-0.1 C
Munich
Thursday, March 16, 2023

India Vs Australia ODI Series Schedule, squads, streaming details in kannada | India vs Australia 2023 Schedule: ಇನ್ನು ಎರಡೇ ದಿನ ಬಾಕಿ; ಏಕದಿನ ಸರಣಿಯ ಪೂರ್ಣ ವಿವರ ಇಲ್ಲಿದೆ

ಓದಲೇಬೇಕು

India vs Australia 2023 Schedule: ಸದ್ಯ ಟೆಸ್ಟ್ ಸರಣಿಯ ಗೆಲುವಿನ ಸಂಭ್ರಮದಲ್ಲಿರುವ ಟೀಂ ಇಂಡಿಯಾ ಇನ್ನೇನು ಎರಡೇ ದಿನಗಳಲ್ಲಿ ಆಸೀಸ್ ವಿರುದ್ಧದ ಏಕದಿನ ಸರಣಿಯನ್ನು ಆಡಲಿದೆ.

ಭಾರತ- ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ

ಭಾರತ ಮತ್ತು ಆಸ್ಟ್ರೇಲಿಯಾ (India Vs Australia) ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ( Border Gavaskar Trophy) ಕೊನೆಗೊಂಡಿದೆ. 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾ ಸತತ 4ನೇ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡ ದಾಖಲೆಯನ್ನೂ ಬರೆದಿದೆ. ಸದ್ಯ ಟೆಸ್ಟ್ ಸರಣಿಯ ಗೆಲುವಿನ ಸಂಭ್ರಮದಲ್ಲಿರುವ ಟೀಂ ಇಂಡಿಯಾ ((Team India)) ಇನ್ನೇನು ಎರಡೇ ದಿನಗಳಲ್ಲಿ ಆಸೀಸ್ ವಿರುದ್ಧದ ಏಕದಿನ ಸರಣಿಯನ್ನು ಆಡಲಿದೆ. ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಭಾರತ ತಂಡ ಮೂರು ಪಂದ್ಯಗಳನ್ನು ಆಡಲಿದೆ. ಮುಂಬೈ, ವಿಶಾಖಪಟ್ಟಣಂ ಮತ್ತು ಚೆನ್ನೈನಲ್ಲಿ ಈ ಪಂದ್ಯಗಳು ನಡೆಯಲಿವೆ. ಈಗಾಗಲೇ ಈ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಮೊದಲ ಪಂದ್ಯದಿಂದ ಖಾಯಂ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ತಂಡವನ್ನು ಮುನ್ನಡೆಸಲಿದ್ದಾರೆ.

ರೋಹಿತ್ ಅಲ್ಲದೆ, ಟೆಸ್ಟ್ ಸರಣಿ ಸೋಲಿನ ಆಘಾತದಲ್ಲಿರುವ ಆಸೀಸ್ ತಂಡಕ್ಕೂ ಹಿನ್ನಡೆಯುಂಟಾಗಿದ್ದು, ತಂಡದ ಖಾಯಂ ನಾಯಕ ಪ್ಯಾಟ್ ಕಮಿನ್ಸ್ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ತಾಯಿಯ ಅನಾರೋಗ್ಯದಿಂದ ಪ್ಯಾಟ್ ಕಮಿನ್ಸ್ ಎರಡು ಟೆಸ್ಟ್ ಮುಗಿದ ಬಳಿಕ ತವರಿಗೆ ವಾಪಸ್ಸಾಗಿದ್ದರು. ಆದರೆ ಅಂತಿಮ ಟೆಸ್ಟ್ ಆರಂಭಕ್ಕೂ ಮುನ್ನ ಕಮಿನ್ಸ್ ಅವರ ತಾಯಿ ಅಸುನೀಗಿದರು. ಹೀಗಾಗಿ ಏಕದಿನ ಸರಣಿ ಆಡಲು ಕಮಿನ್ಸ್ ಭಾರತಕ್ಕೆ ಬರುತ್ತಿಲ್ಲ. ಕಮಿನ್ಸ್​ ಬದಲಿಗೆ ಸ್ಟೀವ್ ಸ್ಮಿತ್ ಏಕದಿನ ಸರಣಿಯಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಇತ್ತ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೈಯಕ್ತಿಕ ಕಾರಣಗಳಿಂದ ಮೊದಲ ಏಕದಿನ ಪಂದ್ಯ ಆಡುತ್ತಿಲ್ಲ.

IND vs AUS: ಏಕದಿನ ಸರಣಿಯಿಂದ ಶ್ರೇಯಸ್ ಔಟ್; ಸಂಜು ಸ್ಯಾಮ್ಸನ್​ಗೆ ಈಗಲಾದರೂ ಸಿಗುತ್ತಾ ಅವಕಾಶ?

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮಾರ್ಚ್ 17- ಮೊದಲ ಏಕದಿನ ಪಂದ್ಯ (ವಾಂಖೆಡೆ ಸ್ಟೇಡಿಯಂ, ಮುಂಬೈ)
  2. ಮಾರ್ಚ್ 19 – ಎರಡನೇ ಏಕದಿನ ಪಂದ್ಯ (YSR ಸ್ಟೇಡಿಯಂ, ವಿಶಾಖಪಟ್ಟಣಂ)
  3. ಮಾರ್ಚ್ 22- ಮೂರನೇ ಏಕದಿನ ಪಂದ್ಯ (MA ಚಿದಂಬರಂ ಸ್ಟೇಡಿಯಂ, ಚೆನ್ನೈ)

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,

ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ) ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊನಿಸ್, ಸೀನ್ ಅಬಾಟ್, ಅಷ್ಟನ್ ಅಗರ್, ಆಡಮ್ ಝಂಪಾ.

ಏಕದಿನ ಸರಣಿಯನ್ನು ವೀಕ್ಷಿಸುವುದು ಹೇಗೆ?

ಆಸ್ಟ್ರೇಲಿಯಾ ಮತ್ತು ಆತಿಥೇಯ ಭಾರತ ನಡುವಿನ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿವೆ. ಹಾಗೆಯೇ ಲೈವ್ ಸ್ಟ್ರೀಮಿಂಗ್ Hotstar ನಲ್ಲಿ ಲಭ್ಯವಿರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!