-0.2 C
Munich
Monday, March 27, 2023

IND vs AUS 4th test Match drawn before completion of days play India wins the series 2-1 | IND vs AUS: ಡ್ರಾನಲ್ಲಿ ಅಂತ್ಯಗೊಂಡ ಅಂತಿಮ ಟೆಸ್ಟ್; ಸರಣಿಯೊಂದಿಗೆ ಡಬ್ಲ್ಯುಟಿಸಿ ಫೈನಲ್​ಗೆ ಲಗ್ಗೆಯಿಟ್ಟ ಭಾರತ

ಓದಲೇಬೇಕು

IND vs AUS: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್‌ ಸರಣಿಯ ಅಂತಿಮ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.

ಡ್ರಾನಲ್ಲಿ ಅಂತ್ಯಗೊಂಡ ಅಂತಿಮ ಟೆಸ್ಟ್

ಅಹಮದಾಬಾದ್​ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್‌ (Border-Gavaskar Trophy) ಸರಣಿಯ ಅಂತಿಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಐದನೇ ಹಾಗೂ ಕೊನೆಯ ದಿನದಂದು ಆಸ್ಟ್ರೇಲಿಯಾ ಎರಡನೇ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 175 ರನ್ ಗಳಿಸುವುದರೊಂದಿಗೆ ಪಂದ್ಯಕ್ಕೆ ಅಂತ್ಯ ಹಾಡಲಾಯಿತು. ಈ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾ (Team India) ಸತತ ಎರಡನೇ ಬಾರಿಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದುಕೊಂಡಿದೆ. ಅಲ್ಲದೆ ಈ ಸರಣಿಯನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವುದರೊಂದಿಗೆ ತವರಿನಲ್ಲಿ ಸತತ 16ನೇ ಸರಣಿ ಗೆದ್ದ ದಾಖಲೆಯನ್ನೂ ಟೀಂ ಇಂಡಿಯಾದ ಬರೆದಿದೆ.

ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್‌ಗಳಿಗೆ ಆಲೌಟ್ ಆಗಿತ್ತು. ಉಸ್ಮಾನ್ ಖವಾಜಾ ಆಸ್ಟ್ರೇಲಿಯಾ ಪರ ಗರಿಷ್ಠ 180 ರನ್ ಗಳಿಸಿದರು. ಇವರಲ್ಲದೆ ಬಿರುಸಿನ ಇನ್ನಿಂಗ್ಸ್ ಆಡಿದ ಕ್ಯಾಮರೂನ್ ಗ್ರೀನ್ ಕೂಡ 114 ರನ್ ಬಾರಿಸಿದ್ದರು. ಉಸ್ಮಾನ್ ಮತ್ತು ಗ್ರೀನ್ 208 ರನ್‌ಗಳ ಜೊತೆಯಾಟವನ್ನು ಹಂಚಿಕೊಳ್ಳುವುದರೊಂದಿಗೆ ಆಸೀಸ್ ಬಿಗ್ ಟಾರ್ಗೆಟ್ ಸೆಟ್ ಮಾಡುವುದರಲ್ಲಿ ನೆರವಾದರು. ಈ ಇಬ್ಬರನ್ನು ಹೊರತುಪಡಿಸಿ ಮೊದಲ ಇನ್ನಿಂಗ್ಸ್​ನಲ್ಲಿ ಟಾಡ್ ಮರ್ಫಿ ಅಜೇಯ 41 ರನ್ ಗಳಿಸಿದರು.

IND vs AUS: ‘ನಾನಿದ್ದಿದ್ದರೆ ಔಟಾಗಿರುತ್ತಿದೆ’; ಅಂಪೈರ್ ನಿತಿನ್ ಮೆನನ್ ಕಾಲೆಳೆದ ಕಿಂಗ್ ಕೊಹ್ಲಿ

ಇನ್ನು ನಾಯಕ ಸ್ಟೀವನ್ ಸ್ಮಿತ್ 38 ರನ್ ಗಳಿಸಿದರೆ, ನಾಥನ್ ಲಿಯಾನ್ ಕೂಡ 34 ರನ್​ಗಳ ಕೊಡುಗೆ ನೀಡಿದ್ದರು. ಟ್ರಾವಿಸ್ ಹೆಡ್ 32 ರನ್ ಬಾರಿಸಿದ್ದರೆ, ಪೀಟರ್ ಹ್ಯಾಂಡ್ಸ್ಕಾಂಬ್ 17, ಮಿಚೆಲ್ ಸ್ಟಾರ್ಕ್ 6 ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ 3 ರನ್ ಗಳಿಸಿದರು.  ಟೀಂ ಇಂಡಿಯಾ ಪರ ಅಶ್ವಿನ್ 6 ವಿಕೆಟ್ ಪಡೆದು ಮಿಂಚಿದರೆ, ಮೊಹಮ್ಮದ್ ಶಮಿ 2 ವಿಕೆಟ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದರು.

ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್

ಮೊದಲ ಇನ್ನಿಂಗ್ಸ್‌ನಲ್ಲಿ ಕಾಂಗರೂಗಳ 480 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾ 571 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ 91 ರನ್‌ಗಳ ಮುನ್ನಡೆ ಪಡೆದುಕೊಂಡಿತು.ತಂಡದ ಪರ ವಿರಾಟ್ ಕೊಹ್ಲಿ 364 ಎಸೆತಗಳಲ್ಲಿ 15 ಬೌಂಡರಿ ಸಹಿತ 186 ರನ್ ಗಳಿಸಿದರು. ವಿರಾಟ್ ನಂತರ ಶುಭಮನ್ ಗಿಲ್ 128 ರನ್ ಗಳ ಶತಕದ ಇನ್ನಿಂಗ್ಸ್ ಆಡಿದರು.

ಅಕ್ಷರ್ ಪಟೇಲ್ 79 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರೆ, ವಿರಾಟ್ ಕೊಹ್ಲಿಗೆ ಉತ್ತಮ ಬೆಂಬಲ ನೀಡುವ ಮೂಲಕ ಶ್ರೀಕರ್ ಭರತ್ 44 ರನ್ ಕೊಡುಗೆ ನೀಡಿದರು. ಚೇತೇಶ್ವರ ಪೂಜಾರ 42 ರನ್ ಗಳಿಸಿ ಮೈದಾನದಿಂದ ನಿರ್ಗಮಿಸಿದರು. ನಾಯಕ ರೋಹಿತ್ ಶರ್ಮಾ ಕೇವಲ 35 ರನ್ ಗಳಿಸಲಷ್ಟೇ ಶಕ್ತರಾದರು. ರವೀಂದ್ರ ಜಡೇಜಾ ಅವರಿಗೆ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗದೆ 28 ರನ್ ಗಳಿಸಿ ಔಟಾದರು. ದೊಡ್ಡ ಹೊಡೆತ ಆಡುವ ಯತ್ನದಲ್ಲಿ ಅಶ್ವಿನ್ 7 ರನ್ ಗಳಿಸಿ ಕ್ಯಾಚಿತ್ತು ಔಟಾದರು.

ಇನ್ನು ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಇಬ್ಬರೂ ಖಾತೆ ತೆರೆಯಲಿಲ್ಲ. ಗಾಯದ ಸಮಸ್ಯೆಯಿಂದ ಶ್ರೇಯಸ್ ಅಯ್ಯರ್ ಮೈದಾನಕ್ಕೆ ಬರಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ ತಲಾ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಮತ್ತು ಮ್ಯಾಥ್ಯೂ ಕುಹ್ನೆಮನ್ ತಲಾ 1 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!