ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರದಿಯನ್ನು ಸಲ್ಲಿಸುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಅನಂತನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ದಾಳಿಗಳು ನಡೆಯುತ್ತಿದ್ದವು.
ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಗಳ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಂಗಳವಾರ ಮುಂಜಾನೆ ಹಲವು ವಸತಿ ಗೃಹಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: NIA Raid: ಬಿಹಾರದಲ್ಲಿ ಪಿಎಫ್ಐ ಚಟುವಟಿಕೆ; ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಐವರು ಪಿಎಫ್ಐ ಕಾರ್ಯಕರ್ತರ ಬಂಧಿಸಿದ ಎನ್‌ಐಎ
ಭಯೋತ್ಪಾದಕ ನಿಧಿಯ ಬಗ್ಗೆ ತನಿಖಾ ಸಂಸ್ಥೆಯ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.