9.1 C
Munich
Thursday, March 9, 2023

karnataka cabinet decides to start hampi sugar factory in Vijayanagar and other major decisions here in Kannada | ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುಮೋದನೆ; ಸಚಿವ ಸಂಪುಟದ ಪ್ರಮುಖ ನಿರ್ಧಾರಗಳ ವಿವರ ಇಲ್ಲಿದೆ

ಓದಲೇಬೇಕು

ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳ ಬಗ್ಗೆ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಸಚಿವ ಮಾಧುಸ್ವಾಮಿ (ಸಂಗ್ರಹ ಚಿತ್ರ)

ಬೆಂಗಳೂರು: ವಿಜಯನಗರದಲ್ಲಿ (Vijayanagar) ಹಂಪಿ ಸಕ್ಕರೆ ಕಾರ್ಖಾನೆ (Hampi Sugar Factory) ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ (Karnataka Cabinet) ಬುಧವಾರ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳ ಬಗ್ಗೆ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (JC Madhuswamy) ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. 454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಲಾಗುವುದು. ಮಾರ್ಗಸೂಚಿ ದರದಲ್ಲಿ ಕಾರ್ಖಾನೆಗೆ 82 ಎಕರೆ ಜಮೀನು ಮಂಜೂರು ಮಾಡಲಾಗುವುದು. ಕಾರ್ಖಾನೆ ಸ್ಥಾಪನೆಯಿಂದ 2 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಫ್ತು ಘಟಕ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ‘ಇನ್‌ವೆಸ್ಟ್ ಕರ್ನಾಟಕ 2022’ ಅನ್ನು ಆಯೋಜಿಸುವ ಸಲುವಾಗಿ ಇವೆಂಟ್‌ ಮ್ಯಾನೇಜ್‌ಮೆಂಟ್ಸ್‌ ಸಹಭಾಗಿಗಳನ್ನು ನೇಮಕ ಮಾಡಿಕೊಳ್ಳಲು 08.09.2022 ರಂದು ಹೊರಡಿಸಲಾದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ಪಡೆಯಲಾಗಿದೆ. 74.99 ರೂ ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗಣಿಭಾದಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರವನ್ನು ಕರ್ನಾಟಕ ಗಣಿ ಪರಿಸರ ಪುನಶ್ವೇತನ ನಿಗಮಕ್ಕೆ ನೀಡಲು ಸಮ್ಮತಿಸಲಾಗಿದೆ. ಗಿಣಿಗೇರಾ-ರಾಯಚೂರು ರೈಲ್ವೆ ಮಾರ್ಗಕ್ಕೆ ರಾಜ್ಯದ ಪಾಲಿನ ಹಣ ಬಿಡುಗಡೆ, ಗಿಣಿಗೇರಾ-ರಾಯಚೂರು, ತುಮಕೂರು-ರಾಯದುರ್ಗ, ಬಾಗಲಕೋಟೆ-ಕುಡಚಿ ಮತ್ತು ಚಿಕ್ಕಮಗಳೂರು-ಬೇಲೂರು ನೂತನ ರೈಲು ಮಾರ್ಗಗಳ ಯೋಜನೆಗಳ ಪರಿಷ್ಕೃತ ಅಂದಾಜುಗಳಿಂದ ಹೆಚ್ಚಾಗಿರುವ ರಾಜ್ಯದ ಪಾಲಿನ ಮೊತ್ತ ರೂ. 964.41 ಕೋಟಿಗಳಿಗೆ ಅನುಮೋದನೆ ಪಡೆಯಲಾಗಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘಕ್ಕೆ ಶಿವಮೊಗ್ಗದ ಕಲ್ಲಹಳ್ಳಿ ಗ್ರಾಮದಲ್ಲಿ 1-31 ಎಕರೆ/ ಗುಂಟೆ ಜಮೀನಿನು ಮಂಜೂರು ಮಾಡಲಾಗಿದೆ. ‘ಸ್ಮಶಾನದ ಉದ್ದೇಶ’ದ ಬದಲಾಗಿ ಶೈಕ್ಷಣಿಕ ಉದ್ದೇಶ ಎಂದು ಮಾರ್ಪಾಡು ಮಾಡಲು ಒಪ್ಪಿಗೆ ಪಡೆಯಲಾಗಿದೆ. ಶ್ರೀಹರ ಪಂಚಮಸಾಲಿ ಸೇವಾ ಟ್ರಸ್ಟ್​ಗೆ ಶಿಕಾರಿಪುರ ತಾಲ್ಲೂಕು, ದೂಪದಹಳ್ಳಿ ಗ್ರಾಮದಲ್ಲಿ 20 ಗುಂಟೆ ಜಮೀನು‌ ಮಂಜೂರು ಮಾಡಲಾಗಿದೆ. ಸಮುದಾಯ ಭವನ ನಿರ್ಮಾಣದ ಉದ್ದೇಶಕ್ಕಾಗಿ ಈ ಜಮೀನು ನೀಡಲಾಗುತ್ತದೆ.

ಇದನ್ನೂ ಓದಿ: ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಮಾ 12 ರಂದು ಮೈಸೂರು-ಬೆಂಗಳೂರು ಸಂಚಾರ ಮಾರ್ಗ ಬದಲಾವಣೆ

ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಶಿಕಾರಿಪುರ ತಾಲ್ಲೂಕಿನ ಧೂಪದಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಲು 2 ಎಕರೆ ಜಮೀನು‌ ಮಂಜೂರು ಮಾಡಲಾಗಿದೆ.

ಸರ್ಕಾರಿ ನೌಕರರಿಗೆ ಶೇಕಡಾ 17 ರಷ್ಟು ವೇತನ ಹೆಚ್ಚಳ ಮಾಡಿರುವುದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 7,246.85 ಕೋಟಿ ರೂ. ವೆಚ್ಚ ತಗಲುತ್ತದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಪ್ರತಿ ಗ್ರಾಮದಲ್ಲಿ ಬಿಎಸ್​ಎನ್​ಎಲ್​ಗೆ 2000 ಚದರ ಅಡಿ ಜಮೀನು

ದೂರ ಸಂಪರ್ಕ ಜಾಲವಿಲ್ಲದ ಗ್ರಾಮಗಳಲ್ಲಿ ದೂರ ಸಂಪರ್ಕ ಟವರ್​​ಗಳನ್ನು ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ. ಇದಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಬಿಎಸ್‌ಎನ್‌ಎಲ್‌ ಸಂಸ್ಥೆಗೆ 2000 ಚದರ ಅಡಿ ಜಮೀನನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗುವುದು. ಕೇಂದ್ರ ಸರ್ಕಾರದ ‘4-ಜಿ ಸ್ಯಾಚುರೇಶನ್ ಪ್ರಾಜೆಕ್ಟ್’ ಕಾರ್ಯಕ್ರಮದ ಅಡಿಯಲ್ಲಿ ಟವರ್​​​ಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಮೋಟಾರು ವಾಹನ ತೆರಿಗೆಯಿಂದ ವಿನಾಯಿತಿ ನೀಡಲೂ ನಿರ್ಧಾರ ಕೈಗೊಳ್ಳಲಾಗಿದೆ. 2022-23ನೇ ಸಾಲಿನ ತೆರಿಗೆ ಮೊತ್ತ 166.99 ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿಸಿವುದರಿಂದ ವಿನಾಯಿತಿ ನೀಡಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಇನ್ನೂ ಏನೇನು ನಿರ್ಧಾರ?

  • ಗೋಕಾಕ್ ನಗರವನ್ನು ಪ್ರವಾಹದಿಂದ ರಕ್ಷಿಸುವುದಕ್ಕಾಗಿ ರಾಜ್ಯ ಹೆದ್ದಾರಿ 31ರ ತನಕ ನದಿಯುದ್ದಕ್ಕೂ ರಕ್ಷಣಾ ಗೋಡೆ ನಿರ್ಮಿಸಲು 650 ಕೋಟಿ ರೂ. ಮಂಜೂರು
  • ಆರ್​ಎಸ್​ಎಸ್ ಅಧೀನದಲ್ಲಿ ಕಾರ್ಯನಿರ್ವಹಿಸುವ ಜನಸೇವಾ ಟ್ರಸ್ಟ್​ಗೆ ಕುರುಬರಹಳ್ಳಿಯಲ್ಲಿ 10 ಗುಂಟೆ ಜಮೀನು ಮಂಜೂರು
  • ಹಾವೇರಿಯ ದೇವಗಿರಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್​ಗೆ 10 ಎಕರೆ ಭೂಮಿ ಮಂಜೂರು
  • ಕಲಬುರಗಿಯಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣಕ್ಕೆ ನಿರ್ಧಾರ
  • ಯಲಹಂಕದ ಜಾಲಹಳ್ಳಿಯಲ್ಲಿ ಕೊಡವ ಸಮಾಜಕ್ಕೆ ಮಾರ್ಗಸೂಚಿ ದರದಲ್ಲಿ 7 ಎಕರೆ ಜಮೀನು ಮಾರಾಟ
  • ಜಲಜೀವನ್ ಮಿಷನ್ ಅಡಿ ಚಿತ್ರದುರ್ಗದ ಹಿರಿಯೂರಿಗೆ 49 ಕೋಟಿ ರೂ. ಅನುದಾನ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!