0.9 C
Munich
Saturday, February 25, 2023

PM Narendra Modi to participate in mega rod show Bidadi to Maddur and will inagurate Bangalore Mysore Expressway on March 11th | Narendra Modi: ಮಾರ್ಚ್ 11ರಂದು ಬಿಡದಿಯಿಂದ ಮದ್ದೂರು ವರೆಗೆ ಪ್ರಧಾನಿ ಮೋದಿ ಬೃಹತ್​ ರೋಡ್​ ಶೋ

ಓದಲೇಬೇಕು

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಪ್ರಧಾನಿ ಮೋದಿ ಅವರು ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಬೆಂಗಳೂರು: ಮಾರ್ಚ್​​ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅದೇ ದಿನ ಬಿಡದಿಯಿಂದ ಮದ್ದೂರಿನವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಹಳೆ ಮೈಸೂರು (Old Mysuru) ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ (BJP) ರೂಪಿಸಿರುವ ತಂತ್ರಗಾರಿಕೆಯ ಭಾಗವಾಗಿ ಈ ರೋಡ್ ಶೋ ನಡೆಯಲಿದೆ ಎನ್ನಲಾಗುತ್ತಿದೆ. ರೋಡ್ ಶೋ ಬಳಿಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಬೃಹತ್ ಸಮಾವೇಶಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯಕ್ಕೆ ಭೇಟಿಯಾಗಿ ಮೆಗಾ ಡೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜತೆಗೆ ಸಮಾವೇಶದಲ್ಲಿಯೂ ಭಾಗವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಕೂಡ ಭೇಟಿ ನೀಡುವುದು ಖಚಿತವಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಪ್ರಧಾನಿ ಮೋದಿ ಅವರು ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಆಗಮಿಸಲಿರುವ ಮೋದಿ, ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಶಿವಮೊಗ್ಗದಲ್ಲಿ ಮೋದಿ ಸಮಾವೇಶಕ್ಕೆ ಭಾರೀ ತಯಾರಿ ನಡೆದಿದೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ

ಶಿವಮೊಗ್ಗ ಕಾರ್ಯಕ್ರಮದ ನಂತರ ಬೆಳಗಾವಿಗೆ ತೆರಳಿ ಅಲ್ಲಿ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿಯಲ್ಲಿ ಮೋದಿ ಸ್ವಾಗತಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. 8 ಕಿಲೋಮೀಟರ್​ ರೋಡ್ ಶೋಗೆ ಸಿದ್ಧತೆ ನಡೆಯುತ್ತಿದ್ದು, ಶಾಸಕ ಅಭಯ ಪಾಟೀಲ್ ಅವರೇ ಖುದ್ದು ಪಕ್ಷದ ಬಾವುಟ, ಬಟ್ಟಿಂಗ್ಸ್ ಕಟ್ಟಿ ಸಿದ್ಧತೆಗೆ ಚಾಲನೆ ನೀಡಿದ್ದಾರೆ. ರೋಡ್ ಶೋ ಮಾರ್ಗದಲ್ಲಿ 600ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು 10 ಸಾವಿರ ಧ್ವಜ ಕಟ್ಟಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಅಮಿತ್ ಶಾ ಬಳ್ಳಾರಿಯ ಸಂಡೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!