2.1 C
Munich
Monday, March 27, 2023

PM Modi to inaugurate Barisu Kannada Dim Dimava cultural festival, details in Kannada | Barisu Kannada Dim Dimava: ಇಂದು ದೆಹಲಿಯಲ್ಲಿ ಬಾರಿಸು ಕನ್ನಡ ಡಿಂಡಿಮವ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಓದಲೇಬೇಕು

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆ.25) ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.25) ದೆಹಲಿಯ (Delhi) ಟಾಲ್ಕಟೋರಾ ಸ್ಟೇಡಿಯಂನಲ್ಲಿ ಸಾಯಂಕಾಲ 5 ಗಂಟೆಗೆ ‘ಬಾರಿಸು ಕನ್ನಡ ಡಿಂಡಿಮವ’ (Barisu Kannada Dim Dimava) ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿ ಕರ್ನಾಟಕ ಸಂಘದ (Delhi Karnataka Sangha) 75 ನೇ ವಾರ್ಷಿಕೋತ್ಸವದ ಎರಡು (25 ಮತ್ತು 26) ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ ಭಾರತ ಶ್ರೇಷ್ಠ ಭಾರತ’ದ (Ek Bharat Shret Bharat) ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಈ ಉತ್ಸವದ ಎರಡು ದಿನಗಳ ಆಚರಣೆಯಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶನವಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ.

ಇಂದು ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಡಿ ವೀರೇಂದ್ರ ಹೆಗ್ಗಡೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ಮುಖಂಡ ಸಿ.ಟಿ ರವಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆಬ್ರವರಿ 26 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಉಪಸ್ಥಿತರಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!