ಫೆಬ್ರವರಿ 25 ರಂದು ನವದೆಹಲಿಯಲ್ಲಿ ನಡೆಯಲಿರುವ ದೆಹಲಿ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಪಿಎಂ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರಕ್ಕಿಳಿದಿವೆ. ಸದ್ಯ ಹೊರರಾಜ್ಯದ ಕನ್ನಡಿಗರ ಮತಗಳ ಮೇಲೆಯೂ ಬಿಜೆಪಿ ಪರೋಕ್ಷವಾಗಿ ಗಾಳ ಹಾಕಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕನ್ನಡ ಸಂಘದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಫೆಬ್ರವರಿ 25 ರಂದು ನವದೆಹಲಿಯಲ್ಲಿ ನಡೆಯಲಿರುವ ದೆಹಲಿ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಪಿಎಂ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಫೆ. 25 ರಂದು ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ. ಫೆಬ್ರವರಿ 25 ರ ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದೆ.
ಬೆಳಗಾವಿ ನಗರಕ್ಕೆ ಫೆ.27ರಂದು ಪ್ರಧಾನಿ ಮೋದಿ ಭೇಟಿ
ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಬೆಳಗಾವಿಯಲ್ಲಿ ಭಾರೀ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಹಾಗೂ ಬೆಳಗಾವಿಯಲ್ಲಿ ಮೋದಿ ರೋಡ್ ಶೋಗೆ ಬಿಜೆಪಿ ನಾಯಕರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಬೆಳಗಾವಿ ಉತ್ತರ, ದಕ್ಷಿಣ ಕ್ಷೇತ್ರದಲ್ಲಿ 8 ಕಿ.ಮೀ. ರೋಡ್ ಶೋಗೆ ಪ್ಲ್ಯಾನ್ ಆಗಿದ್ದು ರೋಡ್ ಶೋ ಮಾರ್ಗ, ಹೆಲಿಪ್ಯಾಡ್, ಕಾರ್ಯಕ್ರಮದ ಸ್ಥಳ ಸೇರಿದಂತೆ ಬೆಳಗಾವಿ ನಗರದಲ್ಲಿ ಬಿಜೆಪಿ ನಾಯಕರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೋದಿ ಭೇಟಿ ಬೆಳಗಾವಿ ಜಿಲ್ಲೆ ಬಿಜೆಪಿಗೆ ಹೊಸ ಚೈತನ್ಯ ನೀಡಲಿದೆ. ಫೆ.27ರಂದು ಕಿಸಾನ್ ಸಮ್ಮಾನ್ ಯೋಜನೆಯ ಕಂತಿನ ಹಣ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ