3.7 C
Munich
Wednesday, March 8, 2023

India Weather Updates: Rainfall Will Occur In North Interior Karnataka With In 24 Hours, Dry Weather Prevailed Over other states | India Weather Updates: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ, ಬಹುತೇಕ ರಾಜ್ಯಗಳಲ್ಲಿ ಬಿಸಿಲ ಝಳ ಮುಂದುವರಿಕೆ

ಓದಲೇಬೇಕು

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಮಳೆ

Image Credit source: Indiatimes.com

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಮೋಡಕವಿದ ವಾತಾವಣರವಿದ್ದರೆ, ರಾಜಸ್ಥಾನ, ಗುಜರಾತ್, ಮರಾಠವಾಡ, ಮಹಾರಾಷ್ಟ್ರದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳಲ್ಲಿ ದೇಶದ ಹವಾಮಾನದ ಮಾದರಿಯಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗುವುದಿಲ್ಲ. ಮಧ್ಯ ಭಾರತ, ಮಹಾರಾಷ್ಟ್ರ ಮತ್ತು ಗುಜರಾತ್ ಹೊರತುಪಡಿಸಿ, ಇಡೀ ದೇಶದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಇಳಿಕೆ ಅಥವಾ ಹೆಚ್ಚಳದ ಸಾಧ್ಯತೆಗಳಿಲ್ಲ.

ದೆಹಲಿ-ಎನ್‌ಸಿಆರ್‌ನಲ್ಲಿ, ಮಾರ್ಚ್ 8 ರ ಬುಧವಾರದಂದು ಸಹ ಆಕಾಶವು ಭಾಗಶಃ ಮೋಡದಿಂದ ಕೂಡಿರಲಿದೆ. ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ.

ಕಳೆದ 24 ಗಂಟೆಗಳಲ್ಲಿ, ಗುಜರಾತ್, ಮಹಾರಾಷ್ಟ್ರದ ಬಹುತೇಕ ಭಾಗಗಳನ್ನು ಒಳಗೊಂಡಂತೆ ಪೂರ್ವ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ 35 ರಿಂದ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನವಿದೆ. ಪೂರ್ವ ಯುಪಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದಲ್ಲಿ ಗರಿಷ್ಠ ತಾಪಮಾನ 31-35 ಡಿಗ್ರಿ ಸೆಲ್ಸಿಯಸ್ ಇತ್ತು.

ಮತ್ತಷ್ಟು ಓದಿ: India Weather Updates: ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಶ್ಚಿಮ ಉತ್ತರ ಪ್ರದೇಶದಲ್ಲಿ 28 ರಿಂದ 31 ಡಿಗ್ರಿ ಸೆಲ್ಸಿಯಸ್ ಇದೆ.
ಮತ್ತೊಂದೆಡೆ, ವಾಯುವ್ಯ ಭಾರತ, ಪೂರ್ವ ಭಾರತ, ಗುಜರಾತ್ ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಮಧ್ಯಪ್ರದೇಶ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ಪಶ್ಚಿಮ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಸೌರಾಷ್ಟ್ರ, ಕಚ್ ಮತ್ತು ಗುಜರಾತ್‌ನಲ್ಲಿ ಭಾರಿ ಮಳೆಯಾಗಿದೆ. ಮತ್ತೊಂದೆಡೆ, ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಧ್ಯ ಮಹಾರಾಷ್ಟ್ರದ ದೂರದ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ.

ಮುಂಬರುವ 24 ಗಂಟೆಗಳಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ, ಮಾರ್ಚ್ 9-10 ರಂದು, ಉತ್ತರ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ ಗಂಗಾ ಬಯಲು ಪ್ರದೇಶಗಳಲ್ಲಿ ಹವಾಮಾನ ಮಾದರಿಯು ಒಂದೇ ಆಗಿರುತ್ತದೆ.
ಮಹಾರಾಷ್ಟ್ರದಲ್ಲಿ ಗರಿಷ್ಠ ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಗಳಿದ್ದು, ಮುಂದಿನ ಮೂರು ದಿನಗಳಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.

ಗುಜರಾತ್ ನಲ್ಲಿ ಇನ್ನೆರಡು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿಲ್ಲ, ಆದರೆ ಮುಂದಿನ 3 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!