0.3 C
Munich
Thursday, March 16, 2023

Karnataka Politics Minister Somanna visit Delhi tomorrow likely to meet BJP high command leaders there | ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಚಿವ ಸೋಮಣ್ಣ, ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಸಾಧ್ಯತೆ

ಓದಲೇಬೇಕು

ನಾಳೆ (ಮಾರ್ಚ್ 15) ಸೊಮಣ್ಣ ಅವರು ದೆಹಲಿಗೆ ತೆರಳಲಿದ್ದು, ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ. ಸದ್ಯ ಸೋಮಣ್ಣ ದೆಹಲಿ ಪ್ರವಾಸ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವವೂ ಬಿರುಸುಗೊಂಡಿದೆ. ಸಚಿವ ನಾರಾಯಣಗೌಡ ನಂತರ ಬಿಜೆಪಿಯ ಪ್ರಭಾವಿ ವಸತಿ ಸಚಿವ ವಿ.ಸೋಮಣ್ಣ (V Somanna) ಕೂಡ ಕಾಂಗ್ರೆಸ್‌ಗೆ ಜಿಗಿಯುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಈ ನಡುವೆ ಬಿಜೆಪಿ ಪ್ರಮುಖ ನಾಯಕರು ಮನವೊಲಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೆ ಸೊಮಣ್ಣ ಅವರು ದೆಹಲಿಗೆ ಪ್ರಯಾಣ ಕೈಗೊಳ್ಳಲು ಮುಂದಾಗಿದ್ದಾರೆ. ನಾಳೆ (ಮಾರ್ಚ್ 15) ಸೊಮಣ್ಣ ಅವರು ದೆಹಲಿಗೆ ತೆರಳಲಿದ್ದು, ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ. ಸದ್ಯ ಸೋಮಣ್ಣ ದೆಹಲಿ ಪ್ರವಾಸ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ಕೆಲ ಕಾರಣಗಳಿಂದ ಪಕ್ಷದ ನಾಯಕರ ಮೇಲೆ ಮುನಿಸಿಕೊಂಡಿದ್ದ ಸಚಿವ ವಿ, ಸೋಮಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಿಂದ ಸೊಮಣ್ಣ ಕಾಂಗ್ರೆಸ್ ಸೇರ್ಪಡೆ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಬಿಜೆಪಿ ಪ್ರಮುಖ ನಾಯಕರು ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟು ದಿನಗಳಿಂದ ನಿಗೂಢ ನಡೆ ಇಟ್ಟುಕೊಂಡು ಬಂದಿದ್ದ ಸೋಮಣ್ಣ, ಇದೀಗ ಈ ಬಗ್ಗೆ ಮೌನ ಮುರಿದಿದ್ದು, ಇನ್ಮುಂದೆ ತೇಜೋವಧೆ ಮಾಡಬೇಡಿ ಎಂದು ಹೇಳುವ ಮೂಲಕ ತಮ್ಮ ರಾಜಕೀಯ ನಿಲುವು ಪ್ರಕಟಿಸಿದ್ದಾರೆ. ಅಲ್ಲದೇ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ​​ ನಾನು ಕಾಂಗ್ರೆಸ್​​ಗೆ ಹೋಗುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನನ್ನನ್ನು ಸಂಪರ್ಕಿಸಿಲ್ಲ. ನಾನು ಕಾಂಗ್ರೆಸ್​ಗೆ ಹೋಗುತ್ತೇನೆಂದು ವದಂತಿ ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗೊಂದಲಳಿಗೆ ತೆರೆ ಎಳೆದರು. ಪ್ರಧಾನಿ ಮೋದಿ, ಬೊಮ್ಮಾಯಿ ನಾಯಕತ್ವದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ನಾಯಕ, ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರ್ಪಡೆಯಾಗಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ 15-ನಿಮಿಷದ ವಿಡಿಯೋದಲ್ಲಿ 30 ಸೆಕೆಂಡ್ ಅವಧಿಯ ಮಾತುಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ: ಅರುಣ್ ಸೋಮಣ್ಣ

ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಬೆನ್ನ ಹಿಂದೆಯೇ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನಗಳನ್ನ ಸಿಎಂ ಬೊಮ್ಮಾಯಿ ಮತ್ತಿತರರು ಮಾಡಿದ್ದರು. ಸಚಿವ ಅಶೋಕ್​ ಸಹ ಸೋಮಣ್ಣ ಮನವೊಲಿಸುವ ಪ್ರಯತ್ನ ಮಾಡಿದ್ದರು. ಅಂತಿಮವಾಗಿ ಅಶೋಕ್ ಮೊನ್ನೇ ಅಷ್ಟೇ​ ಸೋಮಣ್ಣನವರನ್ನು ಸಿಎಂ ಬಸವರಾಜ ಬೊಮ್ಮಾಯಿ ಬಳಿ ಕರೆದುಕೊಂಡು ಹೋಗಿ ಮಾತುಕತೆ ಮಾಡಿದ್ದರು. ಈ ಮಾತುಕತೆ ಕೊಂಚ ಫಲಪ್ರದವಾಗಿತ್ತು.

ಧಾರವಾಡದಲ್ಲಿ ನಡೆದ ಐಐಟಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಂದಿದ್ದ ವಿ.ಸೋಮಣ್ಣರನ್ನು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದ ನಾಯಕರು ಸಂಧಾನ ಸಭೆ ನಡೆಸಿದ್ದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಉಪಹಾರ ಸೇವನೆ ಮಾಡುತ್ತಲೇ ಚರ್ಚೆ ನಡೆಸಿದರು‌. ಬರೋಬ್ಬರಿ ಒಂದು ಗಂಟೆಗಳ ವಿ.ಸೋಮಣ್ಣರೊಂದಿಗೆ ಸಭೆ ಮಾಡಿ ಮನವೊಲಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯಶಸ್ವಿಯಾಗಿದ್ದಾರೆ. ಸೋಮಣ್ಣ ಅವರು ಪಕ್ಷದ ಮೇಲೆ ಮುನಿಸುಗೊಳ್ಳಲು ಆರಂಭಿಸಿದ ನಂತರ ಇತ್ತೀಚೆಗಷ್ಟೇ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ಭೇಟಿ ಮುನಿಸು ಶಮನಗೊಳಿಸುವುದಾಗಿದೆ ಎನ್ನಲಾಗಿದೆ.

ಚಾಮರಾಜನಗರ ಜಿಲ್ಲಾ ಉಸ್ತುವಾರಿಯಾಗಿದ್ದರೂ ಜಿಲ್ಲೆಯಲ್ಲಿ ನಡೆದಿದ್ದ ವಿಜಯ ಸಂಕಲ್ಪ ಯಾತ್ರೆಗೆ ಗೈರಾಗಿದ್ದರು. ಈ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಸೋಮಣ್ಣ ಗೈರು ಆಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!