3.5 C
Munich
Monday, March 6, 2023

PM Kisan Yojana PM Narendta Modi to distribute to farmers in Belagavi BJP meeting says Union Agriculture minister Shobha Karandlaje | PM Kisan Yojana: ಬೆಳಗಾವಿಯಲ್ಲಿ ಪ್ರಧಾನಿ ಮೋದಿಯಿಂದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ವಿತರಣೆ: ಸಚಿವೆ ಶೋಭಾ ಕರಂದ್ಲಾಜೆ ಪ್ರಕಟ

ಓದಲೇಬೇಕು

Narendra Modi: ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ.

ಬೆಳಗಾವಿಯಲ್ಲಿ ಪ್ರಧಾನಿ ಮೋದಿಯಿಂದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ವಿತರಣೆ

ಬೆಳಗಾವಿ: ಇದೇ ಫೆಬ್ರವರಿ 27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಕಿಸಾನ್ ಸಮ್ಮಾನ್ ನಿಧಿಯನ್ನು (PM Kisan Yojana) ನೇರವಾಗಿ ರೈತರ ಖಾತೆಗೆ (Beneficiary) ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು. ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ (ಫೆ. 23) ಪರಿಶೀಲಿಸಿ ಅವರು ಮಾತನಾಡಿದರು. ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು. ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು (Pradhan Mantri Kisan Samman Nidhi Yojana) ಬೆಳಗಾವಿಯ (Belagavi) ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ.

ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ; ಎಸ್.ಪಿ.ಜಿ. ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಪಿಎಂ-ಕಿಸಾನ್ ರೈತರ ಯೋಜನೆಯಾಗಿದೆ. ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ದೊಡ್ಡದು. ಆದ್ದರಿಂದ ರೈತ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು ಎಂದು ಕರಂದ್ಲಾಜೆ ತಿಳಿಸಿದರು. ಪಿಎಂ ಕಿಸಾನ್ (www.kisan.gov.in) ಭೇಟಿ ನೀಡಿ.

Also Read:

ತಡವಾದರೂ ಈ ತಿಂಗಳು ಬಿಡುಗಡೆಯಾಗುತ್ತಿದೆ ಪಿಎಂ ಕಿಸಾನ್ 13ನೇ ಕಂತಿನ ಹಣ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಪರಿಶೀಲಿಸುವ ಮಾರ್ಗ ಇಲ್ಲಿದೆ

ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು. ನಾಲ್ಕೂ ದಿಕ್ಕಿನಲ್ಲಿ ಊಟ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಮತ್ತಿತರರು ಉಪಸ್ಥಿತರಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!