7.4 C
Munich
Thursday, March 9, 2023

Prime Minister Narendra Modi and Australian PM Anthony Albanese were greeted with loud cheering in Ahmedabad | IND vs AUS 4th Test: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಮೋ ಹವಾ: ಭಾರತ-ಆಸ್ಟ್ರೇಲಿಯಾ ಪ್ರಧಾನಿಗಳಿಂದ ಮೈದಾನದಲ್ಲಿ ರ‍್ಯಾಲಿ

ಓದಲೇಬೇಕು

India vs Australia 4th Test: ಇಂಡೋ- ಆಸೀಸ್ 4ನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನವೇ ಪ್ರಧಾನಿಗಳು ಮೈದಾನಕ್ಕೆ ಪ್ರವೇಶಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್​ ಕ್ಯಾಪ್​ ಹಸ್ತಾಂತರಿಸಿದರು.

PM Narendra Modi PM Anthony Albanese and Rohit Sharma

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ (Border-Gavaskar Trophy) ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಭರ್ಜರಿ ಆರಂಭ ಪಡೆದುಕೊಂಡಿದೆ. ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನವೇ ಪ್ರಧಾನಿಗಳು ಮೈದಾನಕ್ಕೆ ಪ್ರವೇಶಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್​ ಕ್ಯಾಪ್​ ಹಸ್ತಾಂತರಿಸಿದರು. ಮೋದಿ ಅವರು ನಾಯಕ ರೋಹಿತ್​ ಶರ್ಮಾರಿಗೆ ಕ್ಯಾಪ್​ ನೀಡಿದರೆ, ಆಸೀಸ್​ ನಾಯಕ ಸ್ಟೀವನ್​ ಸ್ಮಿತ್​ರಿಗೆ ಅಲ್ಬನೀಸ್ ಅವರು ಗ್ರೀನ್ ಕ್ಯಾಪ್​ ನೀಡಿದರು. ಇದೇವೇಳೇ ಇಬ್ಬರು ಪ್ರಧಾನಿಗಳು ಎರಡು ತಂಡಗಳ ಕ್ಯಾಪ್ಟನ್​ಗಳಾದ ರೋಹಿತ್​ ಶಾರ್ಮಾ ಹಾಗೂ ಸ್ಟಿವ್​ ಸ್ಮಿತ್​ ಅವರ ಕೈಗಳನ್ನ ಹಿಡಿದು ಮೇಲೆತ್ತಿ ಖುಷಿ ವ್ಯಕ್ತಪಡಿಸಿ ಶುಭಕೋರಿದರು.

ಇದನ್ನೂ ಓದಿ



ಇಷ್ಟೇ ಅಲ್ಲದೆ ಸಾಲಿನಲ್ಲಿ ನಿಂತು ಆಟಗಾರರರು ರಾಷ್ಟ್ರಗೀತೆಯನ್ನು ಹಾಡುವಾಗ ಮೋದಿಯವರು ರೋಹಿತ್​ ಶರ್ಮಾ ಪಕ್ಕದಲ್ಲೇ ನಿಂತು ರಾಷ್ಟ್ರಗೀತೆ ಹಾಡಿದರೆ, ಆಸೀಸ್​ ಪ್ರಧಾನಿ ಆಂಟೋನಿ ಕೂಡ ತಮ್ಮ ಆಟಗಾರರ ಸಾಲಿನಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು. ಇದೇ ಸಂದರ್ಭ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 75 ವರ್ಷಗಳ ಸ್ನೇಹವನ್ನು ಆಚರಿಸಲಾಯಿತು. ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಮೈದಾನದಲ್ಲಿ ವಿಶೇಷವಾಗಿ ರ‍್ಯಾಲಿ ನಡೆಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣವನ್ನ ಸುತ್ತು ಹಾಕಿ ಕ್ರಿಕೆಟ್​ ಅಭಿಮಾನಿಗಳಿಗೆ ಕೈಬೀಸಿದರು. ಸ್ಟೇಡಿಯಂನಲ್ಲಿ ಲಕ್ಷಂತಾರ ಫ್ಯಾನ್ಸ್​ ಇದಕ್ಕೆ ಸಾಕ್ಷಿಯಾದರು.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ:

ಅಂದುಕೊಂಡಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಿಶ್ರಾಂತಿಯಲ್ಲಿದ್ದ ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದು, ಮೊಹಮ್ಮದ್ ಸಿರಾಜ್ ಹೊರಗುಳಿದಿದ್ದಾರೆ. ಉಳಿದಂತೆ ಗಿಲ್ ಹಾಗೂ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರೆ, ಪೂಜಾರ, ಕೊಹ್ಲಿ, ಶ್ರೇಯಸ್, ಶ್ರೀಕರ್ ಭರತ್, ಜಡೇಜಾ, ಅಶ್ವಿನ್, ಅಕ್ಷರ್, ಶಮಿ, ಉಮೇಶ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್​ ಅವರು ನಾಯಕನಾಗಿ ಮುಂದುವರೆದಿದ್ದಾರೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್‌ಕಂಬ್, ಕ್ಯಾಮರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಟ್ ಕುನೆಮನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!