7.1 C
Munich
Wednesday, March 8, 2023

Live Score today WPL 2023 match scorecard, Women’s Premier League Gujarat Giants vs Royal Challengers Bangalore Match 6 In Kannada | GGT vs RCB Live Score, WPL 2023: ಸೋತವರ ನಡುವಿನ ಕದನಕ್ಕೆ ಕ್ಷಣಗಣನೆ

ಓದಲೇಬೇಕು

Gujarat Giants vs Royal Challengers Bangalore Live score in Kannada: ಪಾಯಿಂಟ್ ಟೇಬಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4ನೇ ಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡ 5ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

GGT vs RCB Live Score, WPL 2023: ಮುಂಬೈನ ಬ್ರಬೋರ್ನ್​ ಸ್ಟೇಡಿಯಂನಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಜೈಂಟ್ಸ್ (GGT) ತಂಡಗಳು ಮುಖಾಮುಖಿಯಾಗಲಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ಈ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ. ಮತ್ತೊಂದೆಡೆ ಗುಜರಾತ್ ಜೈಂಟ್ಸ್ ಕೂಡ ಆಡಿರುವ 2 ಪಂದ್ಯಗಳನ್ನು ಸೋತಿದೆ. ಅಂದರೆ ಈ ಪಂದ್ಯವು ಸೋತವರ ನಡುವಿನ ಕದನ. ಇದರಲ್ಲಿ ಗೆದ್ದ ತಂಡವು ಗೆಲುವಿನ ಖಾತೆ ತೆರೆಯುವುದು ಖಚಿತ.

ಸದ್ಯ ಪಾಯಿಂಟ್ ಟೇಬಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4ನೇ ಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡ 5ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಗುಜರಾತ್ ಜೈಂಟ್ಸ್ ತಂಡ: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ್ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್, ಮೋನಿಕಾ ಪಟೇಲ್, ಅಶ್ವನಿ ಕುಮಾರಿ, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕಿಲ್, ಜಾರ್ಜಿಯಾ ವೇರ್ಹ್ಯಾಮ್, ಪರುನಿಕಾ ಸಿಸೋಡಿಯಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್(ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್, ಎರಿನ್ ಬರ್ನ್ಸ್, ಕೋಮಲ್ ಝಂಜಾದ್, ಇಂದ್ರಾಣಿ ರಾಯ್, ಸಹನಾ ಪವಾರ್, ಪೂನಂ ಖೇಮ್ನಾರ್, ಆಶಾ ಶೋಬನಾ, ಡೇನ್ ವ್ಯಾನ್ ನೀಕರ್ಕ್.

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!