ರಾಜ್ಯ ಸರ್ಕಾರದಿಂದ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ವಿರುದ್ದ ಇಲಾಖಾ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಡಿ. ರೂಪಾ ಮೌದ್ಗಿಲ್ (D Roopa moudgil) ನಡುವಿನ ಆರೋಪ-ಪ್ರತ್ಯಾರೋಪ ಪ್ರಕರಣವನ್ನು ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇಬ್ಬರು ಅಧಿಕಾರಿಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಡಿ.ರೂಪಾ ಬಹಿರಂಗ ಹೇಳಿಕೆ. ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಫೋಟೋ ಪ್ರಕಟಣೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವುದು. IAS ರೋಹಿಣಿ ಸಿಂಧೂರಿ ವಿರುದ್ಧ ಈಜುಕೊಳ ನಿರ್ಮಾಣ ಆರೋಪ. ರೋಹಿಣಿಯಿಂದ ಪಾರಂಪರಿಕ ಕಟ್ಟಡ ನಿಯಮಾವಳಿ ಉಲ್ಲಂಘನೆ ಹಾಗೂ ಬ್ಯಾಗ್ ಖರೀದಿ ಪ್ರಕರಣ, ಸಿವಿಲ್ ಸೇವಾ ನಿಯಮಾವಳಿ ಉಲ್ಲಂಘನೆ ಮಾಡಿರುವ ಬಗ್ಗೆಯೂ ಇಬ್ಬರು ವಿರುದ್ದ ಇಲಾಖೆ ತನಿಖಾ ವ್ಯಾಪ್ತಿಗೆ ವಹಿಸಿ ಆದೇಶಿಸಿದ್ದಾರೆ.
ದೂರು ನೀಡಿದ್ದ ಇಬ್ಬರೂ ಅಧಿಕಾರಿಗಳು
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರುವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ದೂರು ನೀಡಿದ ಅಂದೇ ಐಪಿಎಸಿ ಅಧಿಕಾರಿ ಡಿ ರೂಪಾ ಮೌದ್ಗಿಲ್ ಕೂಡ ಪ್ರತಿದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು.
ಇದನ್ನೂ ಓದಿ: Rohini Vs Roopa: ಸತ್ಯಮೇವ ಜಯತೇ ಎಂದ ಡಿ.ರೂಪಾ, ಕುತೂಹಲ ಮೂಡಿಸಿದ IPS ನಡೆ
ಇದಾದ ಬಳಿಕ ರಾಜ್ಯ ಸರ್ಕಾರ ಯಾವುದೇ ಸ್ಥಳ ನೀಡದೇ ರೋಹಿಣಿ ಸಿಂಧೂರಿ ಹಾಗೂ ಡಿ ರೂಪಾ ಅವರನ್ನು ವರ್ಗಾವಣೆ ಮಾಡಿತ್ತು. ಇದೀಗ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇಬ್ಬರ ವಿರುದ್ಧ ಇಲಾಲಾ ತನಿಖೆಗೆ ಆದೇಶಿಸಿದ್ದಾರೆ.