ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಹೈಕಮಾಂಡ್ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ವಿಜಯೇಂದ್ರ ಹೇಳಿದರು.
ತುಮಕೂರು: ನಗರದಲ್ಲಿ ನಡೆದ ಒಬಿಸಿ ಸಮಾವೇಶದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ (Assembly Polls) ಹೈಕಮಾಂಡ್ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದರು. ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ವಿ ಸೋಮಣ್ಣ (V Somanna) ಮತ್ತು ಕೆಸಿ ನಾರಾಯಣಗೌಡ (KC Narayana Gowda) ಅವರು ಕಾಂಗ್ರೆಸ್ ಸೇರಲಿರುವ ಬಗ್ಗೆ ಅವರ ಗಮನ ಸೆಳೆದಾಗ, ಅಂಥದ್ದೇನೂ ಇಲ್ಲ, ಅವರಿಗೆ ಪಕ್ಷದ ಬಗ್ಗೆ ಅಸಮಾಧಾನವಿದ್ದರೆ ಪಕ್ಷದ ಹಿರಿಯರು ಬಗೆಹರಿಸುತ್ತಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ