆ. 11:40ಕ್ಕೆ ಬೀದರ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಸವಕಲ್ಯಾಣಕ್ಕೆ ತೆರಳುವರು. ಮಧ್ಯಾಹ್ನ 12:10ಕ್ಕೆ ಬಸವಕಲ್ಯಾಣದ ಕ್ರಿಕೆಟ್ ಸ್ಟೇಡಿಯಂನಿಂದ ಅನುಭವ ಮಂಟಪಕ್ಕೆ ಹೋಗುತ್ತಾರೆ. ಮಧ್ಯಾಹ್ನ 12:30ಕ್ಕೆ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುತ್ತಾರೆ.
ಮಧ್ಯಾಹ್ನ 12:40ಕ್ಕೆ ಅನುಭವ ಮಂಟಪಕ್ಕೆ ಭೇಟಿ ಕೊಟ್ಟು, 12:45ಕ್ಕೆ ತೇರು ಮೈದಾನಕ್ಕೆ ತೆರಳುವರು. ಮಧ್ಯಾಹ್ನ 1:15ಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ಹುಮನಾಬಾದ್ನಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 5:30ಕ್ಕೆ ಭಾಲ್ಕಿಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಬಳಿಕ ಬೀದರ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರಲಿದ್ದಾರೆ.
ಅಮಿತ್ ಶಾ ಅವರಿಗೆ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸೌದಿ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸಾಥ್ ನೀಡಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ