8.4 C
Munich
Thursday, March 2, 2023

Nathan Lyon becomes most successful spinner against India | Nathan Lyon: ಲಿಯಾನ್ ಮುಂದೆ ಮಂಡಿಯೂರುವ ಟೀಮ್ ಇಂಡಿಯಾ: ಇದಕ್ಕೆ ಈ ದಾಖಲೆಯೇ ಸಾಕ್ಷಿ..!

ಓದಲೇಬೇಕು

TV9kannada Web Team | Edited By: Zahir PY

Updated on: Mar 02, 2023 | 5:22 PM

Nathan Lyon Records: ಸಾಮಾನ್ಯವಾಗಿ ಟೀಮ್ ಇಂಡಿಯಾ ಆಟಗಾರರು ಸ್ಪಿನ್ ದಾಳಿಗೆ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡುತ್ತಾರೆ. ಆದರೆ ಲಿಯಾನ್ ಸ್ಪಿನ್ ಮ್ಯಾಜಿಕ್ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡುತ್ತಾರೆ ಎಂಬುದಕ್ಕೆ ಈ ದಾಖಲೆಯೇ ಸಾಕ್ಷಿ.

Mar 02, 2023 | 5:22 PM

ಇಂದೋರ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲೂ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಸ್ಪಿನ್ ಮೋಡಿ ಮಾಡಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದ್ದ ಆಸೀಸ್ ಸ್ಪಿನ್ನರ್, ದ್ವಿತೀಯ ಇನಿಂಗ್ಸ್​​ನಲ್ಲಿ 8 ವಿಕೆಟ್ ಉರುಳಿಸಿದರು.

ಈ 11 ವಿಕೆಟ್​ಗಳೊಂದಿಗೆ ಟೀಮ್ ಇಂಡಿಯಾ ವಿರುದ್ಧದ ಅತ್ಯಂತ ಯಶಸ್ವಿ ಸ್ಪಿನ್ನರ್ ಎಂಬ ದಾಖಲೆಯನ್ನು ನಾಥನ್ ಲಿಯಾನ್ ತಮ್ಮದಾಗಿಸಿಕೊಂಡರು. ಸಾಮಾನ್ಯವಾಗಿ ಟೀಮ್ ಇಂಡಿಯಾ ಆಟಗಾರರು ಸ್ಪಿನ್ ದಾಳಿಗೆ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡುತ್ತಾರೆ. ಆದರೆ ಲಿಯಾನ್ ಸ್ಪಿನ್ ಮ್ಯಾಜಿಕ್ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡುತ್ತಾರೆ ಎಂಬುದಕ್ಕೆ ಈ ದಾಖಲೆಯೇ ಸಾಕ್ಷಿ.

ಹೌದು, ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಂತ ಯಶಸ್ವಿ ಸ್ಪಿನ್ನರ್ ಎನಿಸಿಕೊಂಡಿದ್ದು ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್. ಭಾರತದ ವಿರುದ್ಧ ಲಂಕಾ ಸ್ಪಿನ್ನರ್ 105 ವಿಕೆಟ್​ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದರು.

ಆದರೆ ಇದೀಗ ಈ ದಾಖಲೆಯನ್ನು ಮುರಿದು ನಾಥನ್ ಲಿಯಾನ್ ಮುನ್ನುಗ್ಗಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಒಟ್ಟು 108* ವಿಕೆಟ್​ಗಳನ್ನು ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಭಾರತದ ವಿರುದ್ಧದ ಅತ್ಯಂತ ಯಶಸ್ವಿ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದೆ. ಜಿಮ್ಮಿ ಭಾರತದ ವಿರುದ್ಧ 139 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ದಾಖಲೆ ಮುರಿಯುವತ್ತ ನಾಥನ್ ಲಿಯಾನ್ ಹೆಜ್ಜೆಯನ್ನಿಟ್ಟಿದ್ದಾರೆ.

ವಿಶೇಷ ಎಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದೇ ಒಂದು ನೋಬಾಲ್ ಎಸೆಯದ ವಿಶ್ವ ದಾಖಲೆ ನಾಥನ್ ಲಿಯಾನ್ ಹೆಸರಿನಲ್ಲಿದೆ. 2011 ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ನಾಥನ್ ಇದುವರೆಗೆ 5 ಸಾವಿರಕ್ಕೂ ಅಧಿಕ ಓವರ್ ಎಸೆದಿದ್ದಾರೆ. ಈ ವೇಳೆ ಒಮ್ಮೆಯೂ ಗೆರೆದಾಟಿಲ್ಲ ಎಂಬುದೇ ವಿಶೇಷ.

ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ನೋಬಾಲ್ ಎಸೆಯದೇ 100 ಟೆಸ್ಟ್ ಪಂದ್ಯವಾಡಿದ ಏಕೈಕ ಬೌಲರ್ ಎಂಬ ವಿಶ್ವ ದಾಖಲೆ ಕೂಡ ನಾಥನ್ ಲಿಯಾನ್ ಹೆಸರಿನಲ್ಲಿದೆ. ಇದೀಗ 30000 ಸಾವಿರ ಬಾಲ್​ಗಳನ್ನು ಪೂರೈಸುವ ಮೂಲಕ ಹೊಸ ಮೈಲುಗಲ್ಲನ್ನು ದಾಟಿದ್ದಾರೆ.

ಇದುವರೆಗೆ 118 ಟೆಸ್ಟ್ ಪಂದ್ಯಗಳನ್ನಾಡಿರುವ ನಾಥನ್ ಲಿಯಾನ್ 30505* ಎಸೆತಗಳಲ್ಲಿ 14897 ರನ್ ನೀಡಿದ್ದಾರೆ. ಈ ವೇಳೆ 479* ವಿಕೆಟ್​ಗಳನ್ನು ಕಬಳಿಸಿದ್ದಾರೆ.

ತಾಜಾ ಸುದ್ದಿ

Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!