15.6 C
Munich
Thursday, March 23, 2023

Nobel Peace Prize: PM Modi biggest contender for Nobel Peace Prize, says Dy Leader Asle Toje | Nobel Peace Prize: ಪ್ರಧಾನಿ ನರೇಂದ್ರ ಮೋದಿ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು: ಆಸ್ಲೆ ಟೋಜೆ

ಓದಲೇಬೇಕು

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಆಸ್ಲೆ ಟೋಜೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಆಸ್ಲೆ ಟೋಜೆ ಹೇಳಿದ್ದಾರೆ.  ನಾವು ನೊಬೆಲ್ ಶಾಂತಿ ಪ್ರಶಸ್ತಿಗೆ ಹೆಚ್ಚಿನ ಸಂಖ್ಯೆಯ ಭಾರತೀಯ ನಾಮನಿರ್ದೇಶನಗಳನ್ನು ಪಡೆಯುತ್ತಿದ್ದೇವೆ. ನೊಬೆಲ್ ಶಾಂತಿ ಪ್ರಶಸ್ತಿಗೆ ಅಗತ್ಯವಿರುವ ಕೆಲಸವನ್ನು ವಿಶ್ವದ ಪ್ರತಿಯೊಬ್ಬ ನಾಯಕರು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಮೋದಿಯಂತಹ ಪ್ರಬಲ ನಾಯಕರಿಗೆ ಶಾಂತಿ ಸ್ಥಾಪಿಸುವ ಅಗಾಧ ಸಾಮರ್ಥ್ಯವಿದೆ. ಪ್ರಧಾನಿ ಮೋದಿ ಅತ್ಯಂತ ಶಕ್ತಿಶಾಲಿ ದೇಶದಿಂದ ಬಂದವರು, ಅವರನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಅವರಲ್ಲಿ ಅಪಾರವಾದ ವಿಶ್ವಾಸಾರ್ಹತೆ ಇದೆ ಎಂದು ಹೇಳಿದ್ದಾರೆ.

ಭಾರತವನ್ನು ಶಾಂತಿಯ ಪರಂಪರೆ ಎಂದು ಕರೆದ ಆಸ್ಲೆ ಟೋಜೆ, ದೇಶವು ಜಗತ್ತಿನ ಸೂಪರ್ ಪವರ್ ಆಗುವತ್ತ ಮುನ್ನಡೆದಿದೆ ಎಂದು ಹೇಳಿದರು. ಇದಲ್ಲದೆ, ಪ್ರಧಾನಿ ಮೋದಿ ಅವರು ಯುದ್ಧವನ್ನು ನಿಲ್ಲಿಸಲು ಅತ್ಯಂತ ವಿಶ್ವಾಸಾರ್ಹ ನಾಯಕರಾಗಿದ್ದಾರೆ ಮತ್ತು ಅವರು ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ ಎಂದು ಹೇಳಿದರು.

ಪ್ರಧಾನಿ ಮೋದಿಯವರ ನೀತಿಗಳಿಂದಾಗಿ ಭಾರತ ಶ್ರೀಮಂತ – ಶಕ್ತಿಶಾಲಿ ರಾಷ್ಟ್ರವಾಗುತ್ತಿದೆ ಎಂದೂ ಅವರು ಹೇಳಿದರು.
ಒಂದು ಕಡೆ ರಷ್ಯಾ ಮತ್ತು ಅಮೆರಿಕ ಎರಡೂ ಪರಮಾಣು ಯುದ್ಧದ ಬಗ್ಗೆ ಮಾತನಾಡುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಈ ದೇಶಗಳು ಭಾರತವನ್ನೊಮ್ಮೆ ನೋಡಿ ಕಲಿಯಬೇಕಿದೆ ಎಂದರು.

ಕಳೆದ ಒಂದು ವರ್ಷದಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದಂತೆ ಭದ್ರತಾ ಮಂಡಳಿಯು (UNSC) ತನ್ನ ಸಭೆಯೊಂದರಲ್ಲಿ ಶಾಂತಿಗಾಗಿ ಭಾರತದ ಪ್ರಯತ್ನಗಳನ್ನು ಶ್ಲಾಘಿಸಿತ್ತು.

ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ 2009 ರಲ್ಲಿ ಶಾಂತಿ ಪ್ರಶಸ್ತಿ ನೀಡಲಾಯಿತು.  ಅಂತಾರಾಷ್ಟ್ರೀಯ ರಾಜತಾಂತ್ರಿಕತೆಯನ್ನು ಬಲಪಡಿಸಲು ಮತ್ತು ಜನರ ನಡುವೆ ಸಹಕಾರವನ್ನು ಹೆಚ್ಚಿಸಲು ಅವರ ಪ್ರಯತ್ನಗಳಿಗಾಗಿ ಈ ಗೌರವವನ್ನು ಅವರಿಗೆ ನೀಡಲಾಯಿತು.

ಇದಲ್ಲದೆ, 2002 ರಲ್ಲಿ ಯುಎಸ್ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರಿಗೆ ಈ ಗೌರವವನ್ನು ನೀಡಲಾಯಿತು. 2012 ರಲ್ಲಿ ಯುರೋಪಿಯನ್ ಯೂನಿಯನ್, 2001 ರಲ್ಲಿ ವಿಶ್ವಸಂಸ್ಥೆ ಮತ್ತು ಅದರ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಮತ್ತು 1979 ರಲ್ಲಿ ಕಲ್ಕತ್ತಾದ ಸೇಂಟ್ ತೆರೇಸಾ ಮತ್ತು 2014 ರಲ್ಲಿ ಕೈಲಾಶ್ ಸತ್ಯಾರ್ಥಿ ಮತ್ತು ಮಲಾಲಾ ಯೂಸುಫ್ಜಾಯ್ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!