2.2 C
Munich
Monday, March 6, 2023

Karnataka Election Former IAS officer Laxmi Narayan joins BJP at Vijayanagara news in kannada | Vijayanagara: ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮೀ ನಾರಾಯಣ ಬಿಜೆಪಿ ಸೇರ್ಪಡೆ

ಓದಲೇಬೇಕು

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಇದೀಗ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ ಅವರು ಕೇಸರಿ ಪಡೆ ಸೇರ್ಪಡೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮೀ ನಾರಾಯಣ ಬಿಜೆಪಿಗೆ ಸೇರ್ಪಡೆ

ವಿಜಯನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಹೆಚ್ಚಾಗುತ್ತಿದ್ದು, ಈಗಾಗಲೇ ಅನೇಕರು ನಾಯಕರು, ಮುಖಂಡರು ವಿವಿಧ ಪಕ್ಷ ಸೇರ್ಪಡೆಯಾಗಿದ್ದಾರೆ. ಇನ್ನು ಕೆಲವರು ಬೇರೆಬೇರೆ ಪಕ್ಷಕ್ಕೆ ಸೇರಲು ಮುಂದಾಗಿದ್ದಾರೆ. ಮಾತ್ರವಲ್ಲದೆ, ಐಎಎಸ್, ಐಪಿಎಸ್​ನಂತಹ ಉನ್ನತ ಹುದ್ದೆಯಿಂದ ನಿವೃತ್ತಿ ಹೊಂದಿರುವವರು ಕೂಡ ರಾಜಕೀಯಕ್ಕೆ ಎಂಟ್ರಿಕೊಡುತ್ತಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ (Lakshmi Narayana) ಅವರು ಕೇಸರಿ ಪಡೆ ಸೇರ್ಪಡೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಿಜೆಪಿ ಕಚೇರಿಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಇದ್ದ ಸಂದರ್ಭದಲ್ಲಿ ಲಕ್ಷ್ಮೀ ನಾರಾಯಣ ಕರ್ತವ್ಯ ನಿರ್ವಹಿಸಿದ್ದರು. ಎಸ್​ಸಿ ಮೀಸಲು ಕ್ಷೇತ್ರವಾಗಿರುವ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಲಕ್ಷ್ಮೀ ನಾರಾಯಣ ಅವರು ಕಳೆದ ಕೆಲವು ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದು, ಈ ವೇಳೆ ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ಕಾಸೆಟ್ಟಿ ಉಮಾಪತಿ, ಲಕ್ಷ್ಮೀ ನಾರಾಯಣ ಕುಟುಂಬಸ್ಥರು ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: ಎಸ್​ಎಂ ಕೃಷ್ಣ ಭೇಟಿಯಾದ ಸಂಸದೆ ಸುಮಲತಾ; ಬಿಜೆಪಿ ಸೇರ್ಪಡೆ ಬಗ್ಗೆ ಏನಂದ್ರು ನೋಡಿ

ಭಾರೀ ಸದ್ದು ಮತ್ತು ಹುಮ್ಮಸ್ಸಿನೊಂದಿಗೆ ಆಮ್ ಆದ್ಮಿ ಪಕ್ಷ ಸೇರಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಬಹಳ ಬೇಗ ಭ್ರಮನಿರಸನಗೊಂಡು ಭಾರತೀಯ ಜನತಾ ಪಕ್ಷ ಸೇರಿದ್ದರು. ಬೆಂಗಳೂರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ರಾವ್ ಅವರೊಂದಿಗೆ ಇನ್ನೂ ಕೆಲವರನ್ನು ಸಹ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು.

ಭಾಸ್ಕರ್​ ರಾವ್​ ಅವರು ಬಸವನಗುಡಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಈ ಹಿಂದೆ ಎಎಪಿಯಲ್ಲಿ ಇದ್ದಾಗಲೂ ಇದೇ ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿದ್ದರು. ಹೇಳಿ ಕೇಳಿ ಬೆಂಗಳೂರಿನ ಬಸವನಗುಡಿ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಕ್ಷೇತ್ರದಿಂದಲೇ ಭಾಸ್ಕರ್ ರಾವ್ ಸ್ಪರ್ಧಿಸಲು ಬಯಸಿದ್ದಾರೆ. ಆದರೆ ಬಸವನಗುಡಿಯಲ್ಲಿ ಈಗಾಗಲೇ ಬಿಜೆಪಿಯ ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಇರುವುದರಿಂದ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಭಾಸ್ಕರ್ ರಾವ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಪ್ಲಾನ್ ಇದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಳಿಸಲಾಗುತ್ತದೆ ಎನ್ನಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!