13.4 C
Munich
Sunday, March 19, 2023

Man forcibly kissed to woman in Bihar’s Jamui, video clip has gone viral on social media | ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ

ಓದಲೇಬೇಕು

ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಮಹಿಳೆಗೆ ಬಲವಂತವಾಗಿ ಚುಂಬಿಸಿದ ವ್ಯಕ್ತಿ

Image Credit source: Kerala Kaumudi

ಪಾಟ್ನಾ: ಇತ್ತೀಚೆಗಷ್ಟೇ ಜಮುಯಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಆರೋಗ್ಯ ಕಾರ್ಯಕರ್ತೆಗೆ ಬಲವಂತವಾಗಿ ಚುಂಬಿಸಿ ಓಡಿ ಹೋಗುತ್ತಿರುವುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಸಿಸಿಟಿವಿಯಲ್ಲಿ ಸರೆಯಾಗಿದ್ದ ವಿಡಿಯೋ ಇದೀಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆ ಈಗಾಗಲೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಗುವುದು ಎಂದು ಜಮುಯಿ ಉಪ ಎಸ್ಪಿ ರಾಕೇಶ್ ಕುಮಾರ್ ಮಂಗಳವಾರ ಟಿಒಐ ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್​​ಗಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕಾರು ಓಡಿಸಿದ ವ್ಯಕ್ತಿ, ವಿಡಿಯೋ ವೈರಲ್​​

ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ಲೈಂಗಿಕ ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!