15.6 C
Munich
Thursday, March 23, 2023

Indian Army Cheetah helicopter crashed near Mandala hills area of Arunachal Pradesh | Army Helicopter Crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನ

ಓದಲೇಬೇಕು

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.

ಪ್ರಾತಿನಿಧಿಕ ಚಿತ್ರ

ಭಾರತೀಯ ಸೇನೆಯ (Indian Army) ಚೀತಾ ಹೆಲಿಕಾಪ್ಟರ್ (Cheetah helicopter) ಗುರುವಾರ ಅರುಣಾಚಲ ಪ್ರದೇಶದ (Arunachal Pradesh) ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ 09:15ರ ಸುಮಾರಿಗೆ ಅರುಣಾಚಲ ಪ್ರದೇಶದ ಬೊಮ್‌ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದ್ದು ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು  ಗುವಾಹಟಿ ಡಿಫೆನ್ಸ್ ಪಿಆರ್ ಒ  ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!