1.6 C
Munich
Monday, March 27, 2023

IND vs AUS sanju samson can replace shreyas iyer in the team india for the odi series vs australia | IND vs AUS: ಏಕದಿನ ಸರಣಿಯಿಂದ ಶ್ರೇಯಸ್ ಔಟ್; ಸಂಜು ಸ್ಯಾಮ್ಸನ್​ಗೆ ಈಗಲಾದರೂ ಸಿಗುತ್ತಾ ಅವಕಾಶ?

ಓದಲೇಬೇಕು

IND vs AUS: ವರದಿಯ ಪ್ರಕಾರ, ಹಿರಿಯ ಆಯ್ಕೆ ಸಮಿತಿಯು ಏಕದಿನ ಸರಣಿಗೆ ಅಯ್ಯರ್ ಅವರ ಬದಲಿಗೆ ಯಾರನ್ನು ಆಯ್ಕೆ ಮಾಡದೆ, ತಂಡದಲ್ಲಿ ಈಗ ಇರುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ

ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್

ಅಹಮದಾಬಾದ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಜುರಿಯಿಂದಾಗಿ ಇಡೀ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಂ ಇಂಡಿಯಾದ (Team India) ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದಾರೆ. ಬೆನ್ನುನೋವಿನಿಂದ ಬಳಲುತ್ತಿರುವ ಅಯ್ಯರ್ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‌ಗೂ ಬರಲಿಲ್ಲ. ಸದ್ಯ ತಂಡದ ವೈದ್ಯರ ಮೇಲ್ವಿಚಾರಣೆಯಲ್ಲಿರುವ ಅಯ್ಯರ್ ಯಾವಾಗ ತಂಡಕ್ಕೆ ಎಂಟ್ರಿಕೊಡುತ್ತಾರೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಆದರೆ ಇಂಜುರಿಯಿಂದ ತಂಡದಿಂದ ಹೊರಬಿದ್ದಿರುವ ಅಯ್ಯರ್ ಬದಲಿಗೆ ಏಕದಿನ ಸರಣಿಯಲ್ಲಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ. ಅಯ್ಯರ್ ಸ್ಥಾನಕ್ಕೆ ಹಲವು ಆಟಗಾರರ ನಡುವೆ ಫೈಪೋಟಿ ಏರ್ಪಟ್ಟಿದ್ದು, ಇದರಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಹೆಸರು ಮೊದಲ ಸ್ಥಾನದಲ್ಲಿದೆ. ಮಾಧ್ಯಮ ವರದಿಗಳ ಪ್ರಕಾರ, ಗಾಯಗೊಂಡಿರುವ ಅಯ್ಯರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಸಂಜುಗೆ ಅವಕಾಶ ಸಿಗುತ್ತಾ?

ಅಯ್ಯರ್ ಏಕದಿನ ಸರಣಿಯಿಂದ ಹೊರಬಿದ್ದ ಬಳಿಕ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಬಹುದು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಇದುವರೆಗೂ ಬಿಸಿಸಿಐ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಮತ್ತೊಂದೆಡೆ, ಮಾರ್ಚ್ 14 ರಂದು ಇಂಗ್ಲಿಷ್ ಪತ್ರಿಕೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಹಿರಿಯ ಆಯ್ಕೆ ಸಮಿತಿಯು ಏಕದಿನ ಸರಣಿಗೆ ಅಯ್ಯರ್ ಅವರ ಬದಲಿಗೆ ಯಾರನ್ನು ಆಯ್ಕೆ ಮಾಡದೆ, ತಂಡದಲ್ಲಿ ಈಗ ಇರುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಹೇಳಿದೆ. ಆದರೆ ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ಏನು ಹೇಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ನ್ಯೂಜಿಲೆಂಡ್ ಪ್ರವಾಸದ ನಂತರ ಸ್ಯಾಮ್ಸನ್​ಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿಲ್ಲ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಸಂಜು ಅವರನ್ನು ಆಯ್ಕೆ ಮಾಡಲಾಗಿತ್ತಾದರೂ ಮೊಣಕಾಲಿನ ಗಾಯದಿಂದಾಗಿ ಸಂಜು ಈ ಸರಣಿಯಿಂದ ಹೊರಗುಳಿಯಬೇಕಾಯಿತು. ಅಂದಿನಿಂದ ಸಂಜುಗೆ ಟೀಂ ಇಂಡಿಯಾದ ಕದ ತೆರೆದಿಲ್ಲ.

20 ಓವರ್‌ಗಳ ಪಂದ್ಯ 75 ಎಸೆತಗಳಲ್ಲಿ ಮುಕ್ತಾಯ! ಗಂಭೀರ್- ಉತ್ತಪ್ಪ ಅಬ್ಬರಕ್ಕೆ ಸುಸ್ತಾದ ಏಷ್ಯಾ ಲಯನ್ಸ್

ಪಾಂಡ್ಯಗೆ ನಾಯಕತ್ವ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡದಿದ್ದು, ಹಾರ್ದಿಕ್ ಪಾಂಡ್ಯ ತಂಡದ ಸಾರಥ್ಯ ವಹಿಸಲಿದ್ದಾರೆ. ಆದಾಗ್ಯೂ, ಮುಂದಿನ ಎರಡು ಪಂದ್ಯಗಳಿಗೆ ರೋಹಿತ್ ತಂಡಕ್ಕೆ ಎಂಟ್ರಿಕೊಡಲಿದ್ದು, ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಅಯ್ಯರ್ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್,  ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!