9.4 C
Munich
Thursday, March 23, 2023

India vs Australia Odi Series: Mohammed Siraj And Shubman Gill big threat for aussies | India vs Australia Odi Series: ಭಾರತ ತಂಡದ ಇಬ್ಬರ ಬಗ್ಗೆ ಚಿಂತೆಗೀಡಾಗಿರುವ ಆಸ್ಟ್ರೇಲಿಯಾ..!

ಓದಲೇಬೇಕು

India vs Australia Odi Series: ಟೀಮ್ ಇಂಡಿಯಾ ವಿರುದ್ಧ ಎಲ್ಲಾ ರೀತಿಯಲ್ಲೂ ರಣತಂತ್ರ ರೂಪಿಸುತ್ತಿರುವ ಆಸ್ಟ್ರೇಲಿಯಾಗೆ ಇಬ್ಬರನ್ನು ಕಟ್ಟಿಹಾಕುವುದೇ ದೊಡ್ಡ ಸವಾಲು.

ಸಾಂದರ್ಭಿಕ ಚಿತ್ರ

India vs Australia Odi Series: ಭಾರತದ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಸೋತಿರುವ ಆಸ್ಟ್ರೇಲಿಯಾ ತಂಡವು ಇದೀಗ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಮಾರ್ಚ್ 17 ರಿಂದ ಶುರುವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಗೆಲ್ಲಬೇಕೆಂಬ ಛಲದೊಂದಿಗೆ ಆಸೀಸ್ ಪಡೆ ಅಭ್ಯಾಸವನ್ನು ಸಹ ಆರಂಭಿಸಿದೆ. ಇದರ ನಡುವೆ ಟೀಮ್ ಇಂಡಿಯಾದ (Team India) ಇಬ್ಬರು ಆಟಗಾರರ ಏಕದಿನ ಅಂಕಿ ಅಂಶಗಳು ಆಸೀಸ್ ಪಡೆಯ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಹೌದು, ಟೀಮ್ ಇಂಡಿಯಾ ವಿರುದ್ಧ ಎಲ್ಲಾ ರೀತಿಯಲ್ಲೂ ರಣತಂತ್ರ ರೂಪಿಸುತ್ತಿರುವ ಆಸ್ಟ್ರೇಲಿಯಾಗೆ ಇಬ್ಬರನ್ನು ಕಟ್ಟಿಹಾಕುವುದೇ ದೊಡ್ಡ ಸವಾಲು. ಆ ಇಬ್ಬರು ಆಟಗಾರರು ಮತ್ಯಾರೂ ಅಲ್ಲ, ಶುಭ್​ಮನ್ ಗಿಲ್ ಹಾಗೂ ಮೊಹಮ್ಮದ್ ಸಿರಾಜ್.

ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಏಕದಿನ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಬ್ಯಾಟ್ ಮೂಲಕ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಗಿಲ್ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

ಅಹಮದಾಬಾದ್ ಟೆಸ್ಟ್‌ನಲ್ಲಿ ಅದ್ಭುತ ಶತಕ ಸಿಡಿಸಿದ್ದ ಶುಭ್​ಮನ್ ಗಿಲ್ ಏಕದಿನ ಮಾದರಿಯಲ್ಲಿ ಹೆಚ್ಚು ಅಪಾಯಕಾರಿ. ಏಕೆಂದರೆ ಕೇವಲ 21 ಏಕದಿನ ಪಂದ್ಯಗಳನ್ನಾಡಿರುವ ಗಿಲ್ 1254 ರನ್ ಗಳಿಸಿದ್ದಾರೆ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ 73 ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಇನ್ನು ಕೊನೆಯ 7 ಏಕದಿನ ಪಂದ್ಯಗಳಲ್ಲಿ 96.66 ಸರಾಸರಿಯಲ್ಲಿ 580 ರನ್ ಗಳಿಸಿದ್ದಾರೆ. ಈ ವೇಳೆ ದ್ವಿಶತಕ ಕೂಡ ಸಿಡಿಸಿ ಮಿಂಚಿದ್ದರು. ಹೀಗಾಗಿಯೇ ಶುಭ್​ಮನ್ ಗಿಲ್ ಅವರ ರನ್​ಗಳಿಕೆಯನ್ನು ನಿಯಂತ್ರಿಸುವುದು ಆಸ್ಟ್ರೇಲಿಯಾ ತಂಡಕ್ಕೆ ಸವಾಲಾಗಿ ಪರಿಣಮಿಸಲಿದೆ. ಇತ್ತ ಗಿಲ್ ಬ್ಯಾಟಿಂಗ್ ಮೂಲಕ ಅತ್ಯುತ್ತಮ ಆರಂಭ ಒದಗಿಸಿದರೆ, ಅತ್ತ ಬೌಲಿಂಗ್ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಅತ್ಯದ್ಬುತ ಆರಂಭ ಒದಗಿಸುತ್ತಿದ್ದಾರೆ.

ಪ್ರಸ್ತುತ ಏಕದಿನ ಕ್ರಿಕೆಟ್​ನ ನಂಬರ್ 1 ಬೌಲರ್​ ಆಗಿರುವ ಮೊಹಮ್ಮದ್ ಸಿರಾಜ್ ಕಳೆದ 21 ಪಂದ್ಯಗಳಲ್ಲಿ ಒಟ್ಟು 38 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಕೊನೆಯ 8 ಏಕದಿನ ಪಂದ್ಯಗಳಲ್ಲಿ 20 ವಿಕೆಟ್ ಉರುಳಿಸಿ ಅಪಾಯಕಾರಿ ಬೌಲರ್ ಎನಿಸಿಕೊಂಡಿದ್ದಾರೆ.

ಪವರ್​ಪ್ಲೇನಲ್ಲೇ ಟೀಮ್ ಇಂಡಿಯಾಗೆ ಯಶಸ್ಸು ತಂದುಕೊಡುವಲ್ಲಿ ಸಿರಾಜ್ ಯಶಸ್ವಿಯಾಗುತ್ತಿದ್ದು, ಇದುವೇ ಈಗ ಆಸೀಸ್​ ಪಡೆಯ ಚಿಂತೆಯನ್ನು ಹೆಚ್ಚಿಸಿದೆ. ಅಲ್ಲದೆ ಈ ಇಬ್ಬರು ಆಟಗಾರರ ಮೇಲೆ ಸಂಪೂರ್ಣ ಹಿಡಿತ ಸಾಧಿಸಲು ಆಸ್ಟ್ರೇಲಿಯಾ ತಂಡವು ವಿಶೇಷ ಯೋಜನೆಗಳನ್ನು ರೂಪಿಸುತ್ತಿದೆ.

ಆಸ್ಟ್ರೇಲಿಯಾ ಏಕದಿನ ತಂಡ:

ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

ಇದನ್ನೂ ಓದಿ: Virat Kohli: 40 ವರ್ಷಗಳ ಹಳೆಯ ಸಾಧನೆಯನ್ನು ಪುನರಾವರ್ತಿಸಿದ ವಿರಾಟ್ ಕೊಹ್ಲಿ

ಭಾರತ ಏಕದಿನ ತಂಡ:

ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!