ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ತಪಾಸಣೆ ನಡೆಸುತ್ತಿದ್ದು ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ನೌಕರರು ಕೂಡ ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ.ಕೆಲವು ದಾಖಲೆಗಳ ಪರಿಶೀಲನೆ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಆದಾಯ ತೆರಿಗೆ ಇಲಾಖೆ
ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (BBC) ದೆಹಲಿ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆಯ(Income Tax department) ಅಧಿಕಾರಿಗಳು ಪರಿಶೀಲನೆ(IT Survey) ನಡೆಸುತ್ತಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ತಪಾಸಣೆ ನಡೆಸುತ್ತಿದ್ದು ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ.ನೌಕರರು ಕೂಡ ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ.ಕೆಲವು ದಾಖಲೆಗಳ ಪರಿಶೀಲನೆ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ. ಬಿಬಿಸಿ ಇತ್ತೀಚೆಗೆ 2022 ರ ಗುಜರಾತ್ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆಪಾದನೆ ಮಾಡಲಾಗಿತ್ತು. ದೇ ಕೇಂದ್ರವು ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಚಾನೆಲ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದರೂ, ದೇಶದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಇದನ್ನು ಪ್ರದರ್ಶಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಾಕ್ಷ್ಯಚಿತ್ರ ಮತ್ತು 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದ ಆರೋಪಗಳ ಕುರಿತು ಭಾರತದಲ್ಲಿ ಬಿಬಿಸಿಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ತಿರಸ್ಕರಿಸಿದ ಸುಪ್ರೀ ಕೋರ್ಟ್, ಸಾಕ್ಷ್ಯಚಿತ್ರ ದೇಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಮೌಖಿಕವಾಗಿ ಪ್ರಶ್ನಿಸಿದೆ.
Income Tax department is conducting survey at the BBC office in Delhi: Sources pic.twitter.com/vqBNUUiHTD
— ANI (@ANI) February 14, 2023
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎಂ. ಸುಂದ್ರೇಶ್ 2002ರ ಗುಜರಾತ್ ಗಲಭೆ ಕುರಿತ ಸಾಕ್ಷ್ಯಚಿತ್ರ ‘ಇಂಡಿಯಾ: ದ ಮೋದಿ ಕ್ವೆಶ್ಚನ್’ ಪ್ರಸಾರಕ್ಕಾಗಿ ಬಿಬಿಸಿಯನ್ನು ನಿಷೇಧಿಸುವಂತೆ ಕೋರಿ ಹಿಂದೂ ಸೇನೆಯ ಅಧ್ಯಕ್ಷರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅವರು “ಸಂಪೂರ್ಣವಾಗಿ ತಪ್ಪು ಕಲ್ಪನೆ” ಎಂದು ಬಣ್ಣಿಸಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ, ಸಾಕ್ಷ್ಯಚಿತ್ರವು ದೇಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಪೀಠವು ಪ್ರಶ್ನಿಸಿತು. “ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ, ಇದನ್ನು ಹೇಗೆ ವಾದಿಸಬಹುದು? ನಾವು ಸಂಪೂರ್ಣ ಸೆನ್ಸಾರ್ಶಿಪ್ ಅನ್ನು ಹಾಕಬೇಕೆಂದು ನೀವು ಬಯಸುತ್ತೀರಾ? ಇದು ಏನು?” ಎಂದು ಪೀಠ, ಅರ್ಜಿದಾರರ ವಕೀಲರಲ್ಲಿ ಕೇಳಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿಂಕಿ ಆನಂದ್, ಅರ್ಜಿದಾರರ ವಿಚಾರಣೆ ನಡೆಸುವಂತೆ ಪೀಠವನ್ನು ಒತ್ತಾಯಿಸಿದ್ದು ಬಿಬಿಸಿ ಉದ್ದೇಶಪೂರ್ವಕವಾಗಿ ಭಾರತದ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದು ವಾದಿಸಿದರು.
ಈ ತಿಂಗಳ ಆರಂಭದಲ್ಲಿ ಎನ್. ರಾಮ್ ಮತ್ತು ಇತರರ ಮನವಿಯ ಮೇರೆಗೆ ಕಾರ್ಯನಿರ್ವಹಿಸಿದ ಉನ್ನತ ನ್ಯಾಯಾಲಯವು, ಪ್ರಧಾನಿ ಮೋದಿಯ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವ ನಿರ್ಧಾರಕ್ಕೆ ಸಂಬಂಧಿಸಿದ ಮೂಲ ದಾಖಲೆಗಳನ್ನು ನೀಡುವಂತೆ ಕೇಂದ್ರವನ್ನು ಕೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ತಾಜಾ ಸುದ್ದಿ