0.5 C
Munich
Wednesday, March 15, 2023

India vs Australia: Shreyas Iyer a doubt for Australia ODIs zp | India vs Australia: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಡೌಟ್

ಓದಲೇಬೇಕು

India vs Australia Odi: ಮಾರ್ಚ್ 17 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳು ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ.

India vs Australia Odi 2023: ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದೆ. ನಾಲ್ಕು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಭಾರತ ತಂಡವು ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ ಶುರುವಾಗಲಿರುವ ಏಕದಿನ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರೊಬ್ಬರು ಕಾಣಿಸಿಕೊಳ್ಳುವುದು ಅನುಮಾನ.

ಹೌದು, ಅಹಮದಾಬಾದ್​ ಟೆಸ್ಟ್ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದರು. ಇದೀಗ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬಿಸಿಸಿಐನ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಹೀಗಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಶುಕ್ರವಾರದಿಂದ ಆರಂಭವಾಗಲಿದೆ. ಆದರೆ ಅದರೊಳಗೆ ಶ್ರೇಯಸ್ ಅಯ್ಯರ್ ಚೇತರಿಸಿಕೊಳ್ಳುವುದು ಕೂಡ ಅನುಮಾನ. ಹೀಗಾಗಿ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇದಾದ ಬಳಿಕ ಅವರು ಗುಣಮುಖರಾದರೆ ಮಾತ್ರ ಮತ್ತೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಇತ್ತ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದರೂ ಬಿಸಿಸಿಐ ಬದಲಿ ಆಟಗಾರನ ಆಯ್ಕೆಗೆ ಮುಂದಾಗಿಲ್ಲ. ಅವರ ಬೆನ್ನು ನೋವಿನ ಸಮಸ್ಯೆಯ ಸಂಪೂರ್ಣ ವರದಿ ಬಂದ ಬಳಿಕವಷ್ಟೇ ಮುಂದಿನ ಬದಲಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Virat Kohli: 40 ವರ್ಷಗಳ ಹಳೆಯ ಸಾಧನೆಯನ್ನು ಪುನರಾವರ್ತಿಸಿದ ವಿರಾಟ್ ಕೊಹ್ಲಿ

ಮಾರ್ಚ್ 17 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳು ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ಭಾರತ ಏಕದಿನ ತಂಡ ಈ ಕೆಳಗಿನಂತಿದೆ.

ಭಾರತ ಏಕದಿನ ತಂಡ:

ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್, ಶ್ರೇಯಸ್ ಅಯ್ಯರ್ (ಗಾಯಾಳು).

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!