10.4 C
Munich
Sunday, March 19, 2023

Karnataka polls: AAP promises Rs 3000 per month for unemployed youth manifesto released | Karnataka polls: ಎಎಪಿ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ಸಿಗಲಿದೆ ಪ್ರತಿ ತಿಂಗಳು ಹಣ; ಪ್ರಣಾಳಿಕೆಯಲ್ಲಿ ಏನೇನಿದೆ ನೋಡಿ

ಓದಲೇಬೇಕು

ಕರ್ನಾಟಕದಲ್ಲಿ ಹೇಗಾದರೂ ಮಾಡಿ ಖಾತೆ ತೆರೆಯಬೇಕೆಂಬ ಹಂಬಲದಲ್ಲಿರುವ ಆಮ್ ಆದ್ಮಿ ಪಕ್ಷವು ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಕೆಲವು ಭರವಸೆಗಳನ್ನು ಮಂಗಳವಾರ ಘೋಷಿಸಿದೆ. ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಭರವಸೆ ನೀಡಿದೆ. ಪ್ರತಿ ತಿಂಗಳು ಪ್ರತಿಯೊಂದು ಮನೆಗೂ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿದೆ.

ಎಎಪಿಯ ಕರ್ನಾಟಕದ ನಾಯಕರು ಚುನಾವಣಾ ಭರವಸೆಗಳನ್ನು ಬಿಡುಗಡೆ ಮಾಡಿದರು

ಬೆಂಗಳೂರು: ಕರ್ನಾಟಕದಲ್ಲಿ ಹೇಗಾದರೂ ಮಾಡಿ ಖಾತೆ ತೆರೆಯಬೇಕೆಂಬ ಹಂಬಲದಲ್ಲಿರುವ ಆಮ್ ಆದ್ಮಿ ಪಕ್ಷವು (AAP) ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಕೆಲವು ಭರವಸೆಗಳನ್ನು (Poll Promises) ಮಂಗಳವಾರ ಘೋಷಿಸಿದೆ. ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಭರವಸೆ ನೀಡಿದೆ. ಪ್ರತಿ ತಿಂಗಳು ಪ್ರತಿಯೊಂದು ಮನೆಗೂ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿದೆ. ಜತೆಗೆ ರೈತರ ಸಾಲ ಮನ್ನಾ ಮಾಡುವುದಾಗಿಯೂ ಹೇಳಿದೆ. ಉತ್ತಮ ಗುಣಮಟ್ಟದ ಉಚಿತ ಶಿಕ್ಷಣ, ಆರೋಗ್ಯ ಸೇವೆಗಳನ್ನು ಒದಗಿಸುವುದಾಗಿಯೂ ಪಕ್ಷ ತಿಳಿಸಿದೆ. ಗುತ್ತಿಗೆ ನೌಕರರ ಕಾಯಮಾತಿ ಮಾಡಲಾಗುವುದು ಎಂದು ಪಕ್ಷ ತಿಳಿಸಿದ್ದು, ಎಲ್ಲ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದೆ.

ಇದರೊಂದಿಗೆ ಉಚಿತ ಕೊಡುಗೆ, ಜನಪ್ರಿಯ ಯೋಜನೆಗಳ ಭರವಸೆ ನೀಡುವ ಮೂಲಕ ಕರ್ನಾಟಕದಲ್ಲಿಯೂ ಖಾತೆ ತೆರೆಯುವುದು ಎಎಪಿ ಗುರಿಯಾಗಿದೆ. ದೆಹಲಿಯಲ್ಲಿ ಉಚಿತ ಗುಣಮಟ್ಟದ ಶಿಕ್ಷಣ, ವಿದ್ಯುತ್ ಇತ್ಯಾದಿ ಕೊಡುಗೆಗಳ ಮೂಲಕ ಗಮನ ಸೆಳೆದಿರುವ ಪಕ್ಷವು ಪಂಜಾಬ್​ನಲ್ಲಿಯೂ ಅದೇ ವಿಧಾನ ಅಳವಡಿಸಲು ಮುಂದಾಗಿದೆ. ಇದೀಗ ಕರ್ನಾಟಕದಲ್ಲಿಯೂ ಅದೇ ತಂತ್ರಗಾರಿಕೆಯೊಂದಿಗೆ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ.

ಪ್ರಮುಖ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್​ಗಳೂ ಸಾಲಮನ್ನಾ, ಉಚಿತ ಕೊಡುಗೆಗಳ ಭರ್ಜರಿ ಘೋಷಣೆಗಳನ್ನು ಮಾಡಿವೆ. ಅಧಿಕಾರಕ್ಕೆ ಬಂದರೆ ಪ್ರತಿ ಬಡ ಕುಟುಂಬದ ಹೆಣ್ಣುಮಕ್ಕಳಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಅನುಷ್ಠಾನಗೊಳಿಸುವುದಾಗಿ ಇತ್ತೀಚೆಗೆ ಘೋಷಿಸಿತ್ತು. ಜೆಡಿಎಸ್​ ಕೂಡ ರೈತರ ಸಾಲ ಮನ್ನಾ ಸೇರಿದಂತೆ ಹಲವು ಭರವಸೆಗಳನ್ನು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡುತ್ತಿದೆ. ಆಡಳಿತಾರೂಢ ಬಿಜೆಪಿ ಕೂಡ ಕೆಲವು ಭರವಸೆಗಳನ್ನು ನೀಡಿದೆ. ಪ್ರತಿ ಮನೆಯ ಒಬ್ಬ ಮಹಿಳೆಗೆ ತಿಂಗಳಿಗೆ 1,000ದ ರೂಪಾಯಿಯಿಂದ 2,000 ರೂಪಾಯಿವರೆಗೆ ನೀಡುವ ‘ಗೃಹಿಣಿ ಶಕ್ತಿ’ ಯೋಜನೆ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು.

ಇದನ್ನೂ ಓದಿ: Retired Top Cop Joins BJP: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಈಗ ಆಮ್ ಆದ್ಮಿ ಅಲ್ಲ, ಬಿಜೆಪಿ ಕಾರ್ಯಕರ್ತ!

ಇತ್ತೀಚೆಗಷ್ಟೇ ದಾವಣಗೆರೆಗೆ ಆಗಮಿಸಿದ್ದ ಎಎಪಿ ವರಿಷ್ಠ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಚುನಾವಣಾ ಪ್ರಚಾರ ಆರಂಭಿಸಿದ್ದು, ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮುಂದಿನ ದಿನಗಳಲ್ಲಿ ಅವರು ಕೆಲವು ಬಾರಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ.

ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದಲ್ಲಿ 10 ಸಾವಿರ ರೂ. ನಗದು ಸಿಕ್ಕಿತ್ತು. ಅವರನ್ನು ಬಂಧಿಸಲಾಯಿತು. ಆದರೆ ಇಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಹಾಗೂ ಅವರ ಮನೆಯಲ್ಲಿ ಕೋಟಿ ಕೋಟಿ ನಗದು ಸಿಕ್ಕಿದರೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಪ್ರಶ್ನಿಸಿದ್ದರು. ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಯನ್ನೂ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!