8.4 C
Munich
Thursday, March 2, 2023

Meghalaya Election Result Conrad Sangma Calls Amit Shah For Support To Form Meghalaya Government | Meghalaya Election Result: ಅಮಿತ್ ಶಾಗೆ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕರೆ; ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಮನವಿ

ಓದಲೇಬೇಕು

ಅಮಿತ್ ಶಾ ಅವರಿಗೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕರೆ ಮಾಡಿ ಹೊಸ ಸರ್ಕಾರ ರಚನೆಗೆ ಬೆಂಬಲ ಕೋರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿದ್ದಾರೆ.

ಕಾನ್ರಾಡ್ ಸಂಗ್ಮಾ

Image Credit source: PTI

ಶಿಲ್ಲಾಂಗ್: ವಿಧಾನಸಭೆ ಚುನಾವಣೆ ಫಲಿತಾಂಶ (Meghalaya Election Result) ಬಹುತೇಕ ಅಂತಿಮಗೊಂಡ ಬೆನ್ನಲ್ಲೇ ಮೇಘಾಲಯ (Meghalaya) ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ (Conrad Sangma) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಕೋರಿದ್ದಾರೆ. ಸಂಗ್ಮಾ ನೇತೃತ್ವದ ಎನ್​ಪಿಪಿ ಬಹುಮತಕ್ಕೆ ಬೇಕಿರುವ ಸ್ಥಾನಗಳಿಗಿಂತ ಕೆಲವು ಸೀಟು ಕಡಿಮೆ ಹೊಂದಿದೆ. ಹೀಗಾಗಿ ಬಿಜೆಪಿ ಹಾಗೂ ಪಕ್ಷೇತರರ ನೆರವಿನಿಂದ ಸರ್ಕಾರ ರಚಿಸುವ ಲೆಕ್ಕಾಚಾರ ಹಾಕುತ್ತಿದೆ. ಸಂಗ್ಮಾ ಅವರ ಪಕ್ಷ 20 ಸ್ಥಾನಗಳಲ್ಲಿ ಗೆದ್ದಿರುವ ಬಗ್ಗೆ ಅಧಿಕೃತ ಘೋಷಣೆಯಾಗಿದೆ. 6 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವ ಭರವಸೆ ಹೊಂದಿದ್ದಾರೆ. ಹೀಗಾಗಿ ಸಂಗ್ಮಾ ಅವರು ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ.

60 ಸ್ಥಾನಗಳ ಮೇಘಾಲಯ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸ್ಥಾನ ಅಗತ್ಯವಿದೆ. ಒಂದು ಕ್ಷೇತ್ರದ ಮತದಾನ ತಡೆಹಿಡಿಯಲಾಗಿತ್ತು. ಯುಡಪಿ 11 ಸ್ಥಾನ, ಕಾಂಗ್ರೆಸ್ ಹಾಗೂ ಟಿಎಂಸಿ ತಲಾ 5, ಬಿಜೆಪಿ 2 ಹಾಗೂ ಪಕ್ಷೇತರರು 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಅಮಿತ್ ಶಾ ಅವರಿಗೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕರೆ ಮಾಡಿ ಹೊಸ ಸರ್ಕಾರ ರಚನೆಗೆ ಬೆಂಬಲ ಕೋರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿದ್ದಾರೆ.

ಮೇಘಾಲಯ, ತ್ರಿಪುರಾ ಹಾಗೂ ನಾಗಾಲ್ಯಾಂಡ್ ರಾಜ್ಯಗಳ ಒಟ್ಟು 180 ಸ್ಥಾನಗಳಿಗೆ ಫೆಬ್ರುವರಿ 16 ಮತ್ತು 28ರಂದು ಮತದಾನ ನಡೆದಿತ್ತು. ತ್ರಿಪುರಾ ಹಾಗೂ ನಾಗಾಲ್ಯಾಂಡ್​ಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ ಎಂದು ಎಕ್ಸಿಟ್​ಪೋಲ್ ವರದಿಗಳು ಭವಿಷ್ಯ ನುಡಿದಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!