2.6 C
Munich
Monday, March 6, 2023

Karnataka health department announced detailed summer guidelines heat waves and weather updates | Summer: ಬೇಸಿಗೆ ಬೇಗೆಯಿಂದ ರಕ್ಷಿಸಿಕೊಳ್ಳಲು ಹೀಗೆ ಮಾಡಿ; ಆರೋಗ್ಯ ಇಲಾಖೆಯಿಂದ ವಿಸ್ತೃತ ಮಾರ್ಗಸೂಚಿ

ಓದಲೇಬೇಕು

ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಏನೇನು ಮಾಡಬೇಕು? ಏನು ಮಾಡಬಾರದು? ಆರೋಗ್ಯ ರಕ್ಷಣೆಗೆ ಹಿರಿಯರು, ವೃದ್ಧರು ಹಾಗೂ ಮಕ್ಕಳ ಬಗ್ಗೆ ಏನೇನು ಎಚ್ಚರಿಕೆ ವಹಿಸಬೇಕು ಎಂಬ ಸಲಹೆ-ಸೂಚನೆಯನ್ನು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳನ್ನು ಇಲ್ಲಿ ನೀಡಲಾಗಿದೆ.

ಬೆಂಗಳೂರು: ಬೇಸಿಗೆ (Summer) ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಬಿಸಿಲಿನ ಬೇಗೆಯೂ ಹೆಚ್ಚಾಗತೊಡಗಿದೆ. ಬಿಸಿ ಗಾಳಿ (Heat Wave) ಹಾಗೂ ಬಿಸಿಯಾದ ವಾತಾವರಣದಿಂದ ಜನರು ಅಸ್ವಸ್ಥರಾಗುವುದನ್ನು ತಪ್ಪಿಸಲು ಮತ್ತು ಅತಿಯಾದ ಉಷ್ಣಾಂಶದಿಂದ ಅನಾರೋಗ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಏನೇನು ಮಾಡಬೇಕು? ಏನು ಮಾಡಬಾರದು? ಆರೋಗ್ಯ ರಕ್ಷಣೆಗೆ ಹಿರಿಯರು, ವೃದ್ಧರು ಹಾಗೂ ಮಕ್ಕಳ ಬಗ್ಗೆ ಏನೇನು ಎಚ್ಚರಿಕೆ ವಹಿಸಬೇಕು ಎಂಬ ಸಲಹೆ-ಸೂಚನೆಯನ್ನು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳನ್ನು ಇಲ್ಲಿ ನೀಡಲಾಗಿದೆ.

ಏನೇನು ಮಾಡಬೇಕು?

  • ಹೆಚ್ಚು ನೀರು ಕುಡಿಯುವುದು: ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀಡು ಆಗಾಗ್ಗೆ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ.
  • ಪ್ರಯಾಣದ ಸಂದರ್ಭದಲ್ಲಿ ನೀರನ್ನು ಜತೆಗೆ ತೆಗೆದುಕೊಂಡು ಹೋಗುವುದು ಉತ್ತಮ.
  • ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಣ್ಣಿಗೆ 11, ಹಣ್ಣಿನ ಜ್ಯೂಸ್​​​ಗಳನ್ನು ಒಂದು ಚಿಟಿಕೆ ಉಪ್ಪಿಸೊಂದಿಗೆ ಸೇವಿಸುವುದು ಉತ್ತಮ.
  • ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
  • ಶರೀರವನ್ನು ಸುರಕ್ಷಿಸವಾಗಿಟ್ಟುಕೊಳ್ಳಲು ತಿಳಿ ಬಣ್ಣದ, ಮೆತ್ತಗಿನ ಹತ್ತಿ ಬಟ್ಟೆ ಧರಿಸುವುದು ಒಳ್ಳೆಯದು.
  • ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ, ಶೂ ಧರಿಸಬೇಕು.
  • ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆಯುತ್ತಿರಿ.
  • ಸಾಧ್ಯವಾದಷ್ಟು ಒಳಾಂಗಣದಲ್ಲಿರಿ.
  • ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ.
  • ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಣಣಿಯರು, ಹೊರಾಂಗಣದಲ್ಲ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಂದ ಬಳಲುತ್ತಿರುವವರು ಹಾಗೂ ಇತರ ಅರೋಗ್ಯ ಸಮಸ್ಯೆಗಳರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಏನೇನು ಮಾಡಬಾರದು?

  • ಬಿಸಿಲಿನಲ್ಲಿ, ಅಂದರೆ ಮಧ್ಯಾಹ್ನ 12 ಗಂಟೆಯಿ೦ದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
  • ಈ ಸಂದರ್ಭದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಮಾಡಬಾರದು.
  • ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
  • ಮದ್ಯಪಾನ, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್‌ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಂದ ದೂರವಿರಿ.
  • ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
  • ಹೆಚ್ಚು ಪ್ರೊಟೀನ್​​ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
  • ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ / ಅವುಗಳಿಗೆ ಅಪಾಯಕಾರಿಯಾಗಬಹುದು.

ಇಷ್ಟೇ ಅಲ್ಲದೆ ಕೆಲಸದ ಸ್ಥಳಗಳಲ್ಲಿ ಮಾಡಬೇಕಾದ ವ್ಯವಸ್ಥೆಗಳೂ ಸೇರಿದಂತೆ ಇನ್ನೂ ಅನೇಕ ಸಲಹೆ ಸೂಚನೆಗಳನ್ನು ಆರೋಗ್ಯ ಇಲಾಖೆ ನೀಡಿದೆ. ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಸಲಹೆ ಸೂಚನೆಗಳನ್ನೂ ನೀಡಿದೆ.

ಇದನ್ನೂ ಓದಿ: Summer: ಬೇಸಿಗೆಯ ಬಿಸಿ ಗಾಳಿ ಎದುರಿಸಲು ಸಿದ್ಧತೆ; ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಮುಂಬರುವ ಬೇಸಿಗೆ ದಿನಗಳಲ್ಲಿ ಬಿಸಿ ಗಾಳಿಯನ್ನು ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಅನೇಕ ಸಲಹೆ ಸೂಚನೆಗಳನ್ನೂ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!