-0.3 C
Munich
Friday, March 3, 2023

Opposition Leader Siddaramaiah Slams BJP, CM Basavaraj Bommai, and Karnataka Government for Corruption | ಶಾಸಕ ಮಾಡಾಳ್​ ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿ: ಬೊಮ್ಮಾಯಿಗೆ ತಿವಿದ ಸಿದ್ದಾರಾಮಯ್ಯ

ಓದಲೇಬೇಕು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರ ಆರೋಪಕ್ಕೆ ದಾಖಲಾತಿ ಕೇಳಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಲೂಟಿ ಹೊಡೆಯುದರಲ್ಲೇ ನಿರತವಾಗಿದೆ. ನಿನ್ನೆ (ಮಾ.2) ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಟಾಂಗ್​ ಕೊಟಿದ್ದಾರೆ.

ಸಿದ್ದರಾಮಯ್ಯ (ಎಡಚಿತ್ರ) ಸಿಎಂ ಬೊಮ್ಮಾಯಿ (ಬಲಚಿತ್ರ)

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಭ್ರಷ್ಟಾಚಾರ ಆರೋಪಕ್ಕೆ ದಾಖಲಾತಿ ಕೇಳಿದ್ದಾರೆ. ಬಿಜೆಪಿ ಸರ್ಕಾರ (BJP Governemnt) ಭ್ರಷ್ಟಾಚಾರ, ಲೂಟಿ ಹೊಡೆಯುದರಲ್ಲೇ ನಿರತವಾಗಿದೆ. ನಿನ್ನೆ (ಮಾ.2) ಶಾಸಕ ಮಾಡಾಳ್​ ವಿರೂಪಾಕ್ಷಪ್ಪ (BJP MLA MAdal Virupakshappa) ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಟಾಂಗ್​ ಕೊಟಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಒಳ್ಳೆಯ ಆಡಳಿತ ಕೊಡಲಿಲ್ಲ. ಜನರ ಪರವಾಗಿ ಕೆಲಸ ಮಾಡಲಿಲ್ಲ, ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುದರಲ್ಲಿ ನಿರತರಾದರು. ಕರ್ನಾಟಕದ ಇತಿಹಾಸದಲ್ಲಿ 40% ಕಮಿಷನ್ ವಿಚಾರವಾಗಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದರೂ, ಪ್ರಧಾನಿ ಎನೂ ಕ್ರಮ ಕೈಗೊಳ್ಳಲಿಲ್ಲ. ಪ್ರಧಾನ ಮಂತ್ರಿಗಳು ಕೂಡ ಕರ್ನಾಟಕ ರಾಜ್ಯ ಸರ್ಕಾರದ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಅನ್ನೋ ಸಂದೇಶ ಜನರಿಗೆ ರವಾನೆಯಾಗಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದೆ. ಕರ್ನಾಟಕದ ಜನ ಬಿಜೆಪಿಯವರ ದೂರಾಡಳಿತದಿಂದ ಬೇಸತ್ತಿದ್ದಾರೆ. ಬಿಜೆಪಿಯವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದವರಲ್ಲ. ಆಪರೇಷನ್ ಕಮಲ ಮಾಡಿ ಶಾಸಕರನ್ನ ಕೊಂಡುಕೊಂಡು ಹಿಂಬಾಗಿಲಿನಿಂದ ಅನೈತಿಕವಾಗಿ ಸರ್ಕಾರ ರಚನೆ ಮಾಡಿದ್ದಾರೆ. 2018ರಲ್ಲಿ ಬಹುಮತ ಬಾರದಿದ್ದಕ್ಕೆ ಸಮ್ಮಿಶ್ರ ಸರ್ಕಾರ ಮಾಡಿದ್ವಿ. 30 ಸ್ಥಾನವಿದ್ದ ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ವಿ. ಅವರ ಕಾರ್ಯವೈಖರಿಯಿಂದ ಸರ್ಕಾರ ಹೋಯಿತು. ಶಾಸಕರನ್ನ ಭೇಟಿ ಮಾಡಲಿಲ್ಲ, ಹೊಟೆಲ್​​ನಲ್ಲಿ ಉಳಿದುಕೊಂಡು ಅಧಿಕಾರ ಮಾಡಿದರು. ಇದರಿಂದ ಅಧಿಕಾರವನ್ನು ಕುಮಾರಸ್ವಾಮಿ ಕಳೆದುಕೊಂಡರು. ಇದಕ್ಕೆ ಕಾಯುತ್ತಿದ್ದ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: KSDL ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ, ಸಂಕಷ್ಟ ತಂದಿಟ್ಟ ಪುತ್ರನ ದುಡ್ಡಿನ ಗಂಟು

ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಗೆ ಇಂದಿಗೆ ಒಂದು ತಿಂಗಳು

ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಮಾಡಿ ಇಂದಿಗೆ ಒಂದು ತಿಂಗಳು ಆಯ್ತು. ಫೆ.3ರಂದು ಬಸವ ಕಲ್ಯಾಣದಿಂದ ಪ್ರಜಾಧ್ವನಿ ಯಾತ್ರೆ ಪ್ರಾರಂಭ ಮಾಡಿದ್ದೇವೆ. 40 ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದೇನೆ. ಜನರ ಭಾವನೆ, ಹಂಚಿಕೆಗಳನ್ನು, ಸಲಹೆಗಳನ್ನು ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಪ್ರಜಾಧ್ವನಿ ಯಾತ್ರೆ ಮಾಡಿದ್ದೇವೆ ಹೇಳಿದ್ದಾರೆ.

ಎರಡು ಹಂತದ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ. ಜನವರಿಯಲ್ಲಿ ಜಿಲ್ಲಾಮಟ್ಟದ ಪ್ರಜಾಧ್ವನಿ ಯಾತ್ರೆ ಮುಗಿದಿದೆ. 2 ಗುಂಪುಗಳಾಗಿ ವಿಧಾನಸಭಾ ಕ್ಷೇತ್ರವಾರು ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಂದು, ನನ್ನ ನೇತೃತ್ವದಲ್ಲಿ ಒಂದು ತಂಡ ಪ್ರವಾಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಬಾರಿ ಮಹಿಳೆಯರು ಮತ್ತು ಯುವಕರು ಹೆಚ್ಚು ಹೆಚ್ಚು ಜನರು ಭಾಗವಹಿಸುತ್ತಿದ್ದಾರೆ. ನಮ್ಮ ನಿರೀಕ್ಷೆಗೆ ಮೀರಿ ಅಭೂತಪೂರ್ವ ಯಶಸ್ಸು ಕಾಣುತ್ತಿದ್ದೇವೆ. ಯಾತ್ರೆಯ ಯಶಸ್ಸು ಕಂಡಾಗ ಬಿಜೆಪಿ ಮುಂದಿನ ಚುನಾವಣೆಯಲ್ಲಿ ದೂಳಿಪಟ ಆಗುವುದು ಸಂಶಯವಿಲ್ಲ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ ಅನ್ನೋ ವಿಶ್ವಾಸ ಬಂದಿದೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಬಿರುಗಾಳಿ ಪ್ರಾರಂಭವಾಗಿದೆ. ಈ ರಾಜ್ಯದ ಜನರು ಕಾಂಗ್ರೆಸ್ ಪಕ್ಷದ ಪರವಾಗಿ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿ‌ಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!