4.6 C
Munich
Tuesday, March 7, 2023

India vs Australia 4th Test: Ishan Kishan likely to make his debut | India vs Australia 4th Test: ಟೀಮ್ ಇಂಡಿಯಾ ಪರ ಯುವ ದಾಂಡಿಗ ಪಾದಾರ್ಪಣೆ ಸಾಧ್ಯತೆ

ಓದಲೇಬೇಕು

India vs Australia 4th Test: ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

India vs Australia 4th Test: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಬಾರ್ಡರ್-ಗವಾಸ್ಕರ್ ಸರಣಿಯ 4ನೇ ಟೆಸ್ಟ್ ಪಂದ್ಯಯು ಮಾರ್ಚ್ 9 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಏಕೆಂದರೆ 4 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2 ಪಂದ್ಯ ಗೆದ್ದಿದ್ದರೆ, ಆಸ್ಟ್ರೇಲಿಯಾ ತಂಡವು 1 ಪಂದ್ಯ ಜಯಿಸಿದೆ. ಇದೀಗ 4ನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಳ್ಳಲು ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಅವಕಾಶವಿದೆ.

ಮತ್ತೊಂದೆಡೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ನೇರವಾಗಿ ಫೈನಲ್​ಗೇರಬಹುದು. ಒಂದು ವೇಳೆ ಅಹಮದಾಬಾದ್ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಣ ಟೆಸ್ಟ್ ಸರಣಿಯ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಹೀಗಾಗಿ ಭಾರತದ ಪಾಲಿಗೂ ಕೊನೆಯ ಟೆಸ್ಟ್ ಪಂದ್ಯ ನಿರ್ಣಾಯಕ.

ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮೂರನೇ ಪಂದ್ಯದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಹೀಗಾಗಿ ಒಂದು ಬದಲಾವಣೆ ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ



ಹಾಗೆಯೇ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ವಿಕೆಟ್​ ಕೀಪರ್ ಬ್ಯಾಟರ್​ ಕೆಎಸ್ ಭರತ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಅವರು ಆಡಿದ ಐದು ಇನಿಂಗ್ಸ್​ಗಳಲ್ಲಿ 8, 6, 23, 17 ಮತ್ತು 3 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಕೆಎಸ್ ಭರತ್ ಬದಲಿಗೆ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸಬಹುದು.

ಈ ಸರಣಿಗೆ ಇಶಾನ್ ಕಿಶನ್ ಆಯ್ಕೆಯಾಗಿದ್ದರೂ, ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಅಹಮದಾಬಾದ್ ಟೆಸ್ಟ್ ಮೂಲಕ ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: WPL 2023: ಬಣ್ಣದೋಕುಳಿಯಲ್ಲಿ ಮಿಂದೆದ್ದ RCB ಆಟಗಾರ್ತಿಯರು: ಇಲ್ಲಿದೆ ಫೋಟೋಸ್

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಮತ್ತಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!