4.3 C
Munich
Tuesday, March 7, 2023

K Sudhakar announced BJP government will bring 2A reservation fot Balija community at Sri Yogi Nareyana Jayanti celebration at Chikkaballapur | Chikkaballapur: ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ನೀಡುತ್ತೇವೆ; ಸಚಿವ ಸುಧಾಕರ್ ಭರವಸೆ

ಓದಲೇಬೇಕು

ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದು ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ ಯೋಗಿ ನಾರೇಯಣ ಯತೀಂದ್ರರ 297ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)

ಚಿಕ್ಕಬಳ್ಳಾಪುರ: ಬಲಿಜ ಜನಾಂಗಕ್ಕೆ (Balija community) 2ಎ ಮೀಸಲಾತಿ (2A Reservation) ನೀಡುತ್ತೇವೆ ಎಂದು ಸಚಿವ ಡಾ. ಕೆ. ಸುಧಾಕರ್ (K Sudhakar) ಭರವಸೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ (Chikkaballapur) ಯೋಗಿ ನಾರೇಯಣ ಯತೀಂದ್ರರ 297ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಒಂದು ವಾರದಲ್ಲಿ ಬಲಿಜ ಸಮುದಾಯದ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು. ಪ್ರಸ್ತುತ 2ಎ ಮೀಸಲಾತಿಗಾಗಿ ದೊಡ್ಡ ದೊಡ್ಡ ಸಮುದಾಯಗಳು ಹೋರಾಟ ನಡೆಸುತ್ತಿವೆ. ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ಖಂಡಿತವಾಗಿಯೂ ಬಲಿಜ ಸಮುದಾಯದವರಿಗೆ ಉದ್ಯೋಗದಲ್ಲಿ 2ಎ ಮೀಸಲಾತಿ ನೀಡುತ್ತೇವೆ ಎಂದು ಸುಧಾಕರ್ ಹೇಳಿದರು. ಜತೆಗೆ, ಬಲಿಜ ಸಂಘಕ್ಕೆ 8 ಕೋಟಿ ರೂ. ಮೌಲ್ಯದ 1 ಎಕರೆ ಜಮೀನು ನೀಡುತ್ತೇವೆ ಎಂದೂ ಭರವಸೆ ನೀಡಿದರು.

ರಾಜ್ಯದಲ್ಲಿ ಬಲಿಜ ಜನಾಂಗ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದೆ. ಮುಂದಿನ ಒಂದು ವಾರದಲ್ಲಿ ಬಲಿಜ ಜನಾಂಗ ಅಭಿವೃದ್ದಿ ಮಂಡಳಿ ಸ್ಥಾಪನೆ ಮಾಡುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಮೀಸಲಾತಿ ತೆಗೆದು ಹಾಕಿದ್ದರು. ಉದ್ಯೋಗ ಹಾಗೂ ಶಿಕ್ಷಣದಲ್ಲಿ ನೀಡುತ್ತಿದ್ದ 2ಎ ಮೀಸಲಾತಿ ತೆಗೆದು ಹಾಕಿದ್ದರು. ಆದರೆ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಿಕ್ಷಣದಲ್ಲಿ 2ಎ ಮೀಸಲಾತಿ ಜಾರಿಗೆ ತಂದಿದ್ದರು. ಸಾಧ್ಯವಾದರೆ ಜನಾಂಗಕ್ಕೆ ಒಳ್ಳೆಯದು ಮಾಡಬೇಕು. ಇಲ್ಲವಾದರೆ ಕೆಟ್ಟದ್ದು ಮಾಡಬಾರದು ಎಂದು ಅವರು ಹೇಳಿದರು.

ಚಿಕ್ಕಬಳ್ಳಾಫುರ ನಗರದ ನಂದಿ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಟಿಸಿ ಉಪಾದ್ಯಕ್ಷ ಕೆವಿ ನವೀನ್ ಕಿರಣ್ ಕೂಡ ಭಾಗವಹಿಸಿದರು.

ಬಲಿಜ ಮುಖಂಡರ ಒಳಜಗಳ ಬಟಾ ಬಯಲು

ಚಿಕ್ಕಬಳ್ಳಾಪುರದಲ್ಲಿ ನಡೆದ ಯೋಗಿ ನಾರೇಯಣ ಯತೀಂದ್ರರ ಜಯಂತಿಯಲ್ಲಿ ಬಲಿಜ ಜನಾಂಗ ಮುಖಂಡರ ಒಳಜಗಳ ಬಯಲಿಗೆ ಬಂತು. ಇದನ್ನು ಕಂಡು ಸಚಿವ ಸುಧಾಕರ್ ಬಲಿಜ ಮುಖಂಡರಿಗೆ ಹಿತವಚನ ಹೇಳಿದರು.

ವಿವಿಧ ಸಮುದಾಯಗಳಿಂದ ಮೀಸಲಾತಿ ಬೇಡಿಕೆ, ಪ್ರತಿಭಟನೆಗಳು ಹೆಚ್ಚುತ್ತಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಂಥ ಹೊತ್ತಿನಲ್ಲೇ ಸುಧಾಕರ್ ಅವರು ಬಲಿಜ ಜನಾಂಗಕ್ಕೆ ಮೀಸಲಾತಿ ನೀಡುವ ಬಗ್ಗೆ ಭರವಸೆ ನೀಡಿರುವುದು ಸರ್ಕಾರದ ಮೇಲೆ ಮತ್ತಷ್ಟು ಒತ್ತಡಕ್ಕೆ ಕಾರಣವಾಗಲಿದೆ.

ಇದನ್ನೂ ಓದಿ: 2C 2D Reservation ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಕೆಟಗರಿಗೆ ಮೀಸಲಾತಿಗೆ ಬ್ರೇಕ್ ಹಾಕಿದ ಕರ್ನಾಟಕ ಹೈಕೋರ್ಟ್

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ಆಗ್ರಹ ಇತ್ತೀಚೆಗೆ ಜೋರಾಗಿ ಕೇಳಿಬರುತ್ತಿದೆ. ಈ ವಿಚಾರವಾಗಿ ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಭಾರೀ ಹೋರಾಟವೂ ನಡೆಯುತ್ತಿದೆ. ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಲವಾರು ದಿನಗಳ ಕಾಲ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವ ಬಗ್ಗೆ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀಗಳು, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಹೇಳಿದ್ದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರು ಪ್ರತಿಭಟನೆಗೆ ಮುಂದಾದ ಪಂಚಮಸಾಲಿ ಸಮಾಜದ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆಯೂ ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!