1.2 C
Munich
Tuesday, March 7, 2023

PM Narendra Modi will arrive Karnataka to inaugurate sathya sai medical college | ಸತ್ಯಸಾಯಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಮಾ. 25ಕ್ಕೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮನ

ಓದಲೇಬೇಕು

ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ

Image Credit source: ANI

ಚಿಕ್ಕಬಳ್ಳಾಪುರ: ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಖಾಸಗಿ ಮೆಡಿಕಲ್ ಕಾಲೇಜು (Medical College) ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ಆಗಮಿಸಲಿದ್ದಾರೆ. ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟೂರು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಸತ್ಯಸಾಯಿ ಲೋಕಸೇವಾ ಸಂಸ್ಥೆ ಇದೆ. ಸಂಸ್ಥೆಯ ಅಧೀನದಲ್ಲಿ ಪ್ರಾಥಮಿಕ ಪ್ರೌಢ ಹಾಗೂ ಉನ್ನತ ವಿದ್ಯಾಭ್ಯಾಸದ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪುಟ್ಟಪರ್ತಿಯ ಸತ್ಯ ಸಾಯಿ ಬಾಬಾರ ಅನುಯಾಯಿಗಳು, ಭಕ್ತರು ಸಂಸ್ಥೆಯನ್ನು ನಿರ್ವಹಿಸುತ್ತಿದ್ದು, ಶ್ರೀ ಮಧುಸೂದನ್ ಸಾಯಿ, ಸಾಯಿ ಬಾಬ ಪ್ರತಿನಿಧಿಯಾಗಿ ಸಂಸ್ಥೆಗಳನ್ನು ಮುನ್ನೇಡೆಸುತ್ತಿದ್ದಾರೆ.

350 ಬೆಡ್​ಗಳ ಆಸ್ಪತ್ರೆ ಕಾರ್ಯನಿರ್ವಹಣೆ

ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮ ಗ್ರಾಮದಲ್ಲಿ ಈಗಾಗಲೇ ಸಾರ್ವಜನಿಕರಿಗೆ 350 ಬೆಡ್​ಗಳ ವಿನೂತನ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಪ್ರತಿದಿನ ಸಾವಿರಾರು ಜನ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.

350 ಕೋಟಿ ರೂಪಾಯಿಗಳಲ್ಲಿ ಮೆಡಿಕಲ್ ಕಾಲೇಜು

ಸತ್ಯಸಾಯಿ ಗ್ರಾಮದಲ್ಲಿ ವಿನೂತನ ಶೈಲಿಯಲ್ಲಿ 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿದೆ. ಕಟ್ಟಡಕ್ಕೆ ಶ್ರೀ ಸತ್ಯಸಾಯಿ ರಾಜೇಶ್ವರಿ ಕಟ್ಟಡ ಎಂದು ನಾಮಕರಣ ಮಾಡಲಾಗಿದೆ. ಮೆಡಿಕಲ್ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಇದರಿಂದ ಎಲ್ಲ ಅಂದುಕೊಂಡಂತೆ ಆದರೆ 2023-24ರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಹಾಗೂ ದಾಖಲಾತಿಗಳು ಆರಂಭವಾಗುತ್ತವೆ.

ಕಳೆದ ಕೆಲವು ತಿಂಗಳ ಹಿಂದೆ ಕೇಂದ್ರದ ಗೃಹ ಸಚಿವರಾದ ಅಮೀತ್ ಶಾ ರವರು ಆಶ್ರಮಕ್ಕೆ ಭೇಟಿ ನೀಡಿ 400 ಬೆಡ್​ಗಳ ಆಸ್ಪತ್ರೆಗೆ ಶಂಕು ಸ್ಥಾಪನೆ ಮಾಡಿದ್ದು ಆಸ್ಪತ್ರೆ ಕಾಮಗಾರಿ ಪ್ರಗತಿಯಲ್ಲಿದೆ. ಮುದ್ದೇನಹಳ್ಳಿಯಲ್ಲಿ ಕಾಲೇಜು ಆರಂಭವಾಗುವುದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರದ 1 ಹಾಗೂ ಖಾಸಗಿ 1 ಒಟ್ಟು ಎರಡು ಮೆಡಿಕಲ್ ಕಾಲೇಜುಗಳು ಆರಂಭವಾದಂತೆ ಆಗುತ್ತದೆ.

ಭೀಮಪ್ಪ ಪಾಟೀಲ್ ಟಿರ್ವಿ ಚಿಕ್ಕಬಳ್ಳಾಪುರ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!